Homeಮುಖಪುಟಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ...

ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

- Advertisement -
- Advertisement -

ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಯ ಸಂಚಿನ ಕುರಿತು ಭಾರತ ಸರಿಯಾದ ತನಿಖೆ ನಡೆಸುವವರೆಗೂ ಭಾರತಕ್ಕೆ 31 MQ-9A ಸೀ ಗಾರ್ಡಿಯನ್‌ ಮತ್ತು ಸ್ಕೈ ಗಾರ್ಡಿಯನ್‌ ಡ್ರೋನ್‌ಗಳ ವಿತರಣೆಯನ್ನು US ಸರ್ಕಾರ ತಡೆಹಿಡಿದಿದೆ ಎಂದು The Wire ವರದಿ ಮಾಡಿದೆ.

ಪ್ರಸ್ತಾವಿತ 3 ಬಿಲಿಯನ್ ಡಾಲರ್‌ ಖರೀದಿ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಗೆ 15 ಸೀ ಗಾರ್ಡಿಯನ್ ಡ್ರೋನ್‌ಗಳನ್ನು ಮತ್ತು ವಾಯುಪಡೆಗೆ 8 ಸ್ಕೈ ಗಾರ್ಡಿಯನ್ ಡ್ರೋನ್‌ಗಳನ್ನು ರವಾನಿಸಬೇಕಿತ್ತು. ಇದಲ್ಲದೆ ಆರು ಬೋಯಿಂಗ್ P-8I ದೀರ್ಘ-ಶ್ರೇಣಿಯ ಕಡಲ ಗಸ್ತು ವಿಮಾನಗಳನ್ನು ಖರೀದಿಸುವ ಪ್ರಸ್ತಾಪಕ್ಕೆ ಕೂಡ ವಾಷಿಂಗ್ಟನ್ ತಡೆಹಿಡಿದಿದೆ. ಇವುಗಳು ಭಾರತೀಯ ನೌಕಾಪಡೆಯು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ 12 P-8I ಪೋಸಿಡಾನ್ ವಿಮಾನಗಳಿಗೆ ಪೂರಕವಾಗಿದೆ. ತಡೆಹಿಡಿಯಲಾದ ಡ್ರೋನ್ ಕುರಿತು ಭಾರತೀಯ ರಕ್ಷಣಾ ಸಚಿವಾಲಯ ಆಂತರಿಕ ಅನುಮೋದನೆಯು ಜೂನ್ 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಾಷಿಂಗ್ಟನ್‌ಗೆ ಭೇಟಿ ನೀಡುವ ಒಂದು ವಾರದ ಮೊದಲು ನೀಡಲಾಗಿತ್ತು.

ಪೋಸಿಡಾನ್ ಏರ್‌ಕ್ರಾಫ್ಟ್ ಮತ್ತು ಸೀ ಗಾರ್ಡಿಯನ್ ಡ್ರೋನ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ, ಹಿಂದೂ ಮಹಾಸಾಗರ ಇವು ಕಣ್ಗಾವಲಿನಲ್ಲಿರುತ್ತದೆ, ಅಂತರಾಷ್ಟ್ರೀಯ ಜಲ ಮಾರ್ಗಗಳನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳಿಗೆ ಪ್ರತಿಕ್ರಿಯಿಸಲು ಭಾರತೀಯ ನೌಕಾಪಡೆಗೆ ಸಾಮರ್ಥ್ಯವನ್ನು ಇವು ನೀಡುತ್ತದೆ.

ಯುಎಸ್ ಮತ್ತು ಕೆನಡಾ ದೇಶಗಳ ಪೌರತ್ವವನ್ನು ಹೊಂದಿರುವ ಪನ್ನುನ್, ನ್ಯೂಯಾರ್ಕ್ ಮೂಲದ ಖಲಿಸ್ತಾನಿ ಪರ ಕಾರ್ಯಕರ್ತ, ಈತನನ್ನು ಭಾರತ ಭಯೋತ್ಪಾದಕ ಎಂದು ಘೋಷಿಸಿತ್ತು. ಪನ್ನುನ್‌ನನ್ನು ಹತ್ಯೆ ಮಾಡುವ ಪ್ರಯತ್ನದ ಮೇಲಿನ ಕೋಪದಿಂದಾಗಿ ಯುಎಸ್ ಖರೀದಿಗೆ ತಡೆ ನೀಡಿದೆ. US ಪ್ರತಿನಿಧಿಗಳು ಮಾರಾಟವನ್ನು ಮುಂದುವರಿಸಲು ಬೇಕಾದ ಅಗತ್ಯವಾದ ಕ್ರಮಗಳನ್ನು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ.

ನಿಖಿಲ್ ಗುಪ್ತಾ ಎಂಬ ಭಾರತೀಯನ ದೋಷಾರೋಪಣೆಯ ಬಗ್ಗೆ ವಿಶೇಷವಾಗಿ ಇಂಡೋ-ಅಮೆರಿಕನ್ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ನಿಖಿಲ್‌ ಗುಪ್ತಾ ಮೇಲಿದೆ ಮತ್ತು ಈಗ ಆತ ಜೆಕ್ ರಿಪಬ್ಲಿಕ್‌ನಲ್ಲಿ ಬಂಧನದಲ್ಲಿದ್ದಾನೆ.

ಕಳೆದ ಡಿಸೆಂಬರ್‌ನಲ್ಲಿ ಪನ್ನೂನ್ ಹತ್ಯೆ ಸಂಚು ಆರೋಪದ ಕುರಿತು ಭಾರತೀಯ ಮೂಲದ ಐವರು ಯುಎಸ್ ಕಾಂಗ್ರೆಸ್ ಸದಸ್ಯರು, ಭಾರತವು ಈ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುವುದು ಮತ್ತು ಹೊಣೆಗಾರರನ್ನು ಶಿಕ್ಷಿಸುವುದು ಬಹಳ ಮುಖ್ಯ, ಇದು ಮತ್ತೆ ಸಂಭವಿಸುವುದಿಲ್ಲ ಎಂಬ ಭರವಸೆಯನ್ನು ಒದಗಿಸಬೇಕು ಎಂದು ಹೇಳಿದ್ದರು.

ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ನಲ್ಲಿ ಪನ್ನುನ್‌ನನ್ನು ಕೊಲ್ಲಲು ಗುಪ್ತಾ ಎಫ್‌ಬಿಐ ಏಜೆಂಟ್‌ಗೆ 1,00,000 ಡಾಲರ್‌ ಭರವಸೆ ನೀಡಿದ್ದರು ಎಂದು ಆರೋಪಿಸಿದ್ದಾರೆ. ಅಮೆರಿಕದ ಕೋರಿಕೆಯ ಮೇರೆಗೆ ಜೂನ್ 30 ರಂದು ಜೆಕ್ ಗಣರಾಜ್ಯದಲ್ಲಿ ಗುಪ್ತಾನನ್ನು ಬಂಧಿಸಲಾಗಿತ್ತು. ನವೆಂಬರ್ 29ರಂದು US ಫೆಡರಲ್ ಪ್ರಾಸಿಕ್ಯೂಟರ್‌ಗಳು ಗುಪ್ತಾ ವಿರುದ್ಧ ಈ ಆರೋಪ ಹೊರಿಸಿದ್ದು, ಅವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ಇಂಡೋ-ಅಮೆರಿಕನ್ ಶಾಸಕರು ಭಾರತ ಈ ಬಗ್ಗೆ ನೇರವಾಗಿ ಮತ್ತು ತ್ವರಿತವಾಗಿ ಪರಿಸ್ಥಿತಿಯನ್ನು ಪರಿಹರಿಸದಿದ್ದರೆ ಭಾರತ-ಅಮೆರಿಕ ಸಂಬಂಧಕ್ಕೆ ಗಮನಾರ್ಹವಾದ ಹಾನಿಯಾಗಲಿದೆ ಎಂದು ಎಚ್ಚರಿಸಿದ್ದರು.

ಡ್ರೋನ್ ಒಪ್ಪಂದಕ್ಕೆ ವಿಳಂಬವಾದ ಅನುಮೋದನೆಗಳ ಕುರಿತು ಕಾಮೆಂಟ್‌ಗಳಿಗಾಗಿ ಸಂಪರ್ಕಿಸಿದಾಗ, ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್, ನಾವು ಔಪಚಾರಿಕವಾಗಿ ಯುಎಸ್ ಕಾಂಗ್ರೆಸ್‌ಗೆ ಸೂಚಿಸುವವರೆಗೆ ನಾವು ಶಸ್ತ್ರಾಸ್ತ್ರ ಮಾರಾಟದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತೀಯ ನೌಕಾಪಡೆ ಮತ್ತು ಭಾರತದ ರಕ್ಷಣಾ ಸಚಿವಾಲಯವನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಅಮೆರಿಕ ಬಾಂಧವ್ಯದ ಮೇಲೆ  ಪನ್ನೂನ್‌ ಹತ್ಯೆ ಸಂಚು ವಿಷಯ ಪ್ರಭಾವವನ್ನು ಬೀರುತ್ತದೆ ಎಂಬುವುದನ್ನು ಅಲ್ಲಗೆಳೆದಿದ್ದರು. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ ಎಂದು ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದ್ದರು.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ರಾಹುಲ್‌ ಗಾಂಧಿಯ ಕಾರಿನ ಮೇಲೆ ಕಲ್ಲು ತೂರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...