Homeಮುಖಪುಟಎಸ್ಸಿ-ಎಸ್ಟಿ ಉಪ ವರ್ಗೀಕರಣ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ಎಸ್ಸಿ-ಎಸ್ಟಿ ಉಪ ವರ್ಗೀಕರಣ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

- Advertisement -
- Advertisement -

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಮತ್ತಷ್ಟು ಉಪವರ್ಗೀಕರಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂಬ 2004ರ ತೀರ್ಪಿನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಸಂವಿಧಾನ ಪೀಠವು, ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪವರ್ಗೀಕರಣ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳು ಹೊಂದಿವೆಯೇ ಎಂಬ ಕಾನೂನಿನ ಪ್ರಶ್ನೆಯ ಬಗ್ಗೆ ಪರಿಶೀಲನೆ ಆರಂಭಿಸಿದೆ. ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಮಿಶ್ರಾ ಅವರನ್ನೊಳಗೊಂಡ ಪೀಠವು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ 2010ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಪ್ರಮುಖ ಅರ್ಜಿ ಸೇರಿದಂತೆ 23 ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ-2006 ರ ಸೆಕ್ಷನ್ 4 (5) ನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಅದು ‘ವಾಲ್ಮೀಕಿಗಳು’ ಮತ್ತು ‘ಮಝಬಿ ಸಿಖ್’ ಜಾತಿಗಳಿಗೆ ಸಾರ್ವಜನಿಕ ಉದ್ಯೋಗಗಳಲ್ಲಿ ಎಸ್ಸಿ ಕೋಟಾದೊಳಗೆ 50% ಮೀಸಲಾತಿಗೆ  ಆದ್ಯತೆ ನೀಡುತ್ತಿತ್ತು. ಇವಿ ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನ 2004ರ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ತೀರ್ಪನ್ನು ಈ ನಿಬಂಧನೆ ಉಲ್ಲಂಘಿಸಿದೆ ಎಂಬುದನ್ನೂ ಒಳಗೊಂಡಂತೆ, ಈ ನಿಬಂಧನೆಯು ಅಸಂವಿಧಾನಿಕ ಎಂದು ಹೈಕೋರ್ಟ್ ಹೇಳಿತ್ತು.

ಪರಿಶಿಷ್ಟ ಜಾತಿಗಳು ಎಂದು ಪರಿಗಣಿತವಾಗಿರುವ ಜಾತಿಗಳನ್ನು, ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ತೆಗೆಯುವ ಅಧಿಕಾರ ಇರುವುದು ಸಂಸತ್ತಿಗೆ ಮಾತ್ರವೇ ವಿನಾ ವಿಧಾನಸಭೆಗಳಿಗೆ ಇಲ್ಲ ಎಂದು 2004ರ ತೀರ್ಪಿನಲ್ಲಿ ಹೇಳಲಾಗಿದೆ. 2004ರ ತೀರ್ಪು ತಮಗೆ ಅನ್ವಯಿಸುವುದಿಲ್ಲ ಎಂದು ಕೂಡ ಪಂಜಾಬ್ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿತ್ತು. ಪಂಜಾಬ್ ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠವು, ಚಿನ್ನಯ್ಯ ತೀರ್ಪಿನಲ್ಲಿ ಹೇಳಿದ್ದಕ್ಕೆ ಭಿನ್ನವಾದ ನಿಲುವು ತಾಳಿತು. ಇಡೀ ವಿಚಾರವನ್ನು 7 ಅಥವಾ ಅದಕ್ಕೂ ಹೆಚ್ಚಿನ ಸಂಖ್ಯೆಯ ನ್ಯಾಯಮೂರ್ತಿಗಳನ್ನು ಹೊಂದಿರುವ ವಿಸ್ತೃತವಾದ ನ್ಯಾಯಪೀಠವು ವಿಚಾರಣೆ ನಡೆಸಿ ತೀರ್ಪು ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಕರಣದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ಒಳಗೆ ಉಪ-ವರ್ಗೀಕರಣಕ್ಕೆ ಅನುಮತಿಸಲಾಗಿದೆಯೇ ಎಂಬುವುದನ್ನು ಕೋರ್ಟ್‌ ಗಮನಿಸಿದೆ. ಒಬಿಸಿಗಳ ವಿಷಯದಲ್ಲಿ ಇಂದ್ರ ಸ್ವಾಹ್ನಿ (ಮಂಡಲ್ ಪ್ರಕರಣ) ತೀರ್ಪು ಪ್ರಕಾರ ಹೆಚ್ಚು ಹಿಂದುಳಿದವರು ಮೀಸಲಾತಿಯ ಪ್ರಯೋಜನವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಉಪ-ವರ್ಗೀಕರಣ ಮಾಡಬಹುದು ಎಂದು ಪೀಠ ಹೇಳಿದೆ. ಆದರೆ ಇದನ್ನು ಎಸ್‌ಸಿ ಮತ್ತು ಎಸ್‌ಟಿಗಳಿಗೆ ವಿಸ್ತರಿಸಲಾಗಿಲ್ಲ ಎಂದು ಕೋರ್ಟ್‌ ಗಮನಿಸಿದೆ.

SC ವರ್ಗದೊಳಗೆ ಉಪ-ಜಾತಿಗಳನ್ನು ಗುರುತಿಸಲು ಮತ್ತು ತುಲನಾತ್ಮಕವಾಗಿ ಅಂಚಿನಲ್ಲಿರುವವರು ಮತ್ತು ತುಲನಾತ್ಮಕವಾಗಿ ಹೆಚ್ಚು ಅಂಚಿನಲ್ಲಿರುವವರು ಎಂಬ ಕಾರಣಕ್ಕಾಗಿ ಅವರಿಗೆ ಹೆಚ್ಚಿನ ಮೀಸಲಾತಿ ನೀಡಲು ರಾಜ್ಯಗಳಿಗೆ ಅಧಿಕಾರ ನೀಡಲಾಗಿದೆ ಪಂಜಾಬ್‌ ಸರ್ಕಾರವು ವಾದವನ್ನು ಮಂಡಿಸಿದೆ.

ಪಂಜಾಬ್‌ನ ಹೆಚ್ಚುವರಿ ಅಡ್ವೊಕೇಟ್-ಜನರಲ್ ಶದನ್ ಫರಾಸತ್ ಅವರು ಉಪವರ್ಗೀಕರಣವು ಮೀಸಲಾತಿಯ ಪರಿಣಾಮಕಾರಿತ್ವದ ಒಂದು ವಿಧಾನವಾಗಿದೆ, ಇದರಿಂದ ಎಲ್ಲಾ ಹಿಂದುಳಿದ ವರ್ಗಗಳಿಗೆ ಯೋಜನೆಯ ಪ್ರಯೋಜನಗಳು ತಲುಪಬಹುದು. ನಿಜವಾದ ದಕ್ಷತೆ ಏನೆಂದು ನಾವು ಇನ್ನೂ ನೋಡಿಲ್ಲ ಏಕೆಂದರೆ ನಾವು ಇನ್ನೂ ನಿಜವಾದ ಸಮಾನತೆಯನ್ನು ತಲುಪಿಲ್ಲ, ರಾಜ್ಯವು ದುರ್ಬಲ ವ್ಯಕ್ತಿಗೆ ಸಹಾಯ ಮಾಡುತ್ತಿದೆ. ರಾಜ್ಯವು ಎಲ್ಲರನ್ನೂ ಒಳಗೊಳ್ಳಬೇಕು ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳಿಗೆ 50% ಮೀಸಲಾತಿ ನೀಡುವ ಮೂಲಕ, ನೀವು ಸಾಮಾನ್ಯ ವರ್ಗದ ಜನರನ್ನು 50% ಮೀಸಲಾತಿಯಿಂದ ಹೊರಗಿಡಲಿಲ್ಲವೇ? ಎಂದು ನ್ಯಾಯಮೂರ್ತಿ ಗವಾಯಿ ಈ ವೇಳೆ ಪ್ರಶ್ನಿಸಿದ್ದಾರೆ.

ಒಮ್ಮೆ ಒಬ್ಬ ವ್ಯಕ್ತಿಯು IPS ಅಥವಾ IAS ಆದರೆ, ಅವನ ಮಕ್ಕಳು ಹಳ್ಳಿಯಲ್ಲಿ ವಾಸಿಸುವ ಅವನ ಸಮುದಾಯದ ಇತರ ಮಕ್ಕಳು ಎದುರಿಸುವಂತಹ ಅನಾನುಕೂಲತೆಗಳನ್ನು ಎದುರಿಸುವುದಿಲ್ಲ, ಆದರೂ ಅವನ ಕುಟುಂಬವು ಮೀಸಲಾತಿಯ ಪ್ರಯೋಜನಗಳನ್ನು ಪಡೆಯುತ್ತದೆ ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಪೀಠವು ಅಭಿಪ್ರಾಯ ವ್ಯಕ್ತಡಿಸಿದೆ. ಪ್ರಬಲ ಅಥವಾ ಪ್ರಭಾವಿ ಗುಂಪನ್ನು ಪಟ್ಟಿಯಿಂದ ಹೊರಗಿಡಬೇಕೇ ಅಥವಾ ಬೇಡವೇ ಎಂಬುದನ್ನು ಸಂಸತ್ತು ನಿರ್ಧರಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...