Homeಮುಖಪುಟದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೊಸೆಯ ಜಾಮೀನು ಅರ್ಜಿಯನ್ನು ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದ್ದು, ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ.

ಮನೆಕೆಲಸಕ್ಕಿದ್ದ ಬಾಲಕಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟು, ನಿಂದಿಸಿ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಪುತ್ರ ಆಂಟೊ ಮತಿವನನ್ ಮತ್ತು ಸೊಸೆ ಮೆರ್ಲಿನಾ ಅವರ ಜಾಮೀನು ಅರ್ಜಿಯನ್ನು ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಆರೋಪಿಗಳ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ದಂಪತಿಗಳು ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು, ಆದರೆ ಅಂತಿಮವಾಗಿ ಜನವರಿ 25ರಂದು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದಲ್ಲಿ ಅವರನ್ನು ಬಂಧಿಸಲಾಗಿತ್ತು ಮತ್ತು ಫೆಬ್ರವರಿ 9ರವರೆಗೆ  ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ದಂಪತಿಯ ಜಾಮೀನು ಅರ್ಜಿಯ ಮೊದಲ ವಿಚಾರಣೆಯನ್ನು ಫೆಬ್ರವರಿ 2ರಂದು ನಡೆಸಲಾಗಿದೆ. ಫೆಬ್ರವರಿ 6 ರಂದು ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಲಿ,  ದಂಪತಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ. ಆರೋಪಿಗಳು ಜಾಮೀನಿಗಾಗಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಏನಿದು ಪ್ರಕರಣ

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಬಾಲಕಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿತ್ತು. ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೈ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು. ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿತ್ತು. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿತ್ತು. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಳು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 294(ಬಿ), 324, 325, 506(1) ಮತ್ತು ಎಸ್ಸಿ- ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ಫೆ.8ರಂದು ಅರ್ಜಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...