Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

- Advertisement -
- Advertisement -

ಉತ್ತರಪ್ರದೇಶದಲ್ಲಿ ಹೋಮ್‌ವರ್ಕ್ ಮಾಡದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಶಿಕ್ಷಕಿ ತೃಪ್ತಿ ತ್ಯಾಗಿ ಸೂಚಿಸಿದ ಪ್ರಕರಣದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡದಿರುವ ಉತ್ತರಪ್ರದೇಶ ಸರಕಾರವನ್ನು ಸುಪ್ರೀಂಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂಕೋರ್ಟ್‌ ಈ ಮೊದಲು ಕೂಡ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್‌ ಮಾಡಲು ವ್ಯವಸ್ಥೆ ಮಾಡುವಂತೆ ಸೂಚಿಸಿತ್ತು. ಆದರೆ ಯೋಗಿ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಡೆಗಣಿಸಿರುವುದು ಕಂಡು ಬಂದಿದೆ.

ನಾವು ಇತ್ತೀಚಿನ TISS [ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್] ವರದಿಯನ್ನು ಪರಿಶೀಲಿಸಿದ್ದೇವೆ, ವರದಿಯು ಘಟನೆಯಲ್ಲಿ ಸಂತ್ರಸ್ತ ಬಾಲಕನಿಗೆ ಮತ್ತು ಇತರ ಸಹಪಾಠಿಗಳಿಗೆ ಕೌನ್ಸಿಲಿಂಗ್‌ಗೆ ಸೂಚಿಸಿದೆ.  ಆದರೆ ರಾಜ್ಯ ಸರಕಾರ ಈ ಬಗ್ಗೆ ಏನನ್ನೂ ಮಾಡಿಲ್ಲ, ಈಗ ತಡವಾಗಿದೆ ಎಂದು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಹೇಳಿದೆ.

ಈ ಕುರಿತು ಹೆಚ್ಚಿನ ವಿಚಾರಣೆಯನ್ನು ಮಾ.1ಕ್ಕೆ ಮುಂದೂಡಿದ ನ್ಯಾಯಾಲಯ, ಘಟನೆಯ ಭಾಗವಾಗಿರುವ ಮಕ್ಕಳಿಗೆ ಕೌನ್ಸೆಲಿಂಗ್ ನೀಡಲು ಮತ್ತು ಎರಡು ವಾರಗಳೊಳಗೆ ಈ ಕುರಿತು ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಉತ್ತರಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಈ ಕುರಿತು ಕೋರ್ಟ್‌ಗೆ ಪ್ರತಿಕ್ರಿಯಿಸಿದ್ದು, ಎರಡು ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡಲು ಸ್ವಯಂಪ್ರೇರಿತವಾಗಿ ಮುಂದೆ ಬಂದಿದೆ ಎಂದು ತಿಳಿಸಿದ್ದಾರೆ.

ಏನಿದು ಘಟನೆ?

2023ರ ಆಗಸ್ಟ್ ಕೊನೆಯ ವಾರದಲ್ಲಿ ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಎಂಟು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ  ಶಿಕ್ಷಕಿ ತೃಪ್ತಿ ತ್ಯಾಗಿ ಕಪಾಳಮೋಕ್ಷ ಮಾಡಲು  ಇತರ ಸಹಪಠಿಗಳಿಗೆ ಸೂಚಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಶಿಕ್ಷಕಿ ವಿಡಿಯೋದಲ್ಲಿ ಬಾಲಕನ ಬಗ್ಗೆ ಕೋಮುವಾದಿ ಹೇಳಿಕೆ ನೀಡಿರುವುದು ಕೂಡ ಸೆರೆಯಾಗಿತ್ತು. ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕವಾದಂತಹ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ಬಗ್ಗೆ ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಇಂತಹ ಘಟನೆಗಳಿಗೆ ಬಿಜೆಪಿ ಬಿತ್ತಿರುವ ದ್ವೇಷ ಮತ್ತು ಕೋಮು ವಾತಾವರಣವೇ ಕಾರಣ ಎಂದು ಟೀಕಿಸಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸಂಚಲನವನ್ನು ಮೂಡಿಸಿತ್ತು. ಬಳಿಕ ಶಿಕ್ಷಕಿಯ ವಿರುದ್ಧ ಮುಜಪ್ಫರನಗರ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ (25) ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದರು. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರಿಕರಿಸಿದ್ದಾರೆ ಎಂದು ಹೇಳಿದ್ದಾರೆ. ಬಾಲಕನಿಗೆ ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು, ಶಿಕ್ಷಕರು ಆದೇಶಿಸಿದಂತೆ ಅವನ ಸಹಪಾಠಿಗಳು ಕಪಾಳಮೋಕ್ಷ ಮಾಡುವುದನ್ನು ನಾನು ನೋಡಿದೆ. ಆಗ ನಾನು ಯಾರ ಗಮನಕ್ಕೂ ಬಾರದಂತೆ ವಿಡಿಯೋ ಮಾಡಿದೆ. ಆ ಶಿಕ್ಷಕಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದರು ಎಂದು ನದೀಮ್ ಹೇಳಿದ್ದರು.

ಈ ಬಗ್ಗೆ ಸಂತ್ರಸ್ತ ಬಾಲಕ ಮತ್ತು ಆತನ  ಸಹಪಾಠಿಗಳಿಗೆ ಕೌನ್ಸೆಲಿಂಗ್ ಮಾಡುವ ಕುರಿತು ಸೂಚಿಸಲು ನ್ಯಾಯಾಲಯವು TISS ಮುಂಬೈ ಸಂಸ್ಥೆಯನ್ನು ನೇಮಿಸಿತ್ತು. ಕಳೆದ ವರ್ಷ ನವೆಂಬರ್ 6ರಂದು ಬಾಲಕನನ್ನು ಖಾಸಗಿ ಶಾಲೆಗೆ ಸೇರಿಸಲು ಅನುಕೂಲವಾಗುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಮಹಾತ್ಮ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಅವರು ಪ್ರಕರಣದ ತನಿಖೆಯನ್ನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಘಟನೆ ಬಳಿಕ ಶಾಲಾ ಆಡಳಿತ ಮಂಡಳಿಗೆ ಈ ಕುರಿತು ಶಿಕ್ಷಣ ಇಲಾಖೆ ನೊಟೀಸ್ ಜಾರಿಗೊಳಿಸಿ ಶಾಲೆಯನ್ನು ಮುಚ್ಚುವಂತೆ ಸೂಚಿಸಿತ್ತು. ಇದಲ್ಲದೆ ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಸ್ಥಳೀಯ ಶಾಲೆಗೆ ಸೇರಿಸಬೇಕು, ಶಾಲೆ ಸಧ್ಯ ಮುಚ್ಚುವುದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿತ್ತು.

ಇದನ್ನು ಓದಿ: ಮೋದಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ: 8 ಪ್ರಮುಖ ದೋಷಾರೋಪಗಳ ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...