Homeಮುಖಪುಟಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ದೂರು ನೀಡಿದರೂ ಎಫ್‌ಐಆರ್‌ ದಾಖಲಿಸದ ಪೊಲೀಸರು

- Advertisement -
- Advertisement -

ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ನಡೆಸುತ್ತಿರುವ ಪ್ರಾಥಮಿಕ ಶಾಲೆಯೊಂದರ ಮೂವರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕಳೆದ ಎರಡು ವರ್ಷಗಳಿಂದ ಶಾಲೆಯ ಆವರಣದ ಹೊರಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ 8, 10 ಮತ್ತು 12 ವರ್ಷ ವಯಸ್ಸಿನ ಹುಡುಗಿಯರನ್ನು ಅವರದ್ದೇ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ 9 ವರ್ಷದ ಹುಡುಗ ಅಪರಿಚಿತ ವ್ಯಕ್ತಿಯ ಬಳಿಗೆ ಕರೆದೊಯ್ದಿದ್ದಾನೆ. ಜನವರಿ 23 ರಿಂದ ತಿರುವನ್ಮಿಯೂರ್ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರೂ, ಜನವರಿ 31 ರವರೆಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

9 ವರ್ಷದ ಬಾಲಕ ಇತ್ತೀಚೆಗೆ ನಾಲ್ಕನೇ ಹುಡುಗಿಯನ್ನೂ ಅಪರಿಚಿತ ವ್ಯಕ್ತಿ ಬಳಿ ಕರೆದೊಯ್ದಿದ್ದ. ಆದರೆ, ಆಕೆ ಆತನ ಕೈಯಿಂದ ತಪ್ಪಿಸಿಕೊಂಡು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಮೂವರು ಸಂತ್ರಸ್ತ ಬಾಲಕಿಯರನ್ನು ವಿಚಾರಿಸಿದಾಗ, ಮೊದಲು ಅವರು ಮಾಹಿತಿ ನೀಡಿರಲಿಲ್ಲ. ಬಳಿಕ ನಡೆದಿರುವ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆರೋಪಿ ಬಾಲಕಿಯರಿಗೆ ಅವರನ್ನು ಮತ್ತು ಅವರ ಕುಟುಂಬಸ್ಥರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕಾರಣಕ್ಕೆ ಅವರು ದೌರ್ಜನ್ಯದ ಬಗ್ಗೆ ಯಾರಿಗೂ ತಿಳಿಸಿಲ್ಲ ಎಂದು ವರದಿ ತಿಳಿಸಿದೆ.

ಒಬ್ಬ ಬಾಲಕಿಯ ಪೋಷಕರು ಜನವರಿ 23 ರಂದು ಪೊಲೀಸರನ್ನು ಸಂಪರ್ಕಿಸಿ ಲಿಖಿತವಾಗಿ ದೂರು ನೀಡಿದ್ದಾರೆ. ಆದರೆ, ದೂರಿನ ಪ್ರತಿಗೆ ಸಹಿ ಹಾಕಲು ಅವರು ಹೆದರುತ್ತಿದ್ದರು ಎಂದು ನ್ಯೂಸ್‌ ಮಿನಿಟ್ ಹೇಳಿದೆ. ಬಾಲಕಿಯೊಬ್ಬಳ ಪೋಷಕರು ದೂರು ದಾಖಲಿಸಿದ ಬಳಿಕ, ಬಾಲಕಿಯರನ್ನು ಆರೋಪಿಯ ಬಳಿಗೆ ಕರೆದೊಯ್ಯುತ್ತಿದ್ದ ಒಂಬತ್ತು ವರ್ಷದ ಬಾಲಕ ಮತ್ತು ಆತನ ತಾಯಿಯನ್ನು ತಿರುವನ್ಮಿಯೂರ್ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಬಾಲಕನನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು ಆತನನ್ನು ಕೂಡಿ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾರಂತೆ. ಬಾಲ ನ್ಯಾಯ ಮಂಡಳಿಯ ಮುಂದೆ ಬಾಲಕನನ್ನು ಹಾಜರುಪಡಿಸಬೇಕಾದ ಪೊಲೀಸರು, ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಹೋರಾಟಗಾರ ದೇವನೇಯನ್ ಹೇಳಿದ್ದಾರೆ.

ಬಾಲಕಿಯರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಲಿಖಿತ ದೂರು ನೀಡದ ಕಾರಣ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿರುವನ್ಮಿಯೂರ್ ಪೊಲೀಸ್ ಠಾಣೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಪ್ರಸ್ತುತ ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿದ್ದು, ಎಫ್‌ಐಆರ್ ದಾಖಲಿಸಲು ಪೊಲೀಸರು ಅವರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಶಾಲೆಯ ಸಿಬ್ಬಂದಿ ಸಂತ್ರಸ್ತ ಬಾಲಕಿಯರೊಂದಿಗೆ ಮಾತನಾಡಿದ್ದಾರೆ. ಮಕ್ಕಳ ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಶಾಲೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಜಿಸಿಸಿಯ ಉಪ ಆಯುಕ್ತ (ಶಿಕ್ಷಣ) ಶರಣ್ಯ ಆರಿ ಹೇಳಿದ್ದಾಗಿ ನ್ಯೂಸ್‌ ಮಿನಿಟ್ ತಿಳಿಸಿದೆ.

ಇನ್ನೂ ಎಫ್‌ಐಆರ್ ದಾಖಲಿಸದಿರುವ ಪೊಲೀಸರ ಕ್ರಮವು ಅಪರಾಧವಾಗಿದೆ. ಏಕೆಂದರೆ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆ (ಪೋಕ್ಸೊ) ಕಾಯಿದೆಯ ಸೆಕ್ಷನ್ 19 ಕಡ್ಡಾಯವಾಗಿ ಎಫ್‌ಐಆರ್‌ ದಾಖಲಿಸುವಂತೆ ಹೇಳುತ್ತದೆ. ಪೊಲೀಸರು ಮಾಡಿರುವ ತಪ್ಪಿಗೆ ಅವರು ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ಮಕ್ಕಳ ಕಲ್ಯಾಣ ಸಮಿತಿಯ ಮಧ್ಯಪ್ರವೇಶವಿಲ್ಲದೆ ಪೊಲೀಸರು ಎಫ್‌ಐಆರ್ ದಾಖಲಿಸಬಹುದು ಎಂದು ದೇವನೇಯನ್ ತಿಳಿಸಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರವಿದೆ. ಅವರು ಕೂಡಲೇ ಎಫ್‌ಐಆರ್ ದಾಖಲಿಸಿ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಿತ್ತು ಎಂದು ದೇವನೇಯನ್ ಟೀಕಿಸಿದ್ದಾರೆ. ಡಿಎಂಕೆ ಶಾಸಕ ಐ ಕರುಣಾನಿಧಿ ಅವರ ಪುತ್ರ ಮತ್ತು ಸೊಸೆ ದಲಿತ ಬಾಲಕಿಯ ಮೇಲೆ ದೈಹಿಕವಾಗಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಉಲ್ಲೇಖಿಸಿದ ಅವರು “ತಿರುವನ್ಮಿಯೂರ್ ಪೊಲೀಸರು ಈ ರೀತಿಯ ಪ್ರಕರಣವನ್ನು ನಿರ್ಲಕ್ಷ್ಯದಿಂದ ನಿರ್ವಹಿಸುತ್ತಿರುವುದು ಇದು ಎರಡನೇ ಬಾರಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...