Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ:...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ ಒಡಿಶಾದಲ್ಲಿ ಮುಂದುವರಿದಿದೆ. ಇಂದು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜಾತಿಯ ಬಗ್ಗೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇತರೆ ಹಿಂದುಳಿದ ವರ್ಗಕ್ಕೆ (ಒಬಿಸಿ ಸಮುದಾಯಕ್ಕೆ) ಸೇರಿಲ್ಲ ಎಂದು ಹೇಳಿದ್ದಾರೆ.

ಒಡಿಶಾದ ಝಾರ್ಸುಗುಡಾದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿ ಮೋದಿ ಒಬಿಸಿ ಸಮುದಾಯದಲ್ಲಿ ಹುಟ್ಟಿಲ್ಲ. ಅವರು ಗುಜರಾತ್‌ನ ತೇಲಿ ಜಾತಿಯಲ್ಲಿ ಜನಿಸಿದ್ದಾರೆ. 2000ನೇ ಇಸವಿಯಲ್ಲಿ ಬಿಜೆಪಿಯಿಂದ ಆ ಸಮುದಾಯಕ್ಕೆ ಒಬಿಸಿ ಎಂಬ ಟ್ಯಾಗ್ ನೀಡಲಾಗಿದೆ. ಅವರು ಸಾಮಾನ್ಯ ವರ್ಗದಲ್ಲಿ ಜನಿಸಿದ್ದಾರೆ ಎಂದು ಹೇಳಿದ್ದಾರೆ.

ಅವರು ತಮ್ಮ ಇಡೀ ಜೀವನದಲ್ಲಿ ಜಾತಿ ಗಣತಿಯನ್ನು ನಡೆಸಲು ಬಿಡುವುದಿಲ್ಲ, ಏಕೆಂದರೆ ಅವರು ಒಬಿಸಿ ಸಮುದಾಯದಲ್ಲಿ ಹುಟ್ಟಿಲ್ಲ, ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ ಎಂದು ರಾಹುಲ್ ಗಾಂಧಿ ಯಾತ್ರೆಯ ವೇಳೆ ಹೇಳಿದ್ದಾರೆ.

ಒಡಿಶಾದಲ್ಲಿ ನಿನ್ನೆ ಭಾರತ್‌ ಜೊಡೋ ನ್ಯಾಯ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ಭಾರತ್ ಜೋಡೋ ನ್ಯಾಯ ಯಾತ್ರೆಯು ನೆರೆಯ ಒಡಿಶಾದಿಂದ ಇಂದು ಛತ್ತೀಸ್‌ಗಢವನ್ನು ಪ್ರವೇಶಿಸಲಿದೆ. ಇದು ನವೆಂಬರ್ 2023ರ ವಿಧಾನಸಭೆ ಚುನಾವಣೆಯ ನಂತರ ಛತ್ತೀಸ್‌ಗಢಕ್ಕೆ ರಾಹುಲ್‌ ಗಾಂಧಿಯವರ ಮೊದಲ ಭೇಟಿಯಾಗಿದೆ. ಜನವರಿ 14ರಂದು ಮಣಿಪುರದಿಂದ ಆರಂಭವಾದ ಯಾತ್ರೆ ಎರಡು ದಿನಗಳ ವಿರಾಮದ ಬಳಿಕ  ಫೆ.11ರಂದು ರಾಯ್‌ಗಢ, ಶಕ್ತಿ ಮತ್ತು ಕೊರ್ಬಾ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಫೆಬ್ರವರಿ 14ರಂದು ಯಾತ್ರೆಯು ಬಲರಾಂಪುರದಿಂದ ಜಾರ್ಖಂಡ್‌ಗೆ ತೆರಳಲಿದೆ.

ಇದನ್ನು ಓದಿ: ಬಿಜೆಪಿಯ ಮುಂದಿನ ಟಾರ್ಗೆಟ್‌ ಕಾಶಿ, ಮಥುರಾ! ಯೋಗಿ ಆದಿತ್ಯನಾಥ್‌ ಹೇಳಿಕೆಯಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...