HomeUncategorizedಸ್ವಾಮಿನಾಥನ್‌ 'ಎಂಎಸ್‌ಪಿ' ಸೂತ್ರದ ಬಗ್ಗೆ ಕೇಂದ್ರ ಸರ್ಕಾರ ಮೌನವಾಗಿದೆ: ಜೈರಾಮ್ ರಮೇಶ್

ಸ್ವಾಮಿನಾಥನ್‌ ‘ಎಂಎಸ್‌ಪಿ’ ಸೂತ್ರದ ಬಗ್ಗೆ ಕೇಂದ್ರ ಸರ್ಕಾರ ಮೌನವಾಗಿದೆ: ಜೈರಾಮ್ ರಮೇಶ್

- Advertisement -
- Advertisement -

ಹಿರಿಯ ವಿಜ್ಞಾನಿಗಳಾದ ಎಂಎಸ್ ಸ್ವಾಮಿನಾಥನ್ ಅವರಿಗೆ ಮೋದಿ ಸರ್ಕಾರ ಭಾರತ ರತ್ನ ಘೋಷಿಸಿದೆ. ಆದರೆ, ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಸ್ವಾಮಿನಾಥನ್ ಸೂತ್ರವನ್ನು ಜಾರಿಗೆ ತರುವ ವಿಚಾರದಲ್ಲಿ ಸರ್ಕಾರ ಮೌನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಮೂರು ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದ ನಂತರ ಜೈರಾಮ್ ರಮೇಶ್ ಅವರು ಪ್ರತಿಕ್ರಿಯೆ ನೀಡಿದ್ದು, ‘ಮೋದಿ ಸರ್ಕಾರದ ಹಠಮಾರಿತನದಿಂದಾಗಿ 700 ರೈತರು ತಮ್ಮ ಚಳವಳಿಯಲ್ಲಿ ಹುತಾತ್ಮರಾದರು; ಭರವಸೆ ನೀಡಿದ ಸರ್ಕಾರ ಅವರಿಗೆ ದ್ರೋಹ ಮಾಡಿದೆ. ರೈತರು ಇಂದಿಗೂ ದೆಹಲಿಗೆ ಮೆರವಣಿಗೆ ಬರಲು ಸಿದ್ಧರಾಗಿದ್ದಾರೆ. ಆದರೆ ಸರ್ಕಾರ ಅವರ ಮಾತು ಕೇಳುತ್ತಿಲ್ಲ’ ಎಂದು ಜೈರಾಮ್ ರಮೇಶ್ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ರೈತರಿಗೆ ನ್ಯಾಯ ಸಿಗುವುದೆ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ’ ಎಂದು ಹೇಳಿರುವ ಜೈರಾಮ್ ರಮೇಶ್ ಅವರು ಕಾಂಗ್ರೆಸ್‌ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಉದ್ದೇಶಕ್ಕೆ ಲಿಂಕ್ ಮಾಡಿದ್ದಾರೆ. ‘ರೈತರಿಗೆ ನ್ಯಾಯ ಒದಗಿಸುವುದು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ. ಸ್ವಾಮಿನಾಥನ್ ಸೂತ್ರದ ಆಧಾರದ ಮೇಲೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ಖಾತರಿ ನೀಡಬೇಕು ಎಂಬುದು ‘ಕಿಸಾನ್ ನ್ಯಾಯ’ದ ನಮ್ಮ ಬೇಡಿಕೆಯಾಗಿದೆ. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಜಿ ಮತ್ತು ಸ್ವಾಮಿನಾಥನ್ ಜಿ ಅವರಿಗೆ ನಿಜವಾದ ಶ್ರದ್ಧಾಂಜಲಿ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಎಂಎಸ್ ಸ್ವಾಮಿನಾಥನ್ ಅವರ ಪುತ್ರಿ, ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್, ಎಂಎಸ್ ಸ್ವಾಮಿನಾಥನ್ ಅವರು ತಮ್ಮ ಜೀವಿತಾವಧಿಯಲ್ಲಿ ಈ ಸುದ್ದಿ ಬಂದಿದ್ದರೆ ಸಂತೋಷವಾಗಿರುತ್ತಿದ್ದರು ಎಂದು ಹೇಳಿದ್ದಾರೆ. ‘ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಕೆಲಸ ಮಾಡಲಿಲ್ಲ. ಅವರಿಗೆ ಸಾಕಷ್ಟು ಮನ್ನಣೆ ಬಂದಿತು’ ಎಂದು ಸೌಮ್ಯ ಹೇಳಿದರು. ಎಂಎಸ್ ಸ್ವಾಮಿನಾಥನ್ ಅವರು ಸೆಪ್ಟೆಂಬರ್ 28, 2023 ರಂದು ನಿಧನರಾದರು.

ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನವನ್ನು ಸ್ವಾಗತಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ.

‘ಎಂಎಸ್ ಸ್ವಾಮಿನಾಥನ್ ಮತ್ತು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಇಬ್ಬರೂ ತಮ್ಮ ಬೇಡಿಕೆಗಳಿಗಾಗಿ ಇನ್ನೂ ಹೋರಾಟ ನಡೆಸುತ್ತಿರುವ ರೈತರಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಯುಪಿ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು. ‘ರೈತ ನಾಯಕ (ಚೌಧರಿ ಚರಣ್ ಸಿಂಗ್) ಭಾರತ ರತ್ನ ಪಡೆದಿದ್ದಾರೆ. ನಾನು ಎಲ್ಲ ರೈತರನ್ನು ಅಭಿನಂದಿಸಲು ಬಯಸುತ್ತೇನೆ’ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ; ಚರಣ್ ಸಿಂಗ್, ಪಿವಿ ನರಸಿಂಹರಾವ್, ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...