Homeಮುಖಪುಟ'ನನ್ನ ಬಂಧನದ ಹಿಂದೆ ರಾಜಭವನದ ಪಾತ್ರವೂ ಇದೆ..'; ಸದನದಲ್ಲಿ ಹೇಮಂತ್ ಸೊರೇನ್ ಆರೋಪ

‘ನನ್ನ ಬಂಧನದ ಹಿಂದೆ ರಾಜಭವನದ ಪಾತ್ರವೂ ಇದೆ..’; ಸದನದಲ್ಲಿ ಹೇಮಂತ್ ಸೊರೇನ್ ಆರೋಪ

- Advertisement -
- Advertisement -

ಅಕ್ರಮ ಭೂ ಹಗರಣದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಇಂದು ಬಿಗಿ ಭದ್ರತೆಯ ನಡುವೆ ವಿಧಾನಸಭೆಗೆ ಆಗಮಿಸಿದರು. ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ವಿಶ್ವಾಸ ಮತವನ್ನು ಎದುರಿಸುತ್ತಿದ್ದಾರೆ.

ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಸೊರೇನ್, ‘ನನ್ನ ಬಂಧನದಲ್ಲಿ ರಾಜಭವನದ ಪಾತ್ರವೂ ಇದೆ’ ಎಂದು ಆರೋಪಿಸಿದರು. ‘ಜನವರಿ 31ರ ರಾತ್ರಿ ದೇಶದಲ್ಲಿ ಮೊದಲ ಬಾರಿಗೆ, ಒಬ್ಬ ಮುಖ್ಯಮಂತ್ರಿಯನ್ನು ಬಂಧಿಸಲಾಯಿತು… ಈ ಘಟನೆಯಲ್ಲಿ ರಾಜಭವನವೂ ಭಾಗಿಯಾಗಿದೆ ಎಂದು ನಾನು ನಂಬುತ್ತೇನೆ’ ಎಂದು ಅವರು ಹೇಳಿದರು.

‘ಭಾರತದ ಇತಿಹಾಸದಲ್ಲಿ ಈ ದಿನ ಕಪ್ಪು ಅಧ್ಯಾಯವಾಗಿ ನೆನಪಿನಲ್ಲಿ ಉಳಿಯುತ್ತದೆ’ ಎಂದು ಸೋರೆನ್ ಹೇಳಿದರು. ‘ಜಾರ್ಖಂಡ್‌ ವಿಧಾನಸಭೆಯಲ್ಲಿ ಆಡಳಿತಾರೂಢ ಮೈತ್ರಿಕೂಟಕ್ಕೆ ಚಂಪೈನ್ ಸೊರೇನ್ ಸಂಪೂರ್ಣ ಬೆಂಬಲವನ್ನು ಹೊಂದಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಂಚಿಯ ವಿಶೇಷ ನ್ಯಾಯಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯನಿರ್ವಾಹಕ ಅಧ್ಯಕ್ಷ ಹೇಮಂತ್ ಸೊರೇನ್ ಅವರಿಗೆ ವಿಶ್ವಾಸ ಮತದಲ್ಲಿ ಭಾಗವಹಿಸಲು ಅವಕಾಶ ನೀಡಿತು. ‘ನಾನು ವಿಧಾನಸಭೆಯ ಸದಸ್ಯನಾಗಿದ್ದೇನೆ ಮತ್ತು ತನ್ನ ಪಕ್ಷಕ್ಕೆ ನಿರ್ಣಾಯಕವಾದ ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ’ ಎಂದು ಸೊರೇನ್ ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು.

ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಮೂರು ದಿನಗಳ ನಂತರ, ಜಾರ್ಖಂಡ್ ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೇನ್ ಅವರು ಕಳೆದ ಶುಕ್ರವಾರ ಜಾರ್ಖಂಡ್‌ನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

₹600 ಕೋಟಿ ಭೂ ಹಗರಣ ಮತ್ತು ಅದರ ಆದಾಯದ ಲಾಂಡರಿಂಗ್‌ನಲ್ಲಿ ಹೇಮಂತ್ ಸೊರೇನ್ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಭೂ ಹಗರಣವು ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸುವ ಮತ್ತು ಅದನ್ನು ಬಿಲ್ಡರ್‌ಗಳಿಗೆ ಮಾರಾಟ ಮಾಡುವ ‘ದೊಡ್ಡ ದಂಧೆ’ಯನ್ನು ಒಳಗೊಂಡಿದೆ ಎಂದು ಇಡಿ ಆರೋಪಿಸಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಮತ್ತು ರಾಂಚಿಯ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ 2011 ರ ಬ್ಯಾಚ್ ಐಎಎಸ್ ಅಧಿಕಾರಿ ಛಾವಿ ರಂಜನ್ ಸೇರಿದಂತೆ ಈ ಪ್ರಕರಣದಲ್ಲಿ ಸಂಸ್ಥೆ ಇದುವರೆಗೆ 14 ಜನರನ್ನು ಬಂಧಿಸಿದೆ.

ಇದನ್ನೂ ಓದಿ; ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್‌ಗೆ ಅನುಮತಿಸದ ರಾಜ್ಯಸಭಾ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...