ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಖಂಡಿಸಿ ಮತ್ತು ಕರ್ನಾಟಕ್ಕೆ ಬರಲು ಬಾಕಿ ಇರುವ ತೆರಿಗೆ ಪಾಲನ್ನು ನೀಡುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ರಾಜ್ಯ ಸರ್ಕಾರದಿಂದ ‘ದೆಹಲಿ ಚಲೋ’ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸರ್ಕಾರದ ಸಚಿವರು, ಕಾಂಗ್ರೆಸ್ ಶಾಸಕರು, ನಾಯಕರು ಪಾಲ್ಗೊಂಡಿದ್ದಾರೆ.
#WATCH | Karnataka Deputy CM DK Shivakumar speaks at Delhi's Jantar Mantar during their protest against the central government. pic.twitter.com/5cgx6YCD21
— ANI (@ANI) February 7, 2024
ಪ್ರತಿಭಟನೆ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದ್ದೇವೆ. ಇದು ಐತಿಹಾಸಿಕವಾದ ಚಳವಳಿ. ಶೇ. 40-45 ರಷ್ಟು ತೆರಿಗೆ ಪಾಲು ಕೇಂದ್ರದಿಂದ ನಮಗೆ ಬರಬೇಕು. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. 100 ರೂ. ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ವಾಪಸ್ ನಮಗೆ ಬರುತ್ತಿದೆ ಎಂದರು.
#WATCH | Delhi: On the Karnataka Congress protest in Delhi, Karnataka CM Siddramaiah says "We expect the Govt will listen to our protest and our main intention is to protect the interest of the state and Kannadigas…" pic.twitter.com/arNp1v5cxW
— ANI (@ANI) February 7, 2024
ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಅನುದಾನ ನೀಡಬೇಕು. 14ನೇ ಹಣಕಾಸು ಆಯೋಗದ ನಿಯಮಾನುಸಾರ ರಾಜ್ಯಕ್ಕೆ ಶೇ. 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದ ನಿಯಮಾನುಸಾರ ರಾಜ್ಯಕ್ಕೆ ಶೇ. 41ರಷ್ಟು ಹಣ ನೀಡಬೇಕು ಎಂದು ಸಿಎಂ ಆಗ್ರಹಿಸಿದರು.
ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ : ಸಿಎಂ
ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ. ಬಜೆಟ್ ಕೂಡ ಒಂದು ಶ್ವೇತಪತ್ರವೇ ಆಗಿದೆ. ಆದರೂ, ನಾವು ಶ್ವೇತಪತ್ರ ಹೊರಡಿಸುತ್ತೇವೆ ಎಂದು ಸಿಎಂ ಹೇಳಿದರು. ಯುಪಿಎ ಅವಧಿಯ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇವೆ ಎಂಬ ಬಿಜೆಪಿಯ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗೆಯೇ ಸೆಸ್, ಸರ್ಚಾರ್ಜ್ ಬಗ್ಗೆಯೂ ಶ್ವೇತಪತ್ರ ಹೊರಡಿಸಲಿ ಎಂದರು.
ಇದನ್ನೂ ಓದಿ : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 50% ಮೀಸಲಾತಿ ಮಿತಿ ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ


