Homeಮುಖಪುಟಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ನಾಗರಿಕರ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ನಾಗರಿಕರ ಹತ್ಯೆ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರಿಗೆ ಬುಲೆಟ್ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಫಾಲ್ ಪಶ್ಚಿಮದ ಗಡಿಯಲ್ಲಿರುವ ಲಮ್‌ಶಾಂಗ್ ಪ್ರದೇಶದ ಕಡಂಗ್‌ಬಂಡ್ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಕೆಲವು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ನೋಂಗ್‌ತೋಂಬಮ್ ಮೈಕೆಲ್ (33) ಮತ್ತು ಮೈಸ್ನಮ್ ಖಬಾ (23) ಎಂದು ಗುರುತಿಸಲಾಗಿದೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ದಾಳಿಗೆ ಪ್ರತಿಯಾಗಿ ಶಿಬಿರದಲ್ಲಿನ ಸ್ವಯಂಸೇವಕರು ಪ್ರತಿದಾಳಿ ನಡೆಸಿದ್ದಾರೆ. ಇದರ ಪರಿಣಾಮವಾಗಿ ಗುಂಡಿನ ಚಕಮಕಿ ನಡೆದಿದೆ. ಮಹಿಳೆಯರು ಸೇರಿದಂತೆ ಹಲವು ಮಂದಿ ತಮ್ಮ ಜೀವ ರಕ್ಷಣೆಗೆ ಓಡಿಹೋಗುತ್ತಿರುವ ದೃಶ್ಯ ವೈರಲ್ ವಿಡಿಯೊದಲ್ಲಿ ಸೆರೆಯಾಗಿದೆ. ಈ ಪ್ರದೇಶಕ್ಕೆ ಹೆಚ್ಚುವರಿ ಭದ್ರತೆಯನ್ನು ವ್ಯವಸ್ಥೆ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಲಾಗುತ್ತಿದೆ.

ಕಾಂಗ್ಪೋಕ್ಪಿ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ನಡುವಿನ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ನಿಯಂತ್ರಣ ಕೊಠಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ದಾಳಿಯ ನಂತರ ಕಡಂಗ್‌ಬಂಡ್ ಮತ್ತು ನೆರೆಯ ಕೌಟ್ರುಕ್ ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಸುರಕ್ಷಿತ ಸ್ಥಳಗಳಿಗೆ ಓಡಿಹೋದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಭದ್ರತಾ ಸಿಬ್ಬಂದಿ ಪ್ರದೇಶಕ್ಕೆ ದೌಡಾಯಿಸಿದ್ದಾರೆ.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕೌಟ್ರುಕ್ ಮತ್ತು ಕಡಂಗ್‌ಬಂಡ್ ಗ್ರಾಮಗಳ ಮೇಲೆ ತೀವ್ರ ಹಾನಿಯನ್ನುಂಟುಮಾಡಿದೆ. ಇಲ್ಲಿ ಕುಕಿ ಮತ್ತು ಮೈತೈ ಸಮುದಾಯಗಳ ಗುಂಪುಗಳ ನಡುವೆ ಹಲವಾರು ಸಶಸ್ತ್ರ ಸಂಘರ್ಷಗಳು ನಡೆದಿದೆ.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು.

ಇದನ್ನು ಓದಿ: ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...