Homeಮುಖಪುಟಗೌಪ್ಯ ಮಾಹಿತಿ ಸೋರಿಕೆ ಪ್ರಕರಣ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು...

ಗೌಪ್ಯ ಮಾಹಿತಿ ಸೋರಿಕೆ ಪ್ರಕರಣ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ

- Advertisement -
- Advertisement -

ದೇಶದ ಗೌಪ್ಯತೆ ಸೋರಿಕೆ ಪ್ರಕರಣ (ಸೈಫರ್)ದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ನಿಕಟವರ್ತಿ ಮತ್ತು ಮಾಜಿ ವಿದೇಶಾಂಗ ಸಚಿವ ಮೆಹಮೂದ್ ಖುರೇಷಿ ಅವರಿಗೆ ಪಾಕಿಸ್ತಾನದ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಧಿಕೃತ ರಹಸ್ಯ ಕಾಯ್ದೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಬುಲ್ ಹಸನಾತ್ ಝುಲ್ಕರ್‌ನೈನ್ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಇಮ್ರಾನ್‌ ಖಾನ್ ವಿರುದ್ಧ ಈ ತೀರ್ಪು ನೀಡಿದ್ದಾರೆ. ಇಮ್ರಾನ್‌ ಖಾನ್‌ ಈಗಾಗಲೇ ಬೇರೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

ಏನಿದು ಸೈಫರ್ ಪ್ರಕರಣ?

ಸೈಫರ್ ಕೇಸ್ ಎಂದು ಕರೆಯಲ್ಪಡುವ ಪ್ರಕರಣವು ಇಮ್ರಾನ್‌ ಖಾನ್ ಪ್ರಧಾನಿಯಾಗಿದ್ದಾಗ ಇಸ್ಲಾಮಾಬಾದ್‌ಗೆ ವಾಷಿಂಗ್ಟನ್‌ನ ಪಾಕಿಸ್ತಾನದ ರಾಯಭಾರಿ ಕಳುಹಿಸಿದ್ದ ರಹಸ್ಯ ರಾಜತಾಂತ್ರಿಕ ಪತ್ರ ವ್ಯವಹಾರದ ಸೋರಿಕೆಗೆ ಸಂಬಂಧಿಸಿದ್ದಾಗಿದೆ. ಇದು ಇಮ್ರಾನ್‌ ಖಾನ್‌ ಅವಿಶ್ವಾಸ ಮತದಲ್ಲಿ ಅಧಿಕಾರದಿಂದ ಕೆಳಗಿಳಿಯುವ ಒಂದು ತಿಂಗಳ ಮೊದಲು, ಅಂದರೆ ಮಾರ್ಚ್ 2022 ರಲ್ಲಿ ರ್ಯಾಲಿಯಲ್ಲಿ ಕಾಣಿಸಿಕೊಂಡಿದ್ದಕ್ಕೆ ಸಂಬಂಧಿಸಿದೆ. ಇಮ್ರಾನ್ ಖಾನ್ ವೇದಿಕೆಯ ಮೇಲೆ ಕಾಣಿಸಿಕೊಂಡು, ತಮ್ಮ ವಿರುದ್ಧ ವಿದೇಶಿ ಪಿತೂರಿ ಎಂದು ಹೇಳುವ ಕಾಗದದ ತುಂಡನ್ನು ತೋರಿಸಿದ್ದರು.

ಕಳೆದ ವರ್ಷ ಆಗಸ್ಟ್‌ ತಿಂಗಳಲ್ಲಿ ತೋಷಾಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿತ್ತು. ಅವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 1 ಲಕ್ಷ ಪಾಕಿಸ್ತಾನಿ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ, ಖಾನ್‌ ಅವರನ್ನು ಅನರ್ಹಗೊಳಿಸಲಾಗಿದ್ದು, ಅವರು ಐದು ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಇಲ್ಲ ಎಂದು ಎಂದು ಹೇಳಿದೆ. ಕೋರ್ಟ್‌ ತೀರ್ಪು ಬೆನ್ನಲ್ಲೇ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಯಾವುದೇ ಶಿಕ್ಷೆಯಾಗಿಲ್ಲ, ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಶರ್ಜೀಲ್ ಇಮಾಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಟಿಎಂಸಿ ವಿರುದ್ಧ ಅವಹೇಳನಕಾರಿ ಜಾಹೀರಾತು; ಬಿಜೆಪಿ ನಡೆಯನ್ನು ಟೀಕಿಸಿದ ಸುಪ್ರೀಂಕೋರ್ಟ್‌

0
ಪಶ್ಚಿಮ ಬಂಗಾಳದ ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ "ಅವಹೇಳನಕಾರಿ" ಎಂದು ಪರಿಗಣಿಸುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಮವಾರ ಕಟುವಾಗಿ ಟೀಕಿಸಿದ ಸುಪ್ರೀಂ ಕೋರ್ಟ್, ಜಾಹೀರಾತುಗಳನ್ನು ಪ್ರಕಟಿಸದಂತೆ...