Homeಮುಖಪುಟಮೋದಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್‌: 'ಶ್ವೇತಪತ್ರ' ಕ್ಕೆ ಪ್ರತಿಯಾಗಿ 'ಕಪ್ಪು ಪತ್ರ'!

ಮೋದಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್‌: ‘ಶ್ವೇತಪತ್ರ’ ಕ್ಕೆ ಪ್ರತಿಯಾಗಿ ‘ಕಪ್ಪು ಪತ್ರ’!

- Advertisement -
- Advertisement -

ಹಿಂದಿನ ಯುಪಿಎ ಸರ್ಕಾರದ ಹತ್ತು ವರ್ಷಗಳ ಅಧಿಕಾರದ ವಿರುದ್ಧ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ‘ಶ್ವೇತಪತ್ರ’ಕ್ಕೆ ಪ್ರತಿಯಾಗಿ ಕಾಂಗ್ರೆಸ್ ಮೋದಿ ಸರ್ಕಾರದ ಹತ್ತು ವರ್ಷಗಳ ಅಧಿಕಾರದ ಕುರಿತು ‘ಕಪ್ಪು ಪತ್ರ’ವನ್ನು ತರುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು  ಕೇಂದ್ರ ಸರಕಾರದ ‘ಶ್ವೇತಪತ್ರ’ಕ್ಕೆ ಪ್ರತಿಯಾಗಿ ಕಪ್ಪು ಕಾಗದವನ್ನು ತರುವ ಸಾಧ್ಯತೆಯಿದೆ ಎಂದು  ವರದಿಯಾಗಿದ್ದು, ಬಿಜೆಪಿಯ ತಂತ್ರಕ್ಕೆ ಪ್ರತಿತಂತ್ರ ಹೂಡಿ ಕಾಂಗ್ರೆಸ್‌ ಸೆಡ್ಡು ಹೊಡೆಯಲು ಮುಂದಾಗಿದೆ ಎನ್ನಲಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸುವಾಗ, ಯುಪಿಎ ಆಡಳಿತ ಮತ್ತು ಎನ್‌ಡಿಎ ಅವಧಿಯಲ್ಲಿ 2014ರ ಮೊದಲು ಮತ್ತು ನಂತರದ ಭಾರತೀಯ ಆರ್ಥಿಕತೆಯ ಸ್ಥಿತಿಯನ್ನು ಹೋಲಿಸುವ ‘ಶ್ವೇತಪತ್ರ’ವನ್ನು ತಮ್ಮ ಸರ್ಕಾರ ಮಂಡಿಸಲಿದೆ ಎಂದು ಹೇಳಿದ್ದಾರೆ.

ಗಮನಾರ್ಹವೆಂದರೆ, ಲೋಕಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಸದನದ ಕೊನೆಯ ಅಧಿವೇಶನ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮಾತನಾಡಿದ್ದಾರೆ. ದ್ವಿಸದನದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ದೇಶದ ಆರ್ಥಿಕ ಸ್ಥಿತಿಯ ಎಷ್ಟು ಕಳಪೆಯಾಗಿತ್ತು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದಾಗ ಎಷ್ಟು ಬದಲಾವಣೆ ಆಗಿದೆ ಎಂದು ತಾನು ಶ್ವೇತಪತ್ರವನ್ನು ಮಂಡಿಸುತ್ತೇನೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆ ಮತ್ತು ಲೋಕಸಭೆಯ ಉಭಯ ಸದನಗಳಲ್ಲಿ ಇದನ್ನು ಮಂಡಿಸಲಿದ್ದಾರೆ. 2024ರ ಮಧ್ಯಂತರ ಬಜೆಟ್ ಭಾಷಣದಲ್ಲಿ, ಸೀತಾರಾಮನ್ ಕೇಂದ್ರ ಸರ್ಕಾರವು ‘ಶ್ವೇತಪತ್ರ’ವನ್ನು ಮಂಡಿಸಲಿದೆ ಎಂದು ಹೇಳಿದ್ದರು.
ಯುಪಿಎ ಅವಧಿಯ ಹಣಕಾಸಿನ ಬಿಕ್ಕಟ್ಟನ್ನು ನಿವಾರಿಸಲಾಗಿದೆ ಮತ್ತು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಆರ್ಥಿಕತೆ ಉನ್ನತ ಸುಸ್ಥಿರ ಬೆಳವಣಿಗೆಯ ಹಾದಿಯಲ್ಲಿ ದೃಢವಾಗಿದೆ. 2014ರವರೆಗೆ ನಾವು ಎಲ್ಲಿದ್ದೇವೆ, ಈಗ ಎಲ್ಲಿದ್ದೇವೆ ಎಂದು ನೋಡುವುದು ಈಗ ಸೂಕ್ತವಾಗಿದೆ ಮತ್ತು ‘ಶ್ವೇತಪತ್ರ’ ವನ್ನು ಮಂಡಿಸಲಿದ್ದೇವೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಕಾಂಗ್ರೆಸ್‌ನ್ನು ಸೋಲಿಸಿ ಬಿಜೆಪಿ ಅಧಿಕಾರಕ್ಕೆ ಬಂದ 2014ರ ಮೊದಲು ಮತ್ತು ನಂತರ ಭಾರತದ ಆರ್ಥಿಕ ಸ್ಥಿತಿಯನ್ನು ಹೋಲಿಸಿ ಸರ್ಕಾರ ಶ್ವೇತಪತ್ರವನ್ನು ಮಂಡಿಸಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಜನವರಿ 31ರಂದು ಆರಂಭವಾದ ಲೋಕಸಭೆ ಅಧಿವೇಶನವು ಫೆಬ್ರುವರಿ 9ರಂದು ಕೊನೆಗೊಳ್ಳಲಿದೆ.

ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸರ್ಕಾರವು ಸದನಕ್ಕೆ ತರುವ ಯಾವುದೇ ಪತ್ರಗಳ ಬಗ್ಗೆ ಉತ್ತರಿಸಲು ತಮ್ಮ ಪಕ್ಷ ಸಿದ್ಧವಾಗಿದೆ. ನರೇಂದ್ರ ಮೋದಿಗೆ ಕಾಂಗ್ರೆಸ್ ಫೋಬಿಯಾ ಇದೆ. ನಾವು ಹೋರಾಟಕ್ಕೆ ಸಿದ್ಧರಿದ್ದೇವೆ. ಸರ್ಕಾರವು ಶ್ವೇತಪತ್ರ, ಕೆಂಪು ಪತ್ರ, ಕಪ್ಪು ಪತ್ರವನ್ನು ತರಬಹುದು, ನಮಗೆ ಯಾವುದೇ ತೊಂದರೆ ಇಲ್ಲ. ಆದರೆ ಮೆಹುಲ್ ಚೋಕ್ಸಿ ಅವರ ಪತ್ರಗಳನ್ನು ಕೂಡ ಸದನದಲ್ಲಿ ಮಂಡಿಸಬೇಕು ಎಂದು ಚೌಧರಿ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯ ಮುಂದಿನ ಟಾರ್ಗೆಟ್‌ ಕಾಶಿ, ಮಥುರಾ! ಯೋಗಿ ಆದಿತ್ಯನಾಥ್‌ ಹೇಳಿಕೆಯಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...