Homeಕರ್ನಾಟಕಅನುಮತಿ ಪಡೆಯುವವರೆಗೆ ಸಕ್ಕರೆ ಕಾರ್ಖಾನೆ ನಡೆಸಲಾಗದು: ಯತ್ನಾಳ್‌ ಕುಟುಂಬಕ್ಕೆ ಹೈಕೋರ್ಟ್‌ ಸೂಚನೆ

ಅನುಮತಿ ಪಡೆಯುವವರೆಗೆ ಸಕ್ಕರೆ ಕಾರ್ಖಾನೆ ನಡೆಸಲಾಗದು: ಯತ್ನಾಳ್‌ ಕುಟುಂಬಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನದ ಸಿದ್ಧಸಿರಿ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಯತ್ನಾಳ್‌ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ ಪಾಟೀಲ್‌ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್‌ ದಳವಾಯಿ ಅವರು, ರಾಜಕೀಯ ಕಾರಣಕ್ಕಾಗಿ ಕಾರ್ಖಾನೆ ಮುಚ್ಚಲು ಒತ್ತಾಯಿಸಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಹಾಗಾಗಿ, ಕ್ರಮ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಎರಡೂ ಕಡೆಯ ವಾದ ಆಲಿಸಿದ ಪೀಠವು ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.

ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನಲ್ಲಿರುವ ಶಾಸಕ ಯತ್ನಾಳ್ ಕುಟುಂಬದ ಒಡೆತನದ ಸಿದ್ದಸಿರಿ ಸಕ್ಕರೆ ಹಾಗೂ ಎಥೆನಾಲ್ ಘಟಕ ಮುಚ್ಚುವಂತೆ ಕಲಬುರಗಿ ವಲಯದ ಹಿರಿಯ ಪರಿಸರ ಅಧಿಕಾರಿ ಜ.18ರಂದು ನೋಟಿಸ್ ಜಾರಿ ಮಾಡಿದ್ದರು. ಬಳಿಕ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜ.25ರಂದು ಅದೇ ರೀತಿಯ ಆದೇಶ ನೀಡಿತ್ತು. ಈ ಎರಡೂ ಆದೇಶಗಳನ್ನು ರದ್ದು ಮಾಡುವಂತೆ ಯತ್ನಾಳ್ ಕುಟುಂಬಸ್ಥರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಖಾನೆ ನಡೆಸುತ್ತಿದ್ದ ಆರೋಪ ಯತ್ನಾಳ್ ಕುಟುಂಬಸ್ಥರ ವಿರುದ್ದ ಕೇಳಿ ಬಂದಿದೆ. ವರದಿಗಳ ಪ್ರಕಾರ, ಅನುಮತಿ ಪಡೆಯದೆ ಬಾಯ್ಲರ್ ಆರಂಭ, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೆ ಡಿಸ್ಟಿಲರಿ ಘಟಕ ಸ್ಥಾಪಿಸಿದ್ದು ಸೇರಿದಂತೆ ಅನೇಕ ಆರೋಪಗಳು ಈ ಕಾರ್ಖಾನೆ ವಿರುದ್ದವಿದೆ.

ಇದನ್ನೂ ಓದಿ : ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ: ಕೋರ್ಟ್‌ಗೆ 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...