Homeಮುಖಪುಟಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ...

ಹೋರಾಟಗಾರರ ಒತ್ತಡಕ್ಕೆ ಮಣಿದ ನ್ಯಾಷನಲ್ ಕಾಲೇಜು; ಡಾ.ರವಿ ಬಾಗಿ ವರ್ಗಾವಣೆ ನಿರ್ಧಾರದಿಂದ ಹಿಂದೆ ಸರಿದ ಆಡಳಿತ ಮಂಡಳಿ

- Advertisement -
- Advertisement -

ಯಾವುದೆ ಸೂಕ್ತ ಕಾರಣ ನೀಡದೆ ಬಸವನಗುಡಿ ನ್ಯಾಷನಲ್ ಕಾಲೇಜಿನಿಂದ ಡಾ. ರವಿಕುಮಾರ್ ಬಾಗಿ ಅವರನ್ನು ವರ್ಗಾವಣೆ ಮಾಡಿದ್ದೂ ಅಲ್ಲದೆ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ‘ಸೇವಾ ಧೃಡೀಕರಣ’ ನೀಡದೆ ಕಿರುಕುಳ ನೀಡುತ್ತಿದ್ದ ಆಡಳಿತ ಮಂಡಳಿಯು ಇಂದು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ‘ವರ್ಗಾವಣೆ ಆದೇಶವನ್ನು ಹಿಂಪಡೆದು, ರವಿಯವರನ್ನು ಸ್ವಸ್ಥಾನದಲ್ಲೇ ಮುಂದುವರಿಸಲಾಗುವುದು. ಜತೆಗೆ, ಅವರ ಪಿಎಚ್‌ಡಿ ಮಾರ್ಗದರ್ಶನಕ್ಕೆ ಶೀಘ್ರದಲ್ಲೇ ಸೇವಾ ದೃಢೀಕರಣವನ್ನೂ ನೀಡಲಾಗುವುದು’ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಸುಬ್ರಮಣ್ಯ ಅವರು ಇಂದು ಘೋಷಿಸಿದರು.

ಡಾ. ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯ ಹಾಗೂ ದಲಿತ ಎಂಬ ಕಾರಣಕ್ಕೆ ನಡೆಯುತ್ತಿದ್ದ ಕಿರುಕುಳದ ಬಗ್ಗೆ ಚಿಂತಕರಾದ ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ದಸಂಸ ಹಿರಿಯ ನಾಯಕರಾದ ಮಾವಳ್ಳಿ ಶಂಕರ್, ಬಿ.ಸಿ. ಬಸವರಾಜು ಸೇರಿಸಂತೆ 50ಕ್ಕೂ ಹೆಚ್ಚು ಜನ ಪ್ರಾಧ್ಯಾಪಕರು, ಪತ್ರಕರ್ತರು, ರಂಗಕರ್ಮಿಗಳು ಫೆ.2ರಂದು ಕಾಲೇಜಿನ ಆಡಳಿತ ಮಂಡಳಿ ಜತೆಗೆ ಮಾತುಕತೆ ನಡೆಸಿದ್ದರು. ಸೋಮವಾರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದ ಆಡಳಿತ ಮಂಡಳಿ, ಹಿಂಬಡ್ತಿಯನ್ನು ಮಾತ್ರ ರದ್ದುಗೊಳಿಸಿ, ಜಯನಗರ ಪದವಿ ಕಾಲೇಜಿಗೆ ವರ್ಗಾವಣೆ ಆದೇಶವನ್ನು ಮುಂದುವರಿಸಿತ್ತು. ಆದರೆ, ಜಯನಗರ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಇಲ್ಲದಿರುವ ಕಾರಣಕ್ಕೆ, ಡಾ. ರವಿ ಅವರಿಗೆ ಬೆಂಗಳೂರು ವಿವಿ ನೀಡಿದ್ದ ಸಂಶೋಧನ ಮಾರ್ಗದರ್ಶಕರ ಸ್ಥಾನ ಕೈತಪ್ಪುವ ಬಗ್ಗೆ ಇಂದು ನಡೆದ ಸಭೆಯಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಇಂದು ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಜತೆಗೆ ನಡೆದ ಸಭೆಯಲ್ಲಿ ಪ್ರೊ. ಬಿ.ಸಿ. ಬಸವರಾಜು, ಶ್ರೀಪಾದ್ ಭಟ್, ಹಿರಿಯ ವಕೀಲರಾದ ಡಾ. ಸಿ.ಎಸ್. ದ್ವಾರಕನಾಥ್, ಬಂಜಗೆರೆ ಜಯಪ್ರಕಾಶ್, ಮಾವಳ್ಳಿ ಶಂಕರ್ ಅವರು  ಆಡಳಿತ ಮಂಡಳಿಯಿಂದ ರವಿ ಬಾಗಿ ಅವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತೊಮ್ಮೆ ವಿವರವಾಗಿ ಮನವರಿಕೆ ಮಾಡಿಕೊಟ್ಟರು. ಅಂತಿಮವಾಗಿ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯು ತನ್ನ ನಿರ್ಧಾರವನ್ನು ವಾಪಸ್ ಪಡೆಯುವುದಾಗಿ ಹೇಳಿದೆ.

ಸಭೆಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಬ್ರಮಣ್ಯ, ‘ಹಲವು ರೀತಿಯ ಸಂವಹನ ಕೊರತೆಯಿಂದಾಗಿ ಈ ಗೊಂದಲ ಉಂಟಾಗಿದೆ; ರವಿ ಅವರಿಗೆ ಅನುಕೂಲ ಆಗುವ ರೀತಿಯಲ್ಲಿ ನಿರ್ಧಾರ ಮಾಡುತ್ತೇವೆ. ಹಿಂದಿನ ಮಾತುಕತೆ ನಂತರ ನಾವು ಅವರನ್ನು ಪಿಯು ಕಾಲೇಜಿನಿಂದ ಪದವಿ ಕಾಲೇಜಿಗೆ ನೇಮಿಸಿದ್ದೇವೆ. ಈಗ ನೀವು ಹೇಳುತ್ತಿರುವ ಹಲವು ವಿಚಾರಗಳು ನನ್ನ ಗಮನಕ್ಕೆ ಬಂದಿರಲಿಲ್ಲ; ಮಾತುಕತೆ ಮಾಡಿಕೊಂಡು ನಮ್ಮ ಹಂತದಲ್ಲೇ ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು, ಇಲ್ಲೀವರಗೆ ನಡೆದಿರುವುದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅವರನ್ನು ಇದೇ ಕಾಲೇಜಿನಲ್ಲಿ ಉಳಿಸಿಕೊಳ್ಳುತ್ತೇವೆ. ಆಡಳಿತ ಮಂಡಳಿಯಲ್ಲಿರುವ ನಾವೆಲ್ಲರೂ ಬೇರೆಬೇರೆ ಕ್ಷೇತ್ರದಿಂದ ಬಂದವರು, ನಮಗೆ ಈ ತಾಂತ್ರಿಕ ವಿಚಾರಗಳು ಬಗ್ಗೆ ತಿಳಿದಿರಲಿಲ್ಲ’ ಎಂದರು.

ಇದೀಗ ಕನ್ನಡ ಪ್ರಾಧ್ಯಾಪಕ ಡಾ. ರವಿಕುಮಾರ್ ಬಾಗಿ ಅವರ ಹಿಂಬಡ್ತಿ ಹಾಗೂ ವರ್ಗಾವಣೆ ಆದೇಶವನ್ನು ಆಡಳಿತ ಮಂಡಳಿ ವಾಪಸ್ ಪಡೆದಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.

ಡಾ. ರವಿ ಬಾಗಿಗೆ ಜನ ಬೆಂಬಲ:

ಡಾ. ರವಿ ಬಾಗಿ ಅವರಿಗೆ ಆಗುತ್ತಿದ್ದ ಅನ್ಯಾಯವನ್ನು ಪ್ರಶ್ನಿಸಲಿ ಇಂದು ನೂರಾರು ಜನ ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮುಂದೆ ಸೇರಿದ್ದರು. ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಡಾ. ಬಂಜಗೆರೆ ಜಯಪ್ರಕಾಶ್, ಶ್ರೀಪಾದ್ ಭಟ್, ಮಾವಳ್ಳಿ ಶಂಕರ್, ಡಾ. ಸಿ.ಎಸ್. ದ್ವಾರಕನಾಥ್, ಜಿ.ಎನ್, ನಾಗರಾಜ್, ಪಿಚ್ಚಳ್ಳಿ ಶ್ರೀನಿವಾಸ್, ಬಿ.ಸಿ. ಬಸವರಾಜು ಸೇರಿದಂತೆ ಹಲವು ಪ್ರಮುಖರು ಆಗಮಿಸಿ ಗಂಟೆಗಳ ಕಾಲ ಬಿಸಿಲಿನಲ್ಲೆ ಕಾದರು. ಜೊತೆಗೆ, ದಲಿತ ಸಂಘಟನೆ, ರಂಗಭೂಮಿ, ವಿದ್ಯಾರ್ಥಿ ಮುಖಂಡರು, ಕಾರ್ಮಿಕ ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಿ ರವಿ ಬಾಗಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ವರ್ತನೆ ಖಂಡಿಸಿ ಪ್ರತಿಭಟಿಸಿದ ಡಾ. ರವಿ ಬಾಗಿ

ನ್ಯಾಷನಲ್ ಕಾಲೇಜು ಆಡಳಿ ಮಂಡಳಿ ಜತೆಗೆ ಶಾಂತಿಯುತವಾಗಿಯೆ ಮಾತನಾಡಲು ಆಗಮಿಸಿದ್ದ ಹಿರಿಯ ಸಾಹಿತಿಗಳನ್ನು ಗಂಟೆಗಳ ಕಾಲ ಹೊರಗಡೆಯೇ ನಿಲ್ಲಿಸಲಾಗಿತ್ತು. ಯಾರನ್ನೂ ಕಾಲೇಜಿನ ಒಳಗೆ ಬಿಡದಂತೆ ಗೇಟಿಗೆ ಬೀಗ ಹಾಕಿಸಿದ್ದ ಆಡಳಿತ ಮಂಡಳಿಯ ‘ಕೆಲವರು’, ಪೊಲೀಸರನ್ನು ಕರೆಸಿ ಕಾಲೇಜು ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು. ಸಾಲದ್ದಕ್ಕೆ ವಯಸ್ಸಾಗಿ ನಿಲ್ಲಲೂ ಕಷ್ಟಪಡುತ್ತಿದ್ದ ಅಧ್ಯಕ್ಷರಾದ ಡಾ. ಸುಬ್ರಮಣ್ಯ ಅವರನ್ನು ಕಾಲೇಜಿನ ಹೊರಗಡೆ ಕರೆತಂದು ನ್ಯಾಯ ಕೇಳಲು ಬಂದಿದ್ದವರ ಮನವೊಲಿಸಲು ಪ್ರಯತ್ನಿಸಿದರು. ನ್ಯಾಷನಲ್ ಕಾಲೇಜು ಸ್ಥಾಪಕರಾದ ಎಚ್‌. ನರಸಿಂಹಯ್ಯ ಅವರ ಒಡನಾಡಿಗಳಾಗಿದ್ದ ಹಲವರು ಇಂದು ರವಿ ಬಾಗಿ ಪರವಾಗಿ ನ್ಯಾಯ ಕೇಳಲು ಬಂದಿದ್ದರು. ಜೊತೆಗೆ, ಸಾಹಿತ್ಯ, ಶೈಕ್ಷಣಿಕ, ಹೋರಾಟ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿರುವವರ ಬಗ್ಗೆ ಆಡಳಿತ ಮಂಡಳಿಗೆ ಕಿಂಚಿತ್ತೂ ತಿಳುವಳಿಕೆ ಇಲ್ಲದಿರುವುದು ಕಂಡುಬಂತು. ಪದಾಧಿಕಾರಿಗಳ ಈ ವರ್ತನೆ ಅಲ್ಲಿಗೆ ಬಂದಿದ್ದ ಹಿರಿಯ ಅಸಮಾಧಾನಕ್ಕೂ ಕಾರಣವಾಯಿತು.

ಬಸವನಗುಡಿಯಲ್ಲಿರುವ ನ್ಯಾಷನಲ್‌ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದ ಡಾ. ರವಿಕುಮಾರ್ ಬಾಗಿ ಅವರಿಗೆ ಹಿಂಬಡ್ತಿ ನೀಡಲಾಗಿತ್ತು. ಅಲ್ಲದೆ, ರವಿಕುಮಾರ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಮಾರ್ಗದರ್ಶಕರಾಗಲು ಸೇವಾ ಧೃಢೀಕರಣ ಪತ್ರವನ್ನೂ ಕಾಲೇಜಿನ ಪ್ರಾಂಶುಪಾಲರು ನೀಡುತ್ತಿಲ್ಲ ಎಂದು ಆರೋಪಿಸಲಾಗಿದೆ.

ರವಿಕುಮಾರ್ ಅವರ ಮೇಲೆ ಕಾಲೇಜು ಆಡಳಿತ ಮಂಡಳಿ ಎಸಗಿದ ಧೋರಣೆಯನ್ನು ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ಕಾಲೇಜಿನ ಎದುರು ಫೆಬ್ರವರಿ 2ರಂದು ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ್ದರು. ಅಲ್ಲದೆ, ಫೆಬ್ರವರಿ 6ರ ಮಂಗಳವಾರ ಕೂಡ ಮತ್ತೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಮಣಿದಿರುವ ಕಾಲೇಜು ಆಡಳಿತ ಮಂಡಳಿ, ಪ್ರಾಧ್ಯಾಪಕ ರವಿಕುಮಾರ್ ಅವರಿಗೆ ನೀಡಿದ್ದ ಹಿಂಬಡ್ತಿಯನ್ನು ವಾಪಸ್‌ ಪಡೆದಿದೆ. ಪದವಿ ಬಸವನಗುಡಿ ಕಾಲೇಜಿನಲ್ಲಿಯೇ ಅವರನ್ನು ಮುಂದುವರಿಸಲು ಒಪ್ಪಿಕೊಂಡಿದೆ.

‘ಕಳೆದ 13 ವರ್ಷದಿಂದ ಬಸವನಗುಡಿಯ ಪದವಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪದವಿ, ಸ್ನಾತಕೋತ್ತರ ಪದವಿಗಳಿಗೆ ಬೋಧಿಸಿದ್ದೇನೆ. ಪಿಎಚ್‌ಡಿ ಪದವಿಯನ್ನು ಹೊಂದಿದ್ದೇನೆ. ಸ್ನಾತಕೋತ್ತರ ಕೇಂದ್ರದ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದೇನೆ. ನನಗೆ ಯಾವ ಸೂಚನೆಯನ್ನು ನೀಡದೆ ಏಕಾಏಕಿ ದುರುದ್ದೇಶದಿಂದ ಜಯನಗರ ನ್ಯಾಷನಲ್ ಪಿಯುಸಿ ಕಾಲೇಜಿಗೆ ಹಿಂಬಡ್ತಿ ನೀಡಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಪ್ರಾಂಶುಪಾಲರಾದ ವೈ.ಸಿ.ಕಮಲಾ ಅವರು ಅಧ್ಯಾಪಕರು ಮತ್ತು ವಿಧ್ಯಾರ್ಥಿಗಳಲ್ಲಿ ನೇರವಾಗಿಯೇ ಅಸ್ಪೃಶ್ಯತೆಯನ್ನು ಆಚರಿಸುತ್ತಿದ್ದಾರೆ’ ಎಂದು ಪ್ರಾಧ್ಯಾಪಕ ರವಿಕುಮಾರ್ ತಮ್ಮ ನೋವು ತೋಡಿಕೊಂಡಿದ್ದರು.

ಇದನ್ನೂ ಓದಿ; ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...