Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

ಭಾರತ್ ಜೋಡೋ ನ್ಯಾಯ ಯಾತ್ರೆ: ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ, ಒಡಿಶಾ ಸರಕಾರಕ್ಕೆ ರಾಹುಲ್‌ ತರಾಟೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ಬಳಿಕ  ಒಡಿಶಾವನ್ನು ಪ್ರವೇಶಿಸಿದೆ. ಇಂದು ರೂರ್ಕೆಲಾದ ವೇದವ್ಯಾಸ್ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ದೇವಾಲಯದ ಗುಹೆಯು ಋಷಿ ಮತ್ತು ಕವಿ ವೇದವ್ಯಾಸ್ ಅವರು ಮಹಾಭಾರತವನ್ನು ರಚಿಸಿದ ಸ್ಥಳವೆಂದು ಪರಿಗಣಿಸಲಾಗಿದೆ.

ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟ್ನಾಯಕ್ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಯಾತ್ರೆ ಪಟ್ಟಣ ಪ್ರವೇಶಿಸುವುದಕ್ಕೆ ಮೊದಲೇ ಬೀರಮಿತ್ರಪುರದಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು ಮತ್ತು ರಾಹುಲ್ ಗಾಂಧಿಯವರ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಖಿಲೇಶ್‌ ಯಾದವ್‌ ಹೇಳಿಕೆ: 

ಫೆಬ್ರವರಿ 16 ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಪ್ರದೇಶದಲ್ಲಿ ಯಾತ್ರೆಗೆ ಸೇರಲು ಅಖಿಲೇಶ್ ಯಾದವ್‌ಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಅಖಿಲೇಶ್ ಕಾಂಗ್ರೆಸ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ಉತ್ತರಪ್ರದೇಶದಲ್ಲಿ ಸಾಗಲಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಅಖಿಲೇಶ್‌ ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಜೈರಾಮ್‌ ರಮೇಶ್, ಕನ್ಹಯ್ಯಾ ಕುಮಾರ್ ಹೇಳಿಕೆ:

ಪ್ರಧಾನಿ ಮೋದಿ ಮೂರನೇ ಬಾರಿಗೆ ಬಂದರೆ, ನನ್ನ ಮಾತುಗಳನ್ನು ಗಮನದಲ್ಲಿಟ್ಟುಕೊಳ್ಳಿ, ರೂರ್ಕೆಲಾ (ಒಡಿಶಾದ  ನಗರ) ಕೂಡ ಮಾರಾಟ ಮಾಡುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅಹಂಕಾರ ಆಚಾರ್ಯ, ಅವರನ್ನು ಪ್ರಶ್ನಿಸುವ ಧೈರ್ಯ ಯಾರಿಗೂ ಇಲ್ಲ. ಪ್ರಧಾನಿ ಮೋದಿ ನಮಗೆ ‘ಉದ್ಯೋಗ ನೀಡುವವರು’ ಎಂದು ಹೇಳುತ್ತಾರೆ. ಅವರು ಉದ್ಯೋಗ ಕಸಿದುಕೊಳ್ಳುವವರಾಗಿದ್ದಾರೆ.. ಮತ್ತೆ ಅವರು ಹೇಗೆ ಉದ್ಯೋಗ ನೀಡುವವರಾಗುತ್ತಾರೆ? ಮಾಧ್ಯಮಗಳು ಸ್ವತಂತ್ರವಾಗಿರಬೇಕು ಮತ್ತು ಮಾದ್ಯಮಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಮ್ಮ ಯಾತ್ರೆಯು ಯುವ ನ್ಯಾಯ, ಸಹಭಾಗಿತ್ವ, ಮಹಿಳಾ ನ್ಯಾಯ, ರೈತರಿಗೆ ನ್ಯಾಯ ಮತ್ತು ಕಾರ್ಮಿಕರ ನ್ಯಾಯದ ಕುರಿತು ಮಾತನಾಡುತ್ತದೆ. ನಮ್ಮ ಯಾತ್ರೆಯು ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿದೆ ಎಂದು ಕನ್ಹಯ್ಯಾ ಕುಮಾರ್ ಇದೇ ವೇಳೆ ಹೇಳಿದ್ದಾರೆ.

 

 

 

 

 

 

 

 

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...