Homeಕರ್ನಾಟಕಮಲ ಹೊರುವ ಪದ್ದತಿ: 47 ಪ್ರಕರಣಗಳು ದಾಖಲು, ಒಂದರಲ್ಲಿ ಮಾತ್ರ ಶಿಕ್ಷೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಮಲ ಹೊರುವ ಪದ್ದತಿ: 47 ಪ್ರಕರಣಗಳು ದಾಖಲು, ಒಂದರಲ್ಲಿ ಮಾತ್ರ ಶಿಕ್ಷೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

- Advertisement -
- Advertisement -

ರಾಜ್ಯದಲ್ಲಿ ಮಲ ಹೊರುವ ಪದ್ದತಿ ನಿಷೇಧವಿದ್ದರೂ, 1993ರಿಂದ ಇಲ್ಲಿವರೆಗೆ ಒಟ್ಟು 47 ಪ್ರಕರಣಗಳು ದಾಖಲಾಗಿದ್ದು, 92 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಒಂದು ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದೆ. ಅದೇ ರೀತಿ ಮಲಹೊರುವ ಜಾಡಮಾಲಿಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ -2013ರ ಉಲ್ಲಂಘನೆಯಡಿ 87 ಪ್ರಕರಣ ದಾಖಲಾಗಿದ್ದು, 6 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿರುವುದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಲ ಹೊರುವ ಜಾಡಮಾಲಿಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ -2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಎಐಸಿಸಿಟಿಯುನ ಕರ್ನಾಟಕ ಘಟಕ ಹಾಗೂ ಇದೇ ವಿಚಾರವಾಗಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಹಾಗೂ ರಾಜ್ಯದಲ್ಲಿ ಮಲ ಹೊರುವ ಪದ್ದತಿ ಜೀವಂತವಾಗಿರುವ ಕುರಿತು ಮಾಧ್ಯಮ ವರದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಒಟ್ಟಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ವಿಚಾರಣೆ ನಡೆಸಿತು.

ಪ್ರಕರಣದಲ್ಲಿ ಜನವರಿ 8ರಂದು ಹೈಕೋರ್ಟ್ ನೀಡಿದ್ದ ನಿರ್ದೇಶನದಂತೆ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಎಸ್.ವಿ ಕಲಾವತಿ ಅವರ ಅನುಪಾಲನಾ ವರದಿಯನ್ನು ಸರ್ಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ನಿಷೇಧಿತ ಮಲಹೊರುವ ಪದ್ದತಿಯನ್ನು ನಿಯಂತ್ರಿಸಲು, ಮನುಷ್ಯರಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013ರ ಅನ್ನು ಸಮಪರ್ಕವಾಗಿ ಜಾರಿಗೊಳಿಸಲು ಹಾಗೂ ಶೌಚ ಗುಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡ ವೇಳೆ ಸಾವನ್ನಪ್ಪಿದವರ ಕುಟುಂಬದ ಸದಸ್ಯರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ವಿವಿಧ ಇಲಾಖೆಗಳು ಕೈಗೊಂಡ ಕ್ರಮಗಳ ಸಮಗ್ರ ಮಾಹಿತಿಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ತಿಳಿಸಿದೆ.

ವರದಿಯನ್ನು ದಾಖಲಿಸಿಕೊಂಡ ಪೀಠವು, ರಾಜ್ಯ ಸರ್ಕಾರ ಗಣನೀಯ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಆದರೆ, ಪರಿಹಾರದ ವಿಚಾರದಲ್ಲಿ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟು, ಸರ್ಕಾರದ ವರದಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ.

ವರದಿಯಲ್ಲಿ ಏನಿದೆ?

ರಾಜ್ಯದಲ್ಲಿ 1993ರಿಂದ ಇಲ್ಲಿವರೆಗೆ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವನ್ನಪ್ಪಿದ 47 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 92 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 15 ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗಿದೆ. ಒಟ್ಟು 47 ಪ್ರಕರಣಗಳಲ್ಲಿ 15 ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, 1 ಪ್ರಕರಣದಲ್ಲಿ ಶಿಕ್ಷೆಯಾಗಿದೆ. 2 ಪ್ರಕರಣಗಳಲ್ಲಿ ವರದಿ ಬಾಕಿ ಇದೆ. 4 ಪ್ರಕರಣಗಳಲ್ಲಿ ಬಿ ವರದಿ ಸಲ್ಲಿಸಲಾಗಿದೆ. 22 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಸರ್ಕಾರ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

2013ರಿಂದು ಇಲ್ಲಿಯ ತನಕ ಮಲಹೊರುವ ಜಾಡಮಾಲಿಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ -2013ರ ಅಡಿ 87 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 11 ಪ್ರಕರಣಗಳನ್ನು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗಿದೆ. 28 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದ್ದು, 6 ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ. 21 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ. 11 ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, 22 ಪ್ರಕರಣಗಳು ಸುಳ್ಳು ಪ್ರಕರಣಗಳಾಗಿವೆ ಎಂದು ವರದಿಯಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ? ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...