Homeಕರ್ನಾಟಕ'ನಿಮಗೆ ನಾಲಿಗೆಗಳೆಷ್ಟು..?'; 'ದೆಹಲಿ ಚಲೋ' ಟೀಕಿಸಿದ ಬಿಜೆಪಿಗರ ವಿರುದ್ಧ ಸಿಎಂ ಕಿಡಿ

‘ನಿಮಗೆ ನಾಲಿಗೆಗಳೆಷ್ಟು..?’; ‘ದೆಹಲಿ ಚಲೋ’ ಟೀಕಿಸಿದ ಬಿಜೆಪಿಗರ ವಿರುದ್ಧ ಸಿಎಂ ಕಿಡಿ

- Advertisement -
- Advertisement -

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ತೆರಿಗೆ ತಾರತಮ್ಯ ಖಂಡಿಸಿ ಫೆಬ್ರವರಿ 7ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಕಾಂಗ್ರೆಸ್‌ ನಾಯಕರ ಪ್ರತಿಭಟನೆಯನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಟೀಕಿಸಿದ್ದರು; ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ‘ನಿಮಗೆ ನಾಲಿಗೆಗಳೆಷ್ಟು..?’ ಎಂದು ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘ದೆಹಲಿ ಚಲೋ’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ. ಇದೇ ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿರುವ ಹೇಳಿಕೆಗಳನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ’ ಎಂದು ಸವಾಲು ಹಾಕಿದ್ದಾರೆ.

‘ಕೇಂದ್ರ ಹಣಕಾಸು ಆಯೋಗದ ವಿರುದ್ದ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿ ಅವರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಡಿಸೆಂಬರ್ ಆರರಂದು ಹೇಳಿಕೆಯೊಂದನ್ನು ನೀಡಿ ‘ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ’ ಎಂದು ಪ್ರಶ್ನಿಸಿದ್ದರು. 2008ರಲ್ಲಿ ವಡೋದರಾದ ಸಮಾರಂಭದಲ್ಲಿ ಮಾತನಾಡುತ್ತಾ ‘ಗುಜರಾತ್ ರಾಜ್ಯ ಪ್ರತಿವರ್ಷ ರೂ.40,000 ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಪಾವತಿಸುತ್ತಿದೆ. ಅದರಲ್ಲಿ ಕೇವಲ ಶೇಕಡಾ 2.5ರಷ್ಟು ಮಾತ್ರ ರಾಜ್ಯಕ್ಕೆ ವಾಪಸು ನೀಡಲಾಗುತ್ತದೆ. ಇಷ್ಟು ಜುಜುಬಿ ಮೊತ್ತವನ್ನು ವಾಪಸು ನೀಡುವ ಬದಲಿಗೆ ಒಂದು ವರ್ಷದ ಅವಧಿಗೆ ನಮ್ಮ ತೆರಿಗೆಯನ್ನು ನಾವೇ ಬಳಸಿಕೊಳ್ಳಲು ಅವಕಾಶ ನೀಡಬಾರದೇಕೆ? ಎಂದು ಕೇಂದ್ರ ಸರ್ಕಾರದ ಅಸ್ತಿತ್ವನ್ನೇ ಪ್ರಶ್ನಿಸಿದ್ದರು’ ಎಂದು ಮೋದಿಯವರ ಹಳೆಯ ಟ್ವೀಟ್ ಉಲ್ಲೇಖಿಸಿ ತಿರುಗೇಟು ಕೊಟ್ಟಿದ್ದಾರೆ.

‘ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಜನವರಿ ಒಂಭತ್ತರಂದು ನಡೆದಿದ್ದ ಹತ್ತನೇ ಪ್ರವಾಸಿ ಭಾರತೀಯ ಸಮ್ಮೇಳನದಲ್ಲಿ ಮಾತನಾಡುತ್ತಾ ‘ಕೇಂದ್ರ ಸರ್ಕಾರ ಇಲ್ಲವೆ ಪ್ರಧಾನಮಂತ್ರಿಯವರಿಂದ ನಮಗೆ ಚಿಕ್ಕಾಸಿನ ನೆರವು ಸಿಗುತ್ತಿಲ್ಲ. ನಾವು ನಮ್ಮ ಸಂಪನ್ಮೂಲವನ್ನೇ ನೆಚ್ಚಿಕೊಂಡಿದ್ದೇವೆ’ ಎಂದು ವಿದೇಶಿ ಗಣ್ಯರಿದ್ದ ವೇದಿಕೆಯಲ್ಲಿಯೇ ದೂರಿದ್ದರು. ಹದಿನಾಲ್ಕನೇ ಹಣಕಾಸು ಆಯೋಗದ ಜೊತೆಗಿನ ಮಾತುಕತೆಯಲ್ಲಿ ಇದೇ ನರೇಂದ್ರ ಮೋದಿಯವರು ‘ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸುವ ತೆರಿಗೆಯಲ್ಲಿ ಕನಿಷ್ಠ ಶೇಕಡಾ 35ರಿಂದ 50ರ ವರೆಗೆ ರಾಜ್ಯಕ್ಕೆ ಪಾಲು ನೀಡಬೇಕು’ ಎಂದು ವಾದಿಸಿದ್ದರು. ‘ತೆರಿಗೆ ಹಂಚಿಕೆಗೆ ಅನುಸರಿಸಲಾಗುತ್ತಿರುವ ಮಾನದಂಡವನ್ನು ಹಣಕಾಸು ಆಯೋಗ ಬದಲಾವಣೆ ಮಾಡಬೇಕು, ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮತ್ತು ಅಭಿವೃದ್ದಿ ಕಾರ್ಯಗಳನ್ನು ನಡೆಸುವ ರಾಜ್ಯಗಳಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು. ಹಣಕಾಸು ನಿರ್ವಹಣೆಯಲ್ಲಿ ಸೋತಿರುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿ ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡುತ್ತಿರುವ ರಾಜ್ಯಗಳನ್ನು ನಿರ್ಲಕ್ಷಿಸುವ ಈಗಿನ ತೆರಿಗೆ ಹಂಚಿಕೆ ವಿಧಾನವನ್ನು ಬದಲಿಸಬೇಕಾಗಿದೆ. ಮೂಲಸೌಕರ್ಯಗಳ ಸುಧಾರಣೆ ಮತ್ತು ದೇಶದ ಅಭಿವೃದ್ದಿಗೆ ಗಣನೀಯ ಕೊಡುಗೆಗಳನ್ನು ನೀಡುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು’ ಎಂದು ಹಣಕಾಸು ಆಯೋಗದ ಮುಂದೆ ವಾದ ಮಾಡಿದ್ದರು. ಇದು ಕೇಂದ್ರ ಸರ್ಕಾರದ ವಿರುದ್ಧದ ನಿಲುವಲ್ಲವೇ’ ಎಂದು ಬಿಜೆಪಿ ನಾಯಕರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ಇದೇ ರೀತಿ ಕೇಂದ್ರ ಸರ್ಕಾರ ತನ್ನನ್ನು ರಕ್ಷಿಸಿಕೊಳ್ಳಲು ಮತ್ತು ವಿರೋಧಿಗಳನ್ನು ಹಣಿಯಲು ಸಿಬಿಐ ಸಂಸ್ಥೆಯನ್ನು ದುರುಪಯೋಗ ಮಾಡುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿಯಾಗಿ ಆರೋಪಿಸುತ್ತಿದ್ದ ನರೇಂದ್ರ ಮೋದಿಯವರು ಈಗ ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದವರನ್ನು ದೇಶದ್ರೊಹಿಗಳೆಂದು ದೂರುತ್ತಿದ್ದಾರೆ. ಯುಪಿಎ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ಕಾನೂನನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದ ನರೇಂದ್ರ ಮೋದಿಯವರು ‘ಇನ್ನು ಮುಂದೆ ನಿತ್ಯ ಬಳಕೆಯ ಉಪ್ಪು, ಸಾಂಬಾರ ಪದಾರ್ಥಗಳನ್ನೂ ವಿದೇಶಿಯರೇ ಮಾರುತ್ತಾರೆ’ ಎಂದು ವ್ಯಂಗ್ಯವಾಡಿದ್ದರು. ಎಫ್ ಡಿ ಐ ನಿಂದಾಗಿ ದೇಶದ ಸಣ್ಣ ಸಣ್ಣ ಅಂಗಡಿ ಮಾಲೀಕರು ಮತ್ತು ಉತ್ಪಾದನಾ ಕ್ಷೇತ್ರದಲ್ಲಿರುವವರು ನಿರುದ್ಯೋಗಿಗಳಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯತ್ತಿದ್ದಾಗ ನರೇಂದ್ರ ಮೋದಿಯವರು ‘ಯುಪಿಎ ಸರ್ಕಾರ ಮತ್ತು ರೂಪಾಯಿ ಉರುಳಿ ಕೆಳಗೆ ಬೀಳುವುದರದಲ್ಲಿ ಪೈಪೋಟಿ ನಡೆಸುವಂತಿದೆ’ ಎಂದು ವ್ಯಂಗ್ಯವಾಡಿದ್ದರು’ ಎಂದು ಕಿಡಿಕಾರಿದ್ದಾರೆ.

‘ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಗುಜರಾತ್ ಜನ ಬವಣೆ ಪಡುವಂತಾಗಿದೆ ಎಂದು ಗೋಳಿಟ್ಟಿದ್ದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಇಳಿಯುತ್ತಿದ್ದರೂ ಪೆಟ್ರೋಲ್ ಬೆಲೆ ಏರಿಸುತ್ತಲೇ ಹೋದರು. ಇದರಿಂದ ಗುಜರಾತಿಗಳು ಮಾತ್ರವಲ್ಲ ಇಡೀ ದೇಶದ ಜನತೆ ಗೋಳಾಡಬೇಕಾಯಿತು. ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಆಧಾರ್ ಗುರುತಿನ ಚೀಟಿಯ ಪ್ರಬಲ ವಿರೋಧಿಯಾಗಿದ್ದ ನರೇಂದ್ರ ಮೋದಿಯವರು ‘ಆಧಾರ್ ಕಾರ್ಡ್ ಗೆ ಭವಿಷ್ಯದ ಮುನ್ನೋಟವೇ ಇಲ್ಲ, ಇದು ಕೇವಲ ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದೇ ಮೋದಿಯವರು ಪ್ರಧಾನಿಯಾದ ನಂತರ ತಮ್ಮ ನಿಲುವು ಬದಲಿಸಿ ಆಧಾರ್ ಗುರುತಿನ ಚೀಟಿಯ ಪ್ರಬಲ ಪ್ರತಿಪಾದಕರಾಗಿದ್ದಾರೆ. ಇಂತಹ ಹತ್ತಾರು ಯೂ ಟರ್ನ್ ಗಳನ್ನು ನಾನು ಪಟ್ಟಿ ಮಾಡಿಕೊಡಬಹುದು. ಆ ದಿನಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದ, ಟೀಕಿಸಿದ್ದ ನರೇಂದ್ರ ಮೋದಿ ಅವರ ಹೇಳಿಕೆಗಳಿಂದ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ಈಗ ನಮ್ಮ ಪ್ರತಿಭಟನೆಯಿಂದ ಹೇಗೆ ಎದುರಾಯಿತು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿಯವರೇ ವಿವರಿಸಬೇಕು.
ಈ ಆತ್ಮವಂಚನೆಯ ನಡವಳಿಕೆಯನ್ನು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರೂ ಮುಂದುವರಿಸಿದ್ದಾರೆ’ ಎಂದು ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘2022ರ ಡಿಸೆಂಬರ್ ತಿಂಗಳಲ್ಲಿ ವಿಧಾನಸಭೆಯಲ್ಲಿಯೇ ನಾನು ಮಾತನಾಡುತ್ತಾ ’15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದಾಗ ಆಗ ಮುಖ್ಯಮಂತ್ರಿಗಳಾಗಿದ್ದ ಬೊಮ್ಮಾಯಿಯವರು ಅನ್ಯಾಯವಾಗಿರುವುದು ನಿಜ ಎಂದು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ, ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ. ಇದೇ ಬೊಮ್ಮಾಯಿಯವರು ಹಣಕಾಸು ಆಯೋಗದಿಂದ ಅನ್ಯಾಯವೇ ಆಗಿಲ್ಲ ಎಂದು ಕೂಗಾಡುತ್ತಿದ್ದಾರೆ. ಇನ್ನೊಬ್ಬರು ಎಚ್ ಡಿ.ಕುಮಾರಸ್ವಾಮಿ ಅವರಿಗೆ ಸತ್ಯ ಮಾತನಾಡಿಯೇ ಗೊತ್ತಿಲ್ಲ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ಮಾಡುವಾಗ ಗುಜರಾತ್ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಈಗ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳುತ್ತಿರುವ ಕುಮಾರಸ್ವಾಮಿ ಗುಜರಾತ್ ರಾಜ್ಯದ ಹೆಸರೇ ಎತ್ತುತ್ತಿಲ್ಲ. ಸುಳ್ಳಿನಲ್ಲಿ ಇವರು ಮೋದಿಯವರ ಜೊತೆಯಲ್ಲಿ ಪೈಪೋಟಿಗಿಳಿದಂತಿದೆ’ ಎಂದು ಕಮಲ-ದಳ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ; ಮುಖ್ಯಮಂತ್ರಿಗಳ ‘ಜನಸ್ಪಂದನ’ ಕಾರ್ಯಕ್ರಮ: ಒಟ್ಟು 12,372 ಅರ್ಜಿಗಳ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...