Homeಮುಖಪುಟಭಾರತ್ ಜೋಡೋ ನ್ಯಾಯ್ ಯಾತ್ರೆ: 'ಆಹ್ವಾನವಿಲ್ಲ' ಎಂಬ ಅಖಿಲೇಶ್ ಆರೋಪಕ್ಕೆ ಕಾಂಗ್ರೆಸ್‌ ಪ್ರತಿಕ್ರಿಯೆ

ಭಾರತ್ ಜೋಡೋ ನ್ಯಾಯ್ ಯಾತ್ರೆ: ‘ಆಹ್ವಾನವಿಲ್ಲ’ ಎಂಬ ಅಖಿಲೇಶ್ ಆರೋಪಕ್ಕೆ ಕಾಂಗ್ರೆಸ್‌ ಪ್ರತಿಕ್ರಿಯೆ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಕುರಿತು ವಿರೋಧ ಪಕ್ಷಗಳು ಆಂತರಿಕ ಸವಾಲುಗಳನ್ನು ಎದುರಿಸುತ್ತಿರುವಾಗಲೇ, ‘ಇಂಡಿಯಾ’ ಬ್ಲಾಕ್ ಮೈತ್ರಿಕೂಟದ ಪ್ರಮುಖ ಪಾಲುದಾರರ ಪಕ್ಷವಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಉತ್ತರ ಪ್ರದೇಶದ ಕಾರ್ಯಕ್ರಮಗಳು ಇನ್ನೂ ಅಂತಿಮವಾಗಿಲ್ಲ ಎಂದು ಹೇಳಿದೆ.

ಯಾತ್ರೆಯು ಉತ್ತರ ಪ್ರದೇಶಕ್ಕೆ ಪ್ರವೇಶಿಸಿದಾಗ ತಾವು ಭಾಗವಹಿಸುವ ಬಗ್ಗೆ ಕೇಳಿದಾಗ, ‘ರಾಜ್ಯದಲ್ಲಿ ಹಲವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ, ನಮಗೆ ಆಹ್ವಾನವಿಲ್ಲ’ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆಯ ಮುಂದುವರಿದ ಭಾಗವು ಮಣಿಪುರದಿಂದ ಜನವರಿಯಲ್ಲಿ ಪ್ರಾರಂಭವಾಗಿದ್ದು, ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. ಪ್ರಸ್ತುತ ಯಾತ್ರೆಯು ಬಿಹಾರ ದಾಟಿ ಜಾರ್ಖಂಡ್‌ನಲ್ಲಿದೆ. ಈಗಾಗಲೇ ಐದು ರಾಜ್ಯಗಳಲ್ಲಿ ಯಾತ್ರೆ ಸಂಚರಿಸಿದೆ.

ಅಖಿಲೇಶ್ ಯಾದವ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಸ್ಪಷ್ಟನೆ ನೀಡಲು ಮುಂದಾಗಿದೆ. ಯಾತ್ರೆಯ ಮಾರ್ಗವು ಇನ್ನೂ ಅಂತಿಮಗೊಂಡಿಲ್ಲ, ಮೈತ್ರಿ ಪಾಲುದಾರರನ್ನು ಆಹ್ವಾನಿಸಲು ಪಕ್ಷ ಮುಕ್ತವಾಗಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

‘ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಗಾಗಿ ವಿವರವಾದ ಮಾರ್ಗ ಮತ್ತು ಕಾರ್ಯಕ್ರಮವನ್ನು ಸಿದ್ಧಪಡಿಸಲಾಗುತ್ತಿದೆ. ಒಂದು ಅಥವಾ ಎರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು’ ಎಂದು ಜೈರಾಮ್ ರಮೇಶ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ಅಂತಿಮವಾದ ನಂತರ, ಕಾರ್ಯಕ್ರಮದ ವಿವರಗಳನ್ನು ಇಂಡಿಯಾ ಮೈತ್ರಿಕೂಟದ ಘಟಕ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುವುದು. ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಅಖಿಲೇಶ್ ಅವರ ಭಾಗವಹಿಸುವಿಕೆಯು ಇಂಡಿಯಾ ಮೈತ್ರಿಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಪಕ್ಷದ ಸಂವಹನ ಉಸ್ತುವಾರಿ ರಮೇಶ್ ಹೇಳಿದ್ದಾರೆ. ಯಾತ್ರೆಯು ಫೆಬ್ರವರಿ 16 ರ ಮಧ್ಯಾಹ್ನ ಯುಪಿ ಪ್ರವೇಶಿಸುವ ನಿರೀಕ್ಷೆಯಿದೆ.

‘ಇಂಡಿಯಾ ಬ್ಲಾಕ್‌ನಲ್ಲಿ ಎಲ್ಲವೂ ಸರಿಯಿಲ್ಲ’

ಜನತಾ ದಳ (ಯುನೈಟೆಡ್) ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರುಸೇರ್ಪಡೆಯಾದ ನಂತರ ಇಂಡಿಯಾ ಬಣವನ್ನು ಬಲಪಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿರುವಾಗ, ಎರಡು ನಿರ್ಣಾಯಕ ಮಿತ್ರಪಕ್ಷಗಳಾದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮೈತ್ರಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿವೆ. ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ ಎದು ಹೇಳಿವೆ.

ಈ ಬೆಳವಣಿಗೆಗಳ ನಡುವೆಯೆ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ 14 ರಂದು ಮಣಿಪುರದ ತೌಬಲ್‌ನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿತು, 110 ಜಿಲ್ಲೆಗಳಾದ್ಯಂತ 6,700 ಕಿಲೋಮೀಟರ್‌ಗಳನ್ನು ಒಳಗೊಂಡಿದೆ.

67 ದಿನಗಳ ಕಾಲ 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ತಲುಪುವ ಈ ಯಾತ್ರೆಯು ಹಿಂದಿನ ‘ಭಾರತ್ ಜೋಡೋ ಯಾತ್ರೆ’ಯನ್ನು ಅನುಸರಿಸುತ್ತದೆ. ಅಲ್ಲಿ ರಾಹುಲ್ ಗಾಂಧಿ 3,000 ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಕ್ರಮಿಸಿದರು.

ಇದನ್ನೂ ಓದಿ; ‘ಬಿಜೆಪಿ ಸೇರಿದರೆ ತೊಂದರೆ ಕೊಡುವುದಿಲ್ಲ ಎಂದಿದ್ದಾರೆ; ನಾನು ಅವರಿಗೆ ತಲೆಬಾಗುವುದಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...