HomeಮುಖಪುಟUAPA ಪ್ರಕರಣ: ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್‌ ಎಚ್ಆರ್ ಚಕ್ರವರ್ತಿ

UAPA ಪ್ರಕರಣ: ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್‌ ಎಚ್ಆರ್ ಚಕ್ರವರ್ತಿ

- Advertisement -
- Advertisement -

ನ್ಯೂಸ್‌ಕ್ಲಿಕ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ(ಎಚ್‌ಆರ್‌) ಅಮಿತ್ ಚಕ್ರವರ್ತಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಯಡಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ  ಅರ್ಜಿ ಸಲ್ಲಿಸಿದ್ದಾರೆ.

ಜಸ್ಟಿಸ್ ಸ್ವರಣಾ ಕಾಂತ ಶರ್ಮಾ ಅವರ ಏಕಸದಸ್ಯ ಪೀಠಕ್ಕೆ ಚಕ್ರವರ್ತಿ ಪರ ವಕೀಲರು ತಮ್ಮ ಕಕ್ಷಿದಾರರು ಈಗಾಗಲೇ ಪ್ರಕರಣದಲ್ಲಿ ಅಕ್ಟೋಬರ್ 3, 2023ರಿಂದ ಕಸ್ಟಡಿಯಲ್ಲಿದ್ದಾರೆ. ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಕ್ಷಮೆ ನೀಡಲಾಗಿದೆ. ವಿಷಯವು ಇನ್ನೂ ತನಿಖಾ ಹಂತದಲ್ಲಿದೆ ಮತ್ತು ಇನ್ನೂ ಯಾವುದೇ ಆರೋಪಪಟ್ಟಿ ಸಲ್ಲಿಸಲಾಗಿಲ್ಲ. ಅವರು ತನಿಖಾ ಸಂಸ್ಥೆ ಜೊತೆ ಸಹಕರಿಸುತ್ತಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು.

ದೆಹಲಿ ಪೊಲೀಸರ ಪರ ವಾದ ಮಂಡಿಸಿದ ವಕೀಲರು ಚಕ್ರವರ್ತಿಗೆ ಜಾಮೀನು ನೀಡಿದರೆ ತಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ನ್ಯಾಯಮೂರ್ತಿ ಶರ್ಮಾ ಅವರು ಹೇಳಿದ್ದಾರೆ.

ಚಕ್ರವರ್ತಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಪ್ರಕರಣದಲ್ಲಿ  ದೆಹಲಿ ಪೊಲೀಸರಿಗೆ ಮಾಹಿತಿಯನ್ನು ಬಹಿರಂಗಪಡಿಸಲು ಇಚ್ಛೆ ವ್ಯಕ್ತಪಡಿಸಿದ್ದರು. ಪಟಿಯಾಲ ಹೌಸ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಇದಕ್ಕೆ ಅವಕಾಶ ಮಾಡಿಕೊಟ್ಟರು ಮತ್ತು ಕಳೆದ ತಿಂಗಳು ಈ ವಿಷಯದಲ್ಲಿ ಅವರಿಗೆ ಕ್ಷಮಾದಾನವನ್ನೂ ನೀಡಿದ್ದರು.

ಕಳೆದ ವರ್ಷ ಆಗಸ್ಟ್‌ನಲ್ಲಿ, ದೆಹಲಿ ಪೊಲೀಸ್ ವಿಶೇಷ ಕೋಶವು ನ್ಯೂಸ್‌ಕ್ಲಿಕ್ ಸಂಸ್ಥಾಪಕ-ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್‌ ಆರ್‌ ಅಮಿತ್ ಚಕ್ರವರ್ತಿ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಬ್ಬರನ್ನೂ ಅಕ್ಟೋಬರ್ 2023ರಲ್ಲಿ ಬಂಧಿಸಲಾಗಿತ್ತು.

ನ್ಯೂಸ್‌ ಕ್ಲಿಕ್‌ ಸುದ್ದಿ ಪೋರ್ಟಲ್, ಅದರ ಸಿಬ್ಬಂದಿಗಳು, ಪೋಷಕರಿಗೆ ಸಂಬಂಧಿಸಿದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ  ಶೋಧ ನಡೆಸಿದ ನಂತರ ಅ.3 ರಂದು ದೆಹಲಿ ಪೊಲೀಸರು ನ್ಯೂಸ್‌ ಕ್ಲಿಕ್‌ ಪೋರ್ಟಲ್‌ನ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್‌ಆರ್(HR) ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿದ್ದರು. ನ್ಯೂಸ್‌ಕ್ಲಿಕ್ ಕಚೇರಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳಿಂದ 300ಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದರು. 46 ಅನುಮಾನಿತರನ್ನು ವಿಚಾರಣೆ ನಡೆಸಿದ್ದರು. ಅಕ್ಟೋಬರ್ 13, 2023ರಂದು ಯುಎಪಿಎ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿದ್ದ ಇಬ್ಬರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಅ.4 ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ, ನೆವಿಲ್ಲೆ ರಾಯ್ ಸಿಂಗಮ್, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಪರಸ್ಪರ ನೇರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರವಿಲ್ಲದೆ ಭಾರತದ ನಕ್ಷೆಯನ್ನು ಹೇಗೆ ರಚಿಸುವುದು ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶವೆಂದು ತೋರಿಸುವುದು ಹೇಗೆ ಎಂದು ಇವರು ಚರ್ಚಿಸುತ್ತಿರುವುದು ಕಂಡುಬಂದಿದೆ. ಈ ಉದ್ದೇಶವನ್ನು ಸಾಧಿಸಲು ಆರೋಪಿಗಳು ವಿದೇಶಿ ನಿಧಿಯ ಹೆಸರಿನಲ್ಲಿ ಪಿಪಿಕೆ ನ್ಯೂಸ್‌ಕ್ಲಿಕ್, ಜಿಸ್ಪಾನ್ ಇಂಡಿಯಾ, ಜೆಜೆ ಎಂಟರ್‌ಪ್ರೈಸಸ್, ವರ್ಚುನೆಟ್ ಸಿಸ್ಟಮ್ ಹೆಸರಿನ ಕಂಪನಿಗಳಲ್ಲಿ 115 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನು ಓದಿ: ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...