Homeಮುಖಪುಟಮಹರಾಷ್ಟ್ರ: ಸಿಎಂ ಶಿಂಧೆ ಆಪ್ತನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಬಿಜೆಪಿ ಶಾಸಕ

ಮಹರಾಷ್ಟ್ರ: ಸಿಎಂ ಶಿಂಧೆ ಆಪ್ತನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಬಿಜೆಪಿ ಶಾಸಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮಹರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಪ್ತ ಮತ್ತು ಶಿಂಧೆ ನೇತೃತ್ವದ ಶಿವಸೇನೆಯ ನಾಯಕನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕನನ್ನು ಬಂಧಿಸಲಾಗಿದೆ.

ಶುಕ್ರವಾರ ರಾತ್ರಿ ಉಲ್ಲಾಸ್‌ನಗರ ಪ್ರದೇಶದ ಹಿಲ್‌ಲೈನ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್‌ನ ಕೊಠಡಿಯೊಳಗೆ ಕಲ್ಯಾಣ್‌ ಕ್ಷೇತ್ರದ ಶಿವಸೇನಾ(ಶಿಂಧೆ ಬಣ) ಮುಖ್ಯಸ್ಥ ಮಹೇಶ್ ಗಾಯಕ್ವಾಡ್ ಮೇಲೆ ಕಲ್ಯಾಣ್ ಕ್ಷೇತ್ರದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಗುಂಡು ಹಾರಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ದತ್ತಾತ್ರ್ಯ ಶಿಂಧೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹೇಶ್ ಗಾಯಕ್ವಾಡ್ ಮತ್ತು ಗಣಪತ್ ಗಾಯಕ್ವಾಡ್ ನಡುವೆ ಭೂ ವಿವಾದವಿತ್ತು. ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ಬಂದಿದ್ದರು, ಆದರೆ ಗಣಪತ್ ಗಾಯಕ್ವಾಡ್‌ ಮಾತುಕತೆಯ ಸಮಯದಲ್ಲಿ ಮಹೇಶ್ ಗಾಯಕ್ವಾಡ್ ಮತ್ತು ಅವರ ಸಹಚರರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಡಿಸಿಪಿ ಪಠಾರೆ ಹೇಳಿದ್ದಾರೆ.

ಘಟನೆಯ ನಂತರ ಬಂಧಿತರಾಗಿರುವ ಗಣಪತ್ ಗಾಯಕ್ವಾಡ್ ಅವರು ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿ, ಹೌದು, ನಾನೇ ಗುಂಡು ಹಾರಿಸಿದೆ. ನನಗೆ ಯಾವುದೇ ವಿಷಾದವಿಲ್ಲ. ಪೊಲೀಸ್ ಠಾಣೆಯೊಳಗೆ ಪೊಲೀಸರ ಮುಂದೆಯೇ ನನ್ನ ಮಗನಿಗೆ ಥಳಿಸಿದರೆ ನಾನೇನು ಮಾಡುತ್ತೇನೆ? ಐದು ಸುತ್ತು ಗುಂಡು ಹಾರಿಸಿದ್ದೇನೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಅಪರಾಧಿಗಳ ಸಾಮ್ರಾಜ್ಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಶಿಂಧೆ ಸಾಹೇಬ್, ಉದ್ಧವ್ ಠಾಕ್ರೆ ಸಾಹೇಬ್‌ಗೆ ದ್ರೋಹ ಮಾಡಿದ್ದಾರೆ, ಅವರು ಬಿಜೆಪಿಗೂ ದ್ರೋಹ ಮಾಡುತ್ತಾರೆ. ಮಹಾರಾಷ್ಟ್ರದ ಒಳಿತಿಗೆ ಶಿಂಧೆ ರಾಜೀನಾಮೆ ನೀಡಬೇಕು. ದೇವೇಂದ್ರ ಫಡ್ನವೀಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದು ನನ್ನ ವಿನಮ್ರ ವಿನಂತಿ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಮಹೇಶ್ ಗಾಯಕ್ವಾಡ್ ಅವರನ್ನು ಥಾಣೆ ನಗರದ ಖಾಸಗಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನೀಡಲಾಗಿದೆ ಎಂದು ಶಿವಸೇನೆಯ ಕಲ್ಯಾಣ್ ಉಸ್ತುವಾರಿ ಗೋಪಾಲ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ಗಣಪತ್ ಗಾಯಕ್‌ವಾಡ್ ಅವರಲ್ಲದೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ 307 (ಕೊಲೆ ಯತ್ನ) ಮತ್ತು 120 ಬಿ (ಅಪರಾಧ ಸಂಚು) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಗೃಹ ಖಾತೆಯನ್ನು ಹೊಂದಿರುವ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್   ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಯಾರೂ ಕೂಡ ಕಾನೂನು ಮತ್ತು ಸುವ್ಯವಸ್ಥೆಯನ್ನು ತನ್ನ ಕೈಗೆ ತೆಗೆದುಕೊಳ್ಳಬಾರದು ಎಂದು ಎನ್‌ಸಿಪಿ ನಾಯಕ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರವನ್ನು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಟೀಕಿಸಿದ್ದು, ಪೊಲೀಸ್ ಠಾಣೆಯೊಳಗೆ ಬಿಜೆಪಿ ಶಾಸಕ ಗುಂಡಿನ ದಾಳಿ ನಡೆಸಿದ್ದು, ಗುಂಡು ತಗುಲಿದ ವ್ಯಕ್ತಿ ಮಾಜಿ ಕಾರ್ಪೋರೇಟರ್ ಮತ್ತು ಸಿಎಂ ಆಪ್ತ. ಆರೋಪಿ ಶಾಸಕರ ಪಕ್ಷವೂ ಅಧಿಕಾರದಲ್ಲಿದೆ. ಇವರಿಗೆ ಕಾನೂನಿನ ಭಯವಿಲ್ಲ. ಕಾನೂನು ಸುವ್ಯವಸ್ತೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಉದ್ಧವ್ ಬಣದ ವಕ್ತಾರ ಆನಂದ್ ದುಬೆ ಹೇಳಿದ್ದಾರೆ. ಈ ಬಗ್ಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ, ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಅವರು ಸೋಮವಾರ ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದ್ದರೆ, ರಾಜ್ಯದಲ್ಲಿ ಗೂಂಡಾಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಹೇಳಿದ್ದಾರೆ.

ಇದನ್ನು ಓದಿ: ನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...