Homeಮುಖಪುಟಪರೀಕ್ಷಾ ಅಕ್ರಮಕ್ಕೆ ಕಠಿಣ ಶಿಕ್ಷೆ, ಭಾರೀ ದಂಡ: ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲೇನಿದೆ?

ಪರೀಕ್ಷಾ ಅಕ್ರಮಕ್ಕೆ ಕಠಿಣ ಶಿಕ್ಷೆ, ಭಾರೀ ದಂಡ: ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲೇನಿದೆ?

- Advertisement -
- Advertisement -

ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳು ಸೇರಿ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಗರಿಷ್ಠ ಮಟ್ಟದ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಮಸೂದೆಯನ್ನು ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, 3ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು 1ಕೋಟಿ ರೂ.ಗಿಂತ ಕಡಿಮೆಯಿಲ್ಲದೆ ದಂಡ ವಿಧಿಸುವ ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

Public Examinations (Prevention of Unfair Means) Bill- 2024 (ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆಗಟ್ಟುವಿಕೆ) ಮಸೂದೆ-2024), ಕೇಂದ್ರೀಯ ನೇಮಕಾತಿ ಮತ್ತು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ನ ಪ್ರವೇಶ ಪರೀಕ್ಷೆಗಳು, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ರೈಲ್ವೆ ನೇಮಕಾತಿ ಮಂಡಳಿಗಳು (RRBs), ಬ್ಯಾಂಕಿಂಗ್ (IBPS) ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಳು ನಡೆಸುವ ಪರೀಕ್ಷೆಗಳಿಗೆ ಅನ್ವಯಿಸಲಿದೆ.

NTA ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆಗಳನ್ನು ನಡೆಸುತ್ತದೆ, ಉದಾಹರಣೆಗೆ ಎಂಜಿನಿಯರಿಂಗ್‌ಗಾಗಿ ಪ್ರವೇಶ ಪರೀಕ್ಷೆ (JEE), ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿಗಾಗಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮತ್ತು ಪದವಿಪೂರ್ವ ಮತ್ತು ಸ್ನಾತಕೋತ್ತರ ಅಧ್ಯಯನಗಳಿಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ CUET ಪರೀಕ್ಷೆಗಳನ್ನು ನಡೆಸುತ್ತದೆ. ಈ ಗೊತ್ತುಪಡಿಸಿದ ಸಾರ್ವಜನಿಕ ಪರೀಕ್ಷಾ ಪ್ರಾಧಿಕಾರಗಳ ಪರೀಕ್ಷೆಗಳು ಹೊರತಾಗಿ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳು ಕೂಡ ಈ ಕಾನೂನು ವ್ಯಾಪ್ತಿಗೆ ಬರಲಿದೆ.

ಪ್ರಸ್ತುತ ಸಾರ್ವಜನಿಕ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಯಾವುದೇ ನಿರ್ದಿಷ್ಟ ವಸ್ತುನಿಷ್ಠ ಕಾನೂನು ಇಲ್ಲ ಎಂದು ಸಚಿವ ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ. ಲಾಭಕ್ಕಾಗಿ ಅನ್ಯಾಯದ ವಿಧಾನಗಳಲ್ಲಿ ತೊಡಗಿರುವ ವ್ಯಕ್ತಿಗಳು, ಸಂಘಟಿತ ಗುಂಪುಗಳು ಅಥವಾ ಸಂಸ್ಥೆಗಳಿಗೆ ಶಿಕ್ಷೆಯನ್ನು ಮಸೂದೆ ಒದಗಿಸುತ್ತದೆ, ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳನ್ನು ಅದರ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಹೇಳಲಾಗಿದೆ.

ಸಿಬ್ಬಂದಿ ಮತ್ತು ಆಡಳಿತದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ‘ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ 2024’ರಲ್ಲಿ 20ಪರೀಕ್ಷಾಅಕ್ರಮಗಳನ್ನು ಉಲ್ಲೇಖಿಸಿದೆ. ನಕಲಿ ಅಭ್ಯರ್ಥಿಗಳ ಹಾಜರಿ, ಉತ್ತರ ಪತ್ರಿಕೆಗಳ ಸೋರಿಕೆ, ದಾಖಲೆಗಳನ್ನು ತಿರುಚುವುದು, ಮೆರಿಟ್‌ ಪಟ್ಟಿ ಸಿದ್ಧಪಡಿಸುವಲ್ಲಿ ಅಕ್ರಮ ಎಸಗುವುದು, ಉದ್ದೇಶಪೂರ್ವಕವಾಗಿ ಭದ್ರತಾ ವ್ಯವಸ್ಥೆ ಉಲ್ಲಂಘನೆ, ಪರೀಕ್ಷಾರ್ಥಿಗಳಿಗೆ ಸೀಟು ನಿಗದಿಪಡಿಸುವಲ್ಲಿ ಅಕ್ರಮ ಎಸಗುವುದು, ಉದ್ದೇಶಪೂರ್ವಕವಾಗಿ ನಿಯಮಗಳನ್ನು ಉಲ್ಲಂಘಿಸುವ ಕ್ರಮವನ್ನು ಪರೀಕ್ಷಾ ಅಕ್ರಮಗಳೆಂದು ಹೊಸ ಮಸೂದೆಯಡಿ ಪರಿಗಣಿಸಲಾಗುತ್ತದೆ.

ತಪ್ಪಿತಸ್ಥರು ಸಂಘಟಿತ ಅಪರಾಧಗಳಲ್ಲಿ ತೊಡಿಗಿರುವುದು ದೃಢಪಟ್ಟಲ್ಲಿ ಕನಿಷ್ಠ 5ರಿಂದ 10 ವರ್ಷ ಸಜೆ, 1 ಕೋಟಿ ದಂಡ ವಿಧಿಸಲು ಅವಕಾಶವಿದೆ. ಶಿಕ್ಷಣ ಸಂಸ್ಥೆಗಳೇ ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿ ಜೊತೆಗೆ, ಪರೀಕ್ಷಾ ವೆಚ್ಚ ವಸೂಲಿಗೂ ಕ್ರಮ ಕೈಗೊಳ್ಳಲಾಗುತ್ತದೆ. ಸಂಘಟಿತ ಅಪರಾಧದ ಪಾತ್ರ ಇಲ್ಲದಿದ್ದರೆ 3ರಿಂದ 5 ವರ್ಷ ಸಜೆ ಹಾಗೂ 10 ಲಕ್ಷವರೆಗೂ ದಂಡ ವಿಧಿಸಲು ಅವಕಾಶವಿದೆ. ದಂಡವನ್ನು ಪಾವತಿಸಲು ತಪ್ಪಿದಲ್ಲಿ, ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಸೂದೆಯು ಹೇಳುತ್ತದೆ. ಎಲ್ಲಾ ಅಪರಾಧಗಳು ಜಾಮೀನು ರಹಿತ ಅಪರಾಧ ಎಂದು ಸೆಕ್ಷನ್ 9 ಹೇಳುತ್ತದೆ.

ಪರೀಕ್ಷಾ ಪ್ರಾಧಿಕಾರ ಅಥವಾ ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸಂಘಟಿತ ಅಪರಾಧವನ್ನು ಎಸಗಿದರೆ, ಅವರಿಗೆ ಐದು ವರ್ಷಗಳಿಗಿಂತ ಕಡಿಮೆಯಿಲ್ಲದ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ರೂ.1 ಕೋಟಿಗಿಂತ ಕಡಿಮೆಯಿಲ್ಲದ  ದಂಡವನ್ನು ವಿಧಿಸಲಾಗುತ್ತದೆ. ದಂಡವನ್ನು ಪಾವತಿಸಲು ತಪ್ಪಿದಲ್ಲಿ, ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಬಿಲ್‌ನ ಸೆಕ್ಷನ್ 11 ಹೇಳುತ್ತದೆ.

ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಗಳಿಗೆ ಹೆಚ್ಚಿನ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಬಿಲ್‌ನ್ನು ಮಂಡಿಸಲಾಗಿದೆ. ಪ್ರಾಮಾಣಿಕ ಮತ್ತು ನಿಜವಾದ ಪ್ರಯತ್ನಗಳಿಗೆ ತಕ್ಕ ಪ್ರತಿಫಲ ಸಿಗುತ್ತದೆ ಮತ್ತು ಅವರ ಭವಿಷ್ಯವು ಸುರಕ್ಷಿತವಾಗಿದೆ ಎಂದು ಯುವಜನರಿಗೆ ಭರವಸೆ ನೀಡುವುದು ಮಸೂದೆಯ ಉದ್ದೇಶವಾಗಿದೆ ಎಂದು ಬಿಲ್ ಹೇಳುತ್ತದೆ.

ವಿವಿಧ ರಾಜ್ಯಗಳ ನೇಮಕಾತಿ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯಲ್ಲದೆ ಕೇಂದ್ರ ಮಟ್ಟದಲ್ಲಿಯೂ ಇಂತಹ ಪ್ರಕರಣಗಳು ನಡೆದಿವೆ. ಕಳೆದ ವರ್ಷ ಮಾರ್ಚ್‌ನಲ್ಲಿ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಕಳೆದ ತಿಂಗಳು ಪಶ್ಚಿಮ ರೈಲ್ವೇಯ ರೈಲ್ವೇ ನೇಮಕಾತಿ ಕೇಂದ್ರವು ನಡೆಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಸಿಬಿಐ ವಿವಿಧ ರಾಜ್ಯಗಳ 12 ಸ್ಥಳಗಳಲ್ಲಿ ಶೋಧ ನಡೆಸಿತ್ತು.

ಇದನ್ನು ಓದಿ: ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...