Homeಮುಖಪುಟಬಜೆಟ್ ಅಧಿವೇಶನಕ್ಕೂ ಮುನ್ನ ಎಲ್ಲಾ ವಿಪಕ್ಷ ಸಂಸದರ ಅಮಾನತು ವಾಪಸ್

ಬಜೆಟ್ ಅಧಿವೇಶನಕ್ಕೂ ಮುನ್ನ ಎಲ್ಲಾ ವಿಪಕ್ಷ ಸಂಸದರ ಅಮಾನತು ವಾಪಸ್

- Advertisement -
- Advertisement -

ಸಂಸತ್‌ನ ಬಜೆಟ್‌ ಅಧಿವೇಶನದ ಮುನ್ನಾ ದಿನ ಇಂದು (ಜ.30) 11 ರಾಜ್ಯಸಭಾ ಸದಸ್ಯರ ವಿರುದ್ದದ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲಾ ಸಂಸದರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಲೋಕಸಭೆ ಸ್ಪೀಕರ್‌ ಹಾಗೂ ರಾಜ್ಯಸಭೆಯ ಅಧ್ಯಕ್ಷರಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 2023ರಲ್ಲಿ, ಅಂದರೆ ಕಳೆದ ತಿಂಗಳು ನಡೆದ ಸಂಸತ್ತಿನ ಚಳಿಗಾಲದ ಅಧಿವೇಶನಲ್ಲಿ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟಿಸಿದ್ದಕ್ಕಾಗಿ ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 146 ಸಂಸದರನ್ನು ಅಮಾನತು ಮಾಡಲಾಗಿತ್ತು.

146 ಸಂಸದರ ಪೈಕಿ 132 ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಮಾತ್ರ ಅಮಾನತುಗೊಳಿಸಲಾಗಿತ್ತು. ಪ್ರಸ್ತುತ ಅವರ ಅಮಾನತು ಆದೇಶ ಮಾನ್ಯತೆಯಲ್ಲಿ ಇಲ್ಲ. ಇನ್ನುಳಿದ 14 ಸಂಸದರನ್ನು (ರಾಜ್ಯಸಭೆಯ 11 ಮತ್ತು ಲೋಕಸಭೆಯ 3) ಹಕ್ಕುಬಾಧ್ಯತಾ ಸಮಿತಿಗಳು ನಿರ್ಧರಿಸುವವರೆಗೆ ಅಮಾನತುಗೊಳಿಸಲಾಗಿತ್ತು.

ಲೋಕಸಭೆಯ ವಿಶೇಷಾಧಿಕಾರ ಸಮಿತಿಯು ಜನವರಿ 12ರಂದು ಮೂವರು ಲೋಕಸಭೆ ಸಂಸದರ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು. ಉಳಿದ 11 ರಾಜ್ಯಸಭಾ ಸದಸ್ಯರ ಅಮಾನತನ್ನು ಇಂದು ಹಿಂಪಡೆಯಲಾಗಿದೆ.

ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ:

ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್ತಿನ ಲೈಬ್ರರಿ ಕಟ್ಟಡದಲ್ಲಿ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಇಂದು ಸರ್ವಪಕ್ಷ ಸಭೆ ನಡೆಯಿತು. ಬಜೆಟ್ ಅಧಿವೇಶನವು ನಾಳೆ (ಜ 31, ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಲಿದೆ. ಫೆಬ್ರವರಿ 9 ರಂದು ಅಧಿವೇಶನ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಲಿದ್ದಾರೆ. ದೇಶವು ಏಪ್ರಿಲ್-ಮೇನಲ್ಲಿ ಸಾರ್ವತ್ರಿಕ ಚುನಾವಣೆ ಎದುರಿಸುವ ಸಾಧ್ಯತೆ ಇರುವ ಕಾರಣ ಈ ಬಜೆಟ್ ಅನ್ನು ‘ಮಧ್ಯಂತರ’ ಎಂದು ಪರಿಗಣಿಸಲಾಗಿದೆ. ಇದು ನರೇಂದ್ರ ಮೋದಿ ಸರ್ಕಾರ 2.0ದ ಅಂತಿಮ ಬಜೆಟ್ ಆಗಿದೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ? ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...