Homeಮುಖಪುಟಮೋದಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ: 8 ಪ್ರಮುಖ ದೋಷಾರೋಪಗಳ ಉಲ್ಲೇಖ

ಮೋದಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ: 8 ಪ್ರಮುಖ ದೋಷಾರೋಪಗಳ ಉಲ್ಲೇಖ

- Advertisement -
- Advertisement -

ಸಂಸದೀಯ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿದ್ದಕ್ಕಾಗಿ ಮುಖ್ಯವಾಹಿನಿಯ ಹಲವು ಸಾಮಾಜಿಕ ಸಂಘಟನೆಗಳು ಹಾಗೂ ಸಾಮಾಜಿಕ ಹೋರಾಟಗಾರರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ನ್ನು ಬಿಡುಗಡೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಪ್ರಜಾತಾಂತ್ರಿಕ ಮೌಲ್ಯಗಳನ್ನು ಉಲ್ಲಂಘಿಸಿರುವ ಎಂಟು ಪ್ರಮುಖ ದೋಷಾರೋಪಗಳನ್ನು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಚಾರ್ಜ್‌ಶೀಟ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ 8 ಆರೋಪಗಳನ್ನು ಹೊರಿಸಲಾಗಿದ್ದು, ಅದನ್ನು ಸಮರ್ಥಿಸುವ ಸಾಕ್ಷ್ಯಗಳನ್ನು ಒದಗಿಸಲಾಗಿದೆ. ಈ ಚಾರ್ಜ್‌ಶೀಟ್ ಸರಕಾರದ ತಪ್ಪು ಕ್ರಮಗಳ ಪಟ್ಟಿಯಾಗಿದ್ದು, ಇದರಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ. ಈ ದೋಷಾರೋಪ ಪಟ್ಟಿಯನ್ನು ಸಾಮಾಜಿಕ ಸಂಘಟನೆಗಳು ಹಾಗೂ ಗಣ್ಯ ವ್ಯಕ್ತಿಗಳು ಅನುಮೋದಿಸಿದ್ದಾರೆ. ಈ ಪೈಕಿ ನ್ಯಾಯಕ್ಕಾಗಿ ಅಖಿಲ ಭಾರತೀಯ ವಕೀಲರ ಸಂಘಟನೆ, ಅಖಿಲ ಭಾರತ ಭಾರತೀಯ ಪ್ರಜೆಗಳ ವಿಜ್ಞಾನ ಜಾಲ, ನಾಗರಿಕ ಹಕ್ಕುಗಳ ರಕ್ಷಣಾ ಒಕ್ಕೂಟ ಸೇರಿದಂತೆ ಒಟ್ಟು 22 ಸಂಘಟನೆಗಳು ಸೇರಿವೆ.

‘ವೀ ದಿ ಪೀಪಲ್ ಆಫ್ ಇಂಡಿಯಾ ವರ್ಸಸ್ ಇಂಡಿಯಾ ಸರ್ಕಾರ’ ಎಂಬ ಶೀರ್ಷಿಕೆಯ ಚಾರ್ಜ್ ಶೀಟ್‌ನಲ್ಲಿ, ಹಲವಾರು ನಾಗರಿಕ ಸಮಾಜದ ಗುಂಪುಗಳು ಮತ್ತು ಕಾರ್ಯಕರ್ತರು, ಸಂಸದೀಯ ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತ ದಾಳಿಗಾಗಿ ಸರ್ಕಾರವನ್ನು ಟೀಕಿಸಿದ್ದಾರೆ. ಆಡಳಿತ ಪಕ್ಷದ ಉದ್ದೇಶಪೂರ್ವಕ ಪ್ರಕ್ರಿಯೆಗಳು ಮತ್ತು ಕಾನೂನುಗಳಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿರುವುದನ್ನು ಎತ್ತಿ ತೋರಿಸುವುದು ಚಾರ್ಜ್ ಶೀಟ್‌ನ ಉದ್ದೇಶವಾಗಿದೆ ಎಂದು ಹೇಳಲಾಗಿದೆ.

ಚಾರ್ಜ್ ಶೀಟ್‌ನ್ನು ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಗಿದೆ. ಸಂಸತ್ತಿನ
ಹೊಸ ಕಟ್ಟಡದಲ್ಲಿ ಸದನ ನಡೆಯುವ ಈ ಸನ್ನಿವೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಮೇಲೆ ಕಳೆದ ಹತ್ತು ವರ್ಷಗಳಿಂದ ಸತತವಾಗಿ ದಾಳಿ ಮಾಡಲಾಗುತ್ತಿದೆ ಎಂದು ಹೇಳಿದೆ. ಸಂಸತ್ತನ್ನು ಬಹುಮತದ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನು ರಚನೆಯ ಸಾಧನವಾಗಿ ಪರಿವರ್ತಿಸುವ ಸರ್ಕಾರದ ಉದ್ದೇಶಪೂರ್ವಕ ಕಾರ್ಯವಿಧಾನಗಳು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಚಾರ್ಜ್ ಶೀಟ್ ಸೂಚಿಸುತ್ತದೆ. ಸಂಸದೀಯ ಪ್ರಜಾಪ್ರಭುತ್ವದ ಇಂತಹ ಕ್ರಮಗಳು ಪ್ರಜಾಪ್ರಭುತ್ವದ ಪತನಕ್ಕೆ ಕಾರಣವಾಗುತ್ತದೆ.
ಚರ್ಚೆಗೆ ಅವಕಾಶವನ್ನು ನಿರ್ಬಂಧಿಸಲಾಗುತ್ತಿದೆ, ಕಳೆದ ಎರಡು ಲೋಕಸಭೆ ಅವಧಿಗಳಲ್ಲಿ ಕಡಿಮೆ ಸಂಖ್ಯೆಯ ಅಧಿವೇಶನಗಳನ್ನು ನಡೆಸಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿತ ಅಂಶಗಳು:

ದೋಷಾರೋಪ 1: ಉಪ ಲೋಕಸಭಾಧ್ಯಕ್ಷರನ್ನು ನೇಮಕ ಮಾಡಿಲ್ಲ:

2019ರಲ್ಲಿ 17ನೇ ಲೋಕಸಭೆಯು ಅಸ್ತಿತ್ವಕ್ಕೆ ಬಂದ ಬಳಿಕ ಲೋಕಸಭೆಯಲ್ಲಿ ಉಪ ಲೋಕಸಭಾಧ್ಯಕ್ಷರನ್ನು ಚುನಾಯಿಸಿಲ್ಲ. ಭಾರತದ ಸಂವಿಧಾನದ 97ನೇ ವಿಧಿಯ ಪ್ರಕಾರ, ಲೋಕಸಭಾಧ್ಯಕ್ಷ ಹಾಗೂ ಉಪ ಲೋಕಸಭಾಧ್ಯಕ್ಷರನ್ನು ಚುನಾಯಿಸುವುದು ಕಡ್ಡಾಯವಾಗಿದೆ. ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಉಪ ಲೋಕಸಭಾಧ್ಯಕ್ಷರಿಲ್ಲದೆ ಸರಕಾರ ತನ್ನ ಅವಧಿಯನ್ನು ಮುಗಿಸಿದೆ. ಲೋಕಸಭಾಧ್ಯಕ್ಷರು ಸರಕಾರದ ನಾಮನಿರ್ದೇಶಿತರಾಗಿದ್ದರೆ, ಉಪ ಸಭಾಧ್ಯಕ್ಷರು ವಿರೋಧ ಪಕ್ಷಗಳ ನಾಮ ನಿರ್ದೇಶಿತರಾಗಿರುತ್ತಾರೆ.

ದೋಷಾರೋಪ 2: ಕಡಿಮೆ ಸಂಖ್ಯೆಯ ಅಧಿವೇಶನ

ಲೋಕಸಭೆಯ ಪೂರ್ಣಾವಧಿಯಲ್ಲಿ ಕಡಿಮೆ ಸಂಖ್ಯೆಯ ಅಧಿವೇಶನಗಳನ್ನು ನಡೆಸುವುದರೊಂದಿಗೆ ಸಂಸತ್ತನ್ನು ತನ್ನ ಇಚ್ಛೆಗನುಸಾರವಾಗಿ ನಿಯಂತ್ರಿಸಲಾಗಿದೆ. ಲೋಕಸಭೆಯ ಅವಧಿಯಾದ 2014-2019ರ ಐದು ವರ್ಷಗಳ ನಡುವೆ ಕೇವಲ 331 ಅಧಿವೇಶವನಗಳನ್ನು ಮಾತ್ರ ನಡೆಸಲಾಗಿದೆ. ಆದರೆ 17ನೇ ಲೋಕಸಭೆಯು ಅದಕ್ಕಿಂತ ಕಡಿಮೆ ಸಂಖ್ಯೆಯ ಅಧಿವೇಶನ ಅಂದರೆ 278 ಅಧಿವೇಶನಗಳನ್ನು ಮಾತ್ರ ನಡೆಸಲಾಗಿದೆ.

ದೋಷಾರೋಪ 3: ಹೆಚ್ಚು ಸುಗ್ರೀವಾಜ್ಞೆ ಜಾರಿಗೊಳಿಸಿರುವುದು

ಮೋದಿ ಆಡಳಿತದಲ್ಲಿ ಹೆಚ್ಚು ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಲಾಗಿದೆ.  2014-2021ರ ಅವಧಿಯಲ್ಲಿ 76 ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಲಾಗಿದೆ.

ದೋಷಾರೋಪ 4: ಚರ್ಚೆಗಳಿಲ್ಲದೆ ಮಸೂದೆಗಳನ್ನು ಅಂಗೀಕರಿಸುವುದು

ವಿರೋಧ ಪಕ್ಷಗಳ ಸಂಸದರ ಅನುಪಸ್ಥಿತಿಯಲ್ಲಿ ಪ್ರಜಾಸತ್ತಾತ್ಮಕ ಚರ್ಚೆಯಿಲ್ಲದೆ ಮೋದಿ ಆಡಳಿತದಲ್ಲಿ ಮಸೂದೆಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ. 17ನೇ ಲೋಕಸಭಾ ಅವಧಿಯಲ್ಲಿ ಲೋಕಸಭೆಯಲ್ಲಿ 86 ಮಸೂದೆಗಳು ಹಾಗೂ ರಾಜ್ಯಸಭೆಯಲ್ಲಿ 103 ಮಸೂದೆಗಳು ಯಾವುದೇ ಚರ್ಚೆಯಿಲ್ಲದೆ ಅಂಗೀಕಾರಗೊಂಡಿವೆ. 2023ರ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಹೆಚ್ಚಿನ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಉಭಯ ಸದನಗಳಲ್ಲಿ 14 ಮಸೂದೆಗಳನ್ನು ಕೇವಲ 3 ದಿನಗಳಲ್ಲಿ ಅಂಗೀಕರಿಸಲಾಗಿದೆ.

ದೋಷಾರೋಪ 5: ಶಾಸನ ರೂಪಿಸುವಾಗ ಪಾರದರ್ಶಕತೆ ಕೊರತೆ

ಶಾಸನ ರೂಪಿಸುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಕೊರತೆ, ಸೂಕ್ತ ರೀತಿಯಲ್ಲಿ ಸಾರ್ವಜನಿಕ ಸಮಾಲೋಚನೆ ನಡೆಸದಿರುವುದು, ಶಾಸನ ಪೂರ್ವ ಸಮಾಲೋಚನಾ ನೀತಿಯ ಉಲ್ಲಂಘನೆ ಹಾಗೂ ಮಸೂದೆಗಳನ್ನು ಸ್ಥಾಯಿ ಸಮಿತಿಗಳಿಗೆ ರವಾನಿಸದಿರುವುದು ಕಂಡು ಬಂದಿದೆ. 2009-2014ರ ಅವಧಿಯಲ್ಲಿ ಶೇ. 71ರಷ್ಟು ಮಸೂದೆಗಳನ್ನು ಸ್ಥಾಯಿ ಸಮಿತಿಗೆ ಶಿಫಾರಸು ಮಾಡಲಾಗಿದೆ, 2019ರಿಂದ ಕೇವಲ ಶೇ.16ರಷ್ಟು ಮಸೂದೆಗಳನ್ನು ಮಾತ್ರ ಸ್ಥಾಯಿ ಸಮಿತಿಗೆ ಶಿಫಾರಸು ಮಾಡಲಾಗಿದೆ. ಲೋಕಸಭೆಯಲ್ಲಿ ಮಂಡಿಸಲಾಗಿರುವ 301 ಮಸೂದೆಗಳ ಪೈಕಿ ಕೇವಲ 74 ಮಸೂದೆಗಳು ಅಂದರೆ ಶೇ. 24.5ರಷ್ಟು ಮಸೂದೆಗಳನ್ನು ಮಾತ್ರ 2014-2021ರ ನಡುವೆ ಸಾರ್ವಜನಿಕ ಸಮಾಲೋಚನೆಗೆ ಬಿಡುಗಡೆ ಮಾಡಲಾಗಿದೆ. 74 ಮಸೂದೆಗಳ ಪೈಕಿ ಕನಿಷ್ಠ 40 ಮಸೂದೆಗಳನ್ನು ಶಾಸನಪೂರ್ವ ಸಮಾಲೋಚನಾ ನೀತಿಯ ಪ್ರಕಾರ 30 ದಿನಗಳ ಕಾಲ ಸಮಾಲೋಚನೆಗಾಗಿ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಲಾಗಿದೆ.

ದೋಷಾರೋಪ 6: ಚುನಾವಣಾ ಬಾಂಡ್ ಹಾಗೂ ಹಣಕಾಸು ಮಸೂದೆ ಸೇರಿದಂತೆ ನಿರ್ಣಾಯಕ ಮಸೂದೆಗಳನ್ನು ಸಾಕಷ್ಟು ಪರಿಶೀಲನೆ ನಡೆಸದೆ ಅಂಗೀಕಾರ

2016-2023ರ ಮಧ್ಯೆ ಸರಾಸರಿ ಶೇ.79ರಷ್ಟು ಬಜೆಟ್‌ನ್ನು ಯಾವುದೇ ಚರ್ಚೆ ಇಲ್ಲದೆ ಅಂಗೀಕರಿಸಲಾಗಿದೆ.  ಕಡಿಮೆ ಸಂಖ್ಯೆಯ ಅಧಿವೇಶನ, ಕಡಿಮೆ ಅವಧಿಯ ಬಜೆಟ್ ಅಧಿವೇಶನಗಳು, ಕಳಪೆಯಾಗಿ ಯೋಜಿಸಲಾದ ಕಾರ್ಯಸೂಚಿಗಳ ಮೂಲಕ ಬಜೆಟ್‌ನ ಕೆಲ ಭಾಗವನ್ನು ಮಾತ್ರ ವಿಸ್ತೃತವಾಗಿ ಚರ್ಚಿಸಿ, ದೊಡ್ಡ ಭಾಗವನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ.

ದೋಷಾರೋಪ 7: ವಿರೋಧ ಪಕ್ಷಗಳ ಸಂಸದರ ಸಾಮೂಹಿಕ ಅಮಾನತು

2023ರ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯ ಇತಿಹಾಸದಲ್ಲೇ ಅತಿಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿತ್ತು. ಸಂಸತ್ತಿನ ಭದ್ರತಾ ವೈಫಲ್ಯದ ಕುರಿತು ವಿರೋಧ ಪಕ್ಷಗಳ ಸಂಸದರು ಚರ್ಚೆಗೆ ಆಗ್ರಹಿಸಿದಾಗ, ಈ ಹಿಂದೆಂದೂ ಇಲ್ಲದಂತೆ 146 ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಯಿತು. ಇದು ಇಲ್ಲಿಯವರೆಗೆ ಅಮಾನತುಗೊಂಡಿರುವ ಸಂಸದರ ಗರಿಷ್ಠ ಸಂಖ್ಯೆಯಾಗಿದೆ. ಇದು ಲೋಕಸಭೆಯ ಉಭಯ ಸದನಗಳ ಸದಸ್ಯ ಬಲದ ಶೇ. 20ರಷ್ಟಾಗಿದ್ದು, ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಲ್ಲದ ಸ್ಥಿತಿಯಾಗಿತ್ತು. ಇದೇ ವೇಳೆ ನಿರ್ಣಾಯಕ ಮಸೂದೆಗಳನ್ನು ಯಾವುದೇ ಚರ್ಚೆ ಇಲ್ಲದೆ ಅಂಗೀಕರಿಸಲಾಗಿತ್ತು.

ದೋಷಾರೋಪ 8: ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡದಿರುವುದು

ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗಳನ್ನು ಅಳಿಸಿ ಹಾಕುವುದು, ಸಚಿವಾಲಯಗಳು ಪ್ರಶ್ನೆಗಳಿಗೆ ಹಾರಿಕೆಯ ಉತ್ತರ ನೀಡುವುದು ಮೋದಿ ಆಡಳಿತದ ಅವಧಿಯಲ್ಲಿ ಕಂಡು ಬಂದಿದೆ. 2023ರ ಚಳಿಗಾಲದ ಅಧಿವೇಶನದ ವೇಳೆ ವಿರೋಧ ಪಕ್ಷಗಳ ಸಂಸದರನ್ನು ಅಮಾನತುಗೊಳಿಸಿದ ನಂತರ ಅವರು ಕೇಳಿದ್ದ 290 ಪ್ರಶ್ನೆಗಳನ್ನು ಅಳಿಸಿ ಹಾಕಲಾಗಿತ್ತು.

ಇದನ್ನು ಓದಿ: ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಪ್ರತಿಪಕ್ಷಗಳಿಂದ ಖಂಡನೆ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...