Homeಮುಖಪುಟಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

ಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಪತ್ರಕರ್ತ ಎನ್. ವೇಣುಗೋಪಾಲ್ ಅವರ ಹೈದರಾಬಾದ್‌ನ ಹಿಮಾಯತ್‌ ನಗರದ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ‘ವೀಕ್ಷಣಂ’ ನಿಯತಕಾಲಿಕೆಯ ಸಂಪಾದಕರಾಗಿರುವ ವೇಣುಗೋಪಾಲ್, ವರವರ ರಾವ್ ಅವರ ಅಳಿಯ.

2018ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸೆಗೆ ಪ್ರಚೋದನೆ ನೀಡಲು ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ವರವರರಾವ್ ಸೇರಿದಂತೆ 15 ಮಂದಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ವರವರರಾವ್ ಗೆ ವೈದ್ಯಕೀಯ ಕಾರಣಕ್ಕೆ 2022 ಆಗಸ್ಟ್‌ನಲ್ಲಿ ಜಾಮೀನು ದೊರೆತಿದೆ.

ನಿಷೇಧಿತ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ)ಯ ನಾಯಕ ಸಂಜಯ್ ದೀಪಕ್ ರಾವ್ ಜೊತೆಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಎನ್ಐಎ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ. ಇದೇ ಆರೋಪದ ಮೇಲೆ ಹೋರಾಟಗಾರ ರವಿ ಶರ್ಮ ಅವರ ನಿವಾಸದಲ್ಲೂ ಎನ್‌ಐಎ ಶೋಧ ನಡೆಸಿದೆ.

ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಸಂಜಯ್ ದೀಪಕ್ ರಾವ್‌ನನ್ನು ಸೈಬರಾಬಾದ್ ಪೊಲೀಸರ ಗುಪ್ತಚರ ಇಲಾಖೆ 2023ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಅದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರ ಸಂಜಯ್ ದೀಪಕ್ ರಾವ್ ಬಗ್ಗೆ ಮಾಹಿತಿ ನೀಡುವವರಿಗೆ 25 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಎನ್ಐಎ ಅಧಿಕಾರಿಗಳು ನನ್ನ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ ಎಂದು ಶೋಧದ ಬಳಿಕ ವೇಣುಗೋಪಾಲ್ ಹೇಳಿದ್ದಾರೆ. “ಎಂಟು ಸದಸ್ಯರ ಎನ್ಐಎ ತಂಡವು ಇಂದು (ಫೆ.8) ಮುಂಜಾನೆ 5 ಗಂಟೆಗೆ ಮನೆಗೆ ಬಂದು ಶೋಧ ವಾರಂಟ್ ತೋರಿಸಿದರು. ಆಗ ನಾನು ಅವರನ್ನು ಮನೆಯ ಒಳಗೆ ಬಿಟ್ಟೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ವೇಣುಗೋಪಾಲ್ ಅವರ ನಿವಾಸದಲ್ಲಿದ್ದ ಎಲ್ಲಾ ಪುಸ್ತಕಗಳನ್ನು ಎನ್‌ಐಎ ಅಧಿಕಾರಿಗಳು ಶೋಧಿಸಿದ್ದಾರೆ. ವೇಣುಗೋಪಾಲ್ ಪತ್ರಕರ್ತರಲ್ಲದೆ ಬರಹಗಾರರೂ ಹೌದು. ಅವರು ಸುಮಾರು 30 ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸುಮಾರು 30 ಪುಸ್ತಕಗಳನ್ನು ಅನುವಾದಿಸಿದ್ದಾರೆ. ಅವರು ಇತ್ತೀಚೆಗೆ ಕವಿ-ಲೇಖಕಿ ಮೀನಾ ಕಂದಸಾಮಿ ಅವರೊಂದಿಗೆ ವರವರ ರಾವ್ ಅವರ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪುಸ್ತಕದ ಶೀರ್ಷಿಕೆ ವರವರ ರಾವ್: ಎ ಲೈಫ್ ಇನ್ ಪೊಯೆಟ್ರಿ ಎಂದಾಗಿದೆ.

ತೆಲಂಗಾಣ ಪೊಲೀಸರು ಇತ್ತೀಚೆಗೆ ವೇಣುಗೋಪಾಲ್ ಸೇರಿದಂತೆ 24 ಜನರ ವಿರುದ್ಧ ಯುಎಪಿಎ ಸೆಕ್ಷನ್ 10, 13, 16, 17, 18, 18 ಬಿ, ಮತ್ತು 20, ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆಯ ಸೆಕ್ಷನ್ 8(1)(2) ಮತ್ತು ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾವೋವಾದಿ ಪಕ್ಷದ ಕೇಂದ್ರ ಸಮಿತಿಯ ಸದಸ್ಯ ಎಂದು ಪೊಲೀಸರು ಹೇಳಿಕೊಳ್ಳುವ ಸಂಜಯ್ ದೀಪಕ್ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆಯ ಆಧರಿಸಿ ವೇಣುಗೋಪಾಲ್ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗ್ತಿದೆ.

ಎಫ್‌ಐಆರ್‌ನಲ್ಲಿ ಏಳು ಮಲಯಾಳಿ ಬುದ್ಧಿಜೀವಿಗಳನ್ನು ಹೆಸರಿಸಲಾಗಿದೆ. ಹಿರಿಯ ಪತ್ರಕರ್ತ ಕೆಪಿ ಸೇತುನಾಥ್, ಮಾನವ ಹಕ್ಕುಗಳ ಕಾರ್ಯಕರ್ತ ಸಿಪಿ ರಶೀದ್, ಮಾರ್ಕ್ಸ್‌ವಾದಿ ಬುದ್ಧಿಜೀವಿ ಕೆ ಮುರಳೀಧರನ್, ಸಿಪಿ ಇಸ್ಮಾಯಿಲ್, ಸಿಪಿ ಮೊಯಿನುದ್ದೀನ್, ಪ್ರದೀಪ್ ಮತ್ತು ವರ್ಗೀಸ್ ಅವರ ಹೆಸರು ಎಫ್‌ಐಆರ್‌ನಲ್ಲಿದೆ. ಕೇರಳದಲ್ಲಿ ಸಿಪಿ ರಶೀದ್ ಮತ್ತು ಸಿಪಿ ಇಸ್ಮಾಯಿಲ್ ಅವರ ಮನೆಗಳಲ್ಲೂ ಎನ್‌ಐಎ ಶೋಧ ನಡೆಸಿದೆ.

ಎರಡು ದಶಕಗಳಿಗೂ ಹೆಚ್ಚು ಅನುಭವವಿರುವ ಹೆಸರಾಂತ ಪತ್ರಕರ್ತ ಸೇತುನಾಥ್ ಅವರು ಮಾನವ ಹಕ್ಕುಗಳಿಂದ ಹಿಡಿದು ಅಭಿವೃದ್ಧಿಯವರೆಗಿನ ವಿವಿಧ ವಿಷಯಗಳ ಕುರಿತು ಅನೇಕ ವಿಮರ್ಶಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಪ್ರತಿಭಟನಾ ಸಭೆಗಳು ಮತ್ತು ಜನರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಲಬಾರ್ ಜರ್ನಲ್ ನ ಸಂಪಾದಕರೂ ಆಗಿದ್ದಾರೆ.

‘ಸಶಸ್ತ್ರ ಕ್ರಾಂತಿಯ ಮೂಲಕ ಭಾರತ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ’ ತಾನು ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಕೆಲವು ಬುದ್ಧಿಜೀವಿಗಳನ್ನು ಭೇಟಿಯಾಗಿದ್ದಾಗಿ ಸಂಜಯ್ ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಆಧರಿಸಿ ಪತ್ರಕರ್ತರು ಮತ್ತು ಬರಹಗಾರರ ಮೇಲೆ ಪ್ರಕರಣ ದಾಖಲಿಸಿ ಶೋಧ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...