Homeಮುಖಪುಟಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಬಂಧಿಸಿದ ಗುಜರಾತ್ ಪೊಲೀಸರು

- Advertisement -
- Advertisement -

ಮುಂಬೈ ಮೂಲದ ಖ್ಯಾತ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝ್ಹರಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಅವರ ಮೇಲೆ ಗುಜರಾತ್‌ನ ಜುನಾಗಢದಲ್ಲಿ ದ್ವೇಷ ಭಾಷಣ ಮಾಡಿದ ಆರೋಪವನ್ನು ಮಾಡಲಾಗಿದೆ. ಆದರೆ ಅವರು ದ್ವೇಷ ಭಾಷಣವನ್ನು ಮಾಡಿಲ್ಲ, ಆರೆಸ್ಸೆಸ್‌, ವಿಎಚ್‌ಪಿ ಒತ್ತಡದಿಂದ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಲ್ಮಾನ್ ಅಝ್ಹರಿ ಪರ ವಕೀಲರು ಹೇಳಿದ್ದಾರೆ.

ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ಅಝ್ಹರಿಯನ್ನು ಇರಿಸಲಾಗಿದೆ ಮತ್ತು ಅವರ ನೂರಾರು ಬೆಂಬಲಿಗರು ಪೊಲೀಸ್‌ ಠಾಣೆಯ ಹೊರಗೆ ಜಮಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಆ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ಮುಫ್ತಿ ಸಲ್ಮಾನ್ ಅಝ್ಹರಿ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರ ವಕೀಲರು, ಮುಫ್ತಿ ಸಲ್ಮಾನ್‌ ತನಿಖೆಗೆ ಸಹಕರಿಸಲು ಸಿದ್ಧರಿದ್ದರೂ, ಈ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆಯನ್ನು ನೀಡದೆ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಮುಫ್ತಿ ಸಲ್ಮಾನ್‌ ಬಂಧನಕ್ಕೆ ಮೊದಲು, ಅವರ ಎಕ್ಸ್  ಖಾತೆಯಿಂದ ಸರಣಿ ಪೋಸ್ಟ್‌ಗಳನ್ನು ಮಾಡಲಾಗಿದೆ. ಗುಜರಾತ್ ಎಟಿಎಸ್, ಮುಂಬೈ ಎಟಿಎಸ್ ಮತ್ತು ಚಿರಾಗ್ ನಗರ ಪೊಲೀಸ್ ಠಾಣೆಯ ಪೊಲೀಸರ ಜಂಟಿ ತಂಡ ಬೆಳಿಗ್ಗೆ 11:56ಕ್ಕೆ ಅವರನ್ನು ಬಂಧಿಸಿದ್ದಾರೆ ಎಂದು ತಿಳಿಸಲಾಗಿದೆ. 25-30 ಮಂದಿ ಪೊಲೀಸರು ಮಫ್ತಿ ಸಲ್ಮಾನ್ ಅವರ ಮನೆಯನ್ನು ಸತ್ತುವರಿದು ಅವರ ನಿವಾಸದಿಂದ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ದ್ವೇಷ ಭಾಷಣದ ಪ್ರಕರಣದಲ್ಲಿ ಬಂಧಿತರಾಗಿರುವ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಕೀಲರಾದ ವಾಹಿದ್ ಶೇಖ್ ಈ ಬಗ್ಗೆ ಮಾತನಾಡಿದ್ದು, 35-40 ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಮನೆಗೆ ಬಂದಿದ್ದಾರೆ. ನಾವು ಅವರು ಬಂಧನದ ಬಗ್ಗೆ ಕಾರಣವನ್ನು ಕೇಳಿದ್ದೇವೆ. ಆದರೆ ಏನನ್ನೂ ತಿಳಿಸಲಾಗಿಲ್ಲ, ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ವಿರುದ್ಧ ಗುಜರಾತ್‌ನಲ್ಲಿ 153ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ನೀಡಿದ ಭಾಷಣದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ, ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ವಿಎಚ್‌ಪಿ ಮತ್ತು ಆರೆಸ್ಸೆಸ್‌ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ ಕಾರಣ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?
ಜನವರಿ 31ರ ರಾತ್ರಿ ಗುಜರಾತ್‌ನ ಜುನಾಗಢ್‌ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಫ್ತಿ ಸಲ್ಮಾನ್ ಅಝ್ಹರಿ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದ್ವೇಷ ಭಾಷಣದ ಆರೋಪದಲ್ಲಿ ಸ್ಥಳೀಯ ಸಂಘಟಕರಾದ ಮೊಹಮ್ಮದ್ ಯೂಸುಫ್ ಮಾಲೆಕ್ ಮತ್ತು ಅಜೀಮ್ ಹಬೀಬ್ ವಿರುದ್ಧವೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 ಬಿ ಮತ್ತು 505(2)ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೌಲಾನಾ ಮುಫ್ತಿ ಸಲ್ಮಾನ್ ಅಝ್ಹರಿ ಅವರ ಬಂಧನದ ಬೆನ್ನಲ್ಲಿ ಅವರ ಬೆಂಬಲಿಗರು ಪೊಲೀಸ್‌ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ವೇಳೆ ಪೊಲೀಸರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಮಾತನಾಡಿದ ಮುಫ್ತಿ ಸಲ್ಮಾನ್ ಅಝ್ಹರಿ, ನಾನೇನೂ ಕ್ರಿಮಿನಲ್ ಅಲ್ಲ ಅಥವಾ ಅಪರಾಧ ಎಸಗಿದ ಕಾರಣಕ್ಕೆ ನನ್ನನ್ನು ಇಲ್ಲಿಗೆ ಕರೆತರಲಾಗಿಲ್ಲ. ಅವರು ಅಗತ್ಯವಿರುವ ತನಿಖೆಯನ್ನು ಮಾಡುತ್ತಿದ್ದಾರೆ ಮತ್ತು ನಾನು ಕೂಡ ಅವರಿಗೆ ಸಹಕಾರ ನೀಡುತ್ತಿದ್ದೇನೆ. ನೀವು ಯಾವುದೇ ಕಾರಣಕ್ಕೆ ಪ್ರತಿಭಟನೆ ನಡೆಸದೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿಯನ್ನು ಮಾಡಿದ್ದಾರೆ.

ಮುಫ್ತಿ ಸಲ್ಮಾನ್ ಅಝ್ಹರಿ ಯಾರು?

ಮುಂಬೈನ ಸುನ್ನಿ ಇಸ್ಲಾಮಿಕ್ ವಿದ್ವಾಂಸರಾದ ಮುಫ್ತಿ ಸಲ್ಮಾನ್ ಅಝ್ಹರಿ ಅವರು ಜಾಮಿಯಾ ರಿಯಾಜುಲ್ ಜನ್ನಾ, ಅಲ್-ಅಮಾನ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್ ಮತ್ತು ದಾರುಲ್ ಅಮಾನ್ ಸ್ಥಾಪಕರು. ಮುಫ್ತಿ ಸಲ್ಮಾನ್ ಪ್ರಪಂಚದಾದ್ಯಂತ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಅವರು ಸಾಮಾಜಿಕ ಮಾಧ್ಯಮದಲ್ಲಿ ಅತ್ಯಂತ ಜನಪ್ರಿಯರಾಗಿದ್ದಾರೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...