Homeಮುಖಪುಟಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುನ್ನೆಲೆಗೆ ಬಂದ ಅಸಂವಿಧಾನಿಕ 'ಸಿಎಎ': ತಮಿಳುನಾಡಿನ ಜನರಿಗೆ ಅಭಯ ನೀಡಿದ ಸ್ಟಾಲಿನ್

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುನ್ನೆಲೆಗೆ ಬಂದ ಅಸಂವಿಧಾನಿಕ ‘ಸಿಎಎ’: ತಮಿಳುನಾಡಿನ ಜನರಿಗೆ ಅಭಯ ನೀಡಿದ ಸ್ಟಾಲಿನ್

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಅಸಂವಿಧಾನಿಕ ಸಿಎಎ ಕಾಯ್ದೆ ಮತ್ತೆ ಮುನ್ನೆಲೆಗೆ ಬಂದಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡಿನಲ್ಲಿ ಎಂದಿಗೂ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬುಧವಾರ ಹೇಳಿದ್ದಾರೆ. ಈ ಕಾಯ್ದೆ ಮುಸ್ಲಿಮರು ಮತ್ತು ಶ್ರೀಲಂಕಾ ತಮಿಳರ ವಿರುದ್ಧವಾಗಿದೆ ಎಂದು  ಹೇಳಿದ್ದಾರೆ.

ಒಂದು ವಾರದಲ್ಲಿ ದೇಶದಾದ್ಯಂತ ಸಿಎಎ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂಬ ಕೇಂದ್ರ ಸಚಿವ ಸಂತಾನು ಠಾಕೂರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಸ್ಟಾಲಿನ್ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡಿಗೆ ಕಾಲಿಡಲು ನಾವು ಬಿಡುವುದಿಲ್ಲ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಎಂ ಕೆ ಸ್ಟಾಲಿನ್ ಅವರು ಬಿಜೆಪಿಯ ಮಿತ್ರಪಕ್ಷವಾಗಿದ್ದ ಎಐಎಡಿಎಂಕೆಯನ್ನು ರಾಜ್ಯಸಭೆಯಲ್ಲಿ ಸಿಎಎ ಮಸೂದೆಯನ್ನು ಬೆಂಬಲಿಸಿದ್ದಕ್ಕಾಗಿ ಟೀಕಿಸಿದ್ದು, ತಮಿಳುನಾಡಿನಲ್ಲಿ ಡಿಎಂಕೆ ವಿರೋಧ ಪಕ್ಷದಲ್ಲಿದ್ದಾಗ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿತ್ತು. ಡಿಎಂಕೆ ಸಿಎಎ ಅನುಷ್ಠಾನದ ವಿರುದ್ಧ 20 ಮಿಲಿಯನ್ ಸಹಿಗಳನ್ನು ಸಂಗ್ರಹಿಸಿತ್ತು ಮತ್ತು ಅದನ್ನು ಅಂದಿನ ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿತ್ತು. ನಾವು 2021ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ, ಸಿಎಎ ಹಿಂಪಡೆಯಲು ಒತ್ತಾಯಿಸಿ ನಾವು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ್ದೇವೆ. ಡಿಎಂಕೆ ಸರ್ಕಾರವು ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಧಾರ್ಮಿಕ ಸಾಮರಸ್ಯಕ್ಕೆ ವಿರುದ್ಧವಾಗಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದು, ಅದನ್ನು ಎಐಎಡಿಎಂಕೆಯ ಬೆಂಬಲಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಯನ್ನು ಎಐಎಡಿಎಂಕೆ ಬೆಂಬಲಿಸಿರದಿದ್ದರೆ ಅದು ಕಾನೂನಾಗುತ್ತಿರಲಿಲ್ಲ. ಶಾಸನವು ಶ್ರೀಲಂಕಾ ನಿರಾಶ್ರಿತರು ಮತ್ತು ಮುಸ್ಲಿಮರ ವಿರುದ್ಧ ತಾರತಮ್ಯವನ್ನುಂಟು ಮಾಡುತ್ತದೆ ಎಂದು ಸ್ಟ್ಯಾಲಿನ್‌ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಎಐಎಡಿಎಂಕೆ ಬಿಜೆಪಿ ಮೈತ್ರಿಕೂಟವನ್ನು ತೊರೆದಿತ್ತು. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಸ್ಟಾಲಿನ್‌ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಬಿಜೆಪಿಯನ್ನು ಡಿಎಂಕೆ ಕೇವಲ ಬಾಯಿ ಮಾತಿನಲ್ಲಿ ಮಾತ್ರ ವಿರೋಧಿಸುತ್ತಿದೆ. ಸಿಎಎ ಅಲ್ಪಸಂಖ್ಯಾತರ ಮೇಲೆ ಪ್ರಭಾವ ಬೀರಲು ಎಐಎಡಿಎಂಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರ ಹೇಳಿಕೆಯಲ್ಲೇನಿತ್ತು?

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ, ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದರು.

ಏನಿದು ಸಿಎಎ:

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಭಾರತದ ಸಂವಿಧಾನದಲ್ಲಿ ಅವಕಾಶ ಇಲ್ಲ, ಆದ್ದರಿಂದ ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ವರರಿಲ್ಲದೆ ನೂರಾರು ವಧುಗಳ ಸಾಮೂಹಿಕ ವಿವಾಹ: ಉತ್ತರಪ್ರದೇಶದ ಮ್ಯಾರೇಜ್‌ ಸ್ಕೀಂ ಹಗರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...