Homeಕರ್ನಾಟಕ'ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ'ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

‘ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ’ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

- Advertisement -
- Advertisement -

ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಹಿರಿಯ ಸಾಹಿತಿ ಕೆ.ವಿ. ನಾರಾಯಣ ತಿಳಿಸಿದರು.

ಅವರು ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬುತ್ತಿರುವ ನೆನಪಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ – 50′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼವೈಚಾರಿಕ ದೃಷ್ಟಿʼ ಮತ್ತು ʼವಿಜ್ಞಾನ ಬುದ್ದಿʼ ಎಂಬ ಎರಡು ಪದಗಳನ್ನು ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಅತಿಯಾಗಿ ಬಳಸಿದ್ದರು. ಹಲವು ಬಾರಿ ಇದನ್ನ ಸಂಸ್ಕೃತಿ ಕ್ರಾಂತಿ, ವಿಚಾರ ಕ್ರಾಂತಿ ಎಂದೂ ಹೇಳಿದ್ದಿದೆ. ಆದರೆ ರಾಜಕೀಯ ಅಥವಾ ಆರ್ಥಿಕ ಕ್ರಾಂತಿ ಎಂಬ ಪದಗಳನ್ನು ಕುವೆಂಪು ಅವರು ಬಳಸಿಲ್ಲ. ಸಾಂಸ್ಕೃತಿಕ ಮತ್ತು ವೈಚಾರಿಕ ಕ್ರಾಂತಿಯಿಂದಲೇ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ಕುವೆಂಪು ಅವರು ನಂಬಿದ್ದರು. ನಾನು ಬದಲಾದರೆ ಸಮಾಜ ಬದಲಿಸಬಹುದು ಎಂಬುದು ಕುವೆಂಪು ಅವರ ಒಟ್ಟು ಸಂದೇಶದ ಸಾರ. ಮೌಢ್ಯ ಮತ್ತು ಪುರೋಹಿತಶಾಹಿ ಇವೆರಡು ಸಮಾಜದ ಸಮಸ್ಯೆಗಳಿಗೆ ಮೂಲ ಕಾರಣ ಎಂಬುದನ್ನು ಕುವೆಂಪು ಅವರು ಗ್ರಹಿಸಿದ್ದರು’ ಎಂದು ಕೆ.ವಿ. ನಾರಾಯಣ ಹೇಳಿದರು.

ಕುಮಾರಸ್ವಾಮಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ: ಎಲ್‌. ಎನ್.‌ ಮುಕುಂದರಾಜ್

‘ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಚಿಂತಕರಾದ ಎಲ್. ಎನ್. ಮುಕುಂದರಾಜ್ ಅವರು, ‘ಕುವೆಂಪು ಅವರು 50 ವರ್ಷಗಳ ಹಿಂದೆ ಇದೇ ಸಭಾಂಗಣದಲ್ಲಿ ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಭಾಷಣ ಮಾಡುವಾಗ ʼಓ ಬನ್ನಿ ಸೋದರರೆ… ಬೇಗ ಬನ್ನಿʼ ಎಂಬ ಪದ್ಯ ಓದಿದ್ದರು. ಇಂದು ನಮಗೆ ವೈಚಾರಿಕ ಮತ್ತು ಸಾಂಸ್ಕೃತಿಕ ಕ್ರಾಂತಿಗಳೆರಡೂ ಮುಖ್ಯವಾಗಿವೆ’ ಎಂದರು.

‘ನಾಲ್ವಡಿಯವರು ಜಾರಿಗೆ ತಂದ ಮೀಸಲಾತಿಯಿಂದ ನಾವು ವಿದ್ಯೆ ಪಡೆದಿದ್ದೇವೆ. ಆದರೂ, ಶೂದ್ರರನ್ನು ತುಳಿಯುವ ಕೆಲಸ ಇಂದೂ ನಡೆಯುತ್ತಿದೆ. ರಕ್ತಪಾತದ ಮೂಲಕ ಬಸವಾದಿ ಶರಣರನ್ನು ಕೊಲ್ಲಲಾಯಿತು. ಶೂದ್ರರ ಪರವಿದ್ದ ಗಾಂಧಿಯವರನ್ನೂ ಕೊಂದರು. ಆದರೆ, ಕುವೆಂಪುರವರು ರಕ್ತಕ್ರಾಂತಿಯ ಬದಲಾಗಿ ವಿಚಾರ ಕ್ರಾಂತಿಗೆ ಮತ್ತು ಸಾಂಸ್ಕೃತಿಕ ಕ್ರಾಂತಿಗೆ ಕರೆ ನೀಡಿದರು’ ಎಂದು ತಿಳಿಸಿದರು.

‘ಮಂಡ್ಯದ ಕರೆಗೋಡಿನಲ್ಲಿ ನಡೆದಿದ್ದು ತಾಯಂದಿರು ತಲೆತಗ್ಗಿಸುವ ಕೆಲಸ. ತಮ್ಮ ಮಕ್ಕಳು ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಎಲ್ಲ ತಾಯಂದಿರೂ ಬಯಸುತ್ತಾರೆ. ಕೇಸರಿ ಶಾಲು ಹಾಕೊಂಡು ಕೇಸು ಹಾಕಿಸಿಕೊಳ್ಳಲು ಅಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ. ಕನ್ನಡದ ಪರವಿದ್ದ ಪಕ್ಷ ಇಂದು ಕೋಮುವಾದಿಗಳೊಂದಿಗೆ ಸೇರಿ ಹಾಳಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು ಸಂದೇಶದ ಕೆಲವು ಸಾಲುಗಳನ್ನ ಓದುವುದರ ಮೂಲಕ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿದರು. ʼಯುವ ಸ್ಪಂಧನʼ ಗೋಷ್ಠಿಯಲ್ಲಿ ಭಾಗವಹಿಸಿದ್ದ ನಟ ಡಾಲಿ ಧನಂಜಯ್ ಕುವೆಂಪು ಅವರ ಭಾಷಣದ ಕೆಲವು ಸಾಲುಗಳನ್ನು ಓದಿದರು. ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ. ಮುಸ್ತಫಾ ಕೆ.ಎಚ್., ಮಹೇಶ ಸಿ. ಮತ್ತು ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ ಯುವಸ್ಪಂಧನ ಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...