Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...