Homeಮುಖಪುಟಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

- Advertisement -
- Advertisement -

ಉತ್ತರಖಂಡದ ಹಲ್ದ್ವಾನಿ ಪುರಸಭೆಯು ಅತಿಕ್ರಮಣ ವಿರೋಧಿ ಅಭಿಯಾನ ಎಂದು ಪಟ್ಟಣದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಮದ್ರಸಾ ಮತ್ತು ಮಸೀದಿಯನ್ನು ಕೆಡವಿದೆ. ಪುರಸಭೆಯ ಈ ಕೃತ್ಯವು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗೆ ಕಾರಣವಾಗಿ ಐವರ ಸಾವಿಗೆ ಕಾರಣವಾಗಿದ್ದು, 100 ಪೊಲೀಸ್‌ ಸಿಬ್ಬಂದಿಗಳಿಗೆ ಗಾಯವಾಗಿದೆ.

ಘರ್ಷಣೆಯ ನಂತರ ಕರ್ಫ್ಯೂ ಮತ್ತು ‘ಕಂಡಲ್ಲಿ ಗುಂಡು ಆದೇಶಗಳನ್ನು’ ನೀಡಲಾಗಿತ್ತು. ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಈ ಕುರಿತು ಮಾತನಾಡಿದ್ದು,  ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದಾರೆ. ಧ್ವಂಸ ಕಾರ್ಯಾಚರಣೆಯಲ್ಲಿ 100 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಸೀದಿಯ ಧ್ವಂಸದ ಬಳಿಕ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರದ ಹಿನ್ನೆಲೆ ಅರೆಸೇನಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಿ ಅಧಿಕಾರಿಗಳು ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಸ್ತುತ ಹಲ್ದ್ವಾನಿಯಲ್ಲಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಿದ್ದು, ಕಂಡಲ್ಲಿ ಗುಂಡು ಆದೇಶ ಹೊರಡಿಸಿದೆ. ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಇಂದು ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಂಭೂಲ್ಪುರದಲ್ಲಿ ಹಿಂಸಾಚಾರದ ನಡೆದಿದ್ದರೂ, ಉತ್ತರಾಖಂಡ ಸರ್ಕಾರ ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ಮೀನಾ, ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮದ್ರಸಾಕ್ಕೆ ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು ಎಂದಿದ್ದಾರೆ. ನೈನಿತಾಲ್ ಜಿಲ್ಲಾಧಿಕಾರಿ ವಂದನಾ ಅವರು ಮಾತನಾಡಿ, ಬಂಭೂಲ್ಪುರ ಪೊಲೀಸ್ ಠಾಣೆಯ ಹೊರಗೆ ನಡೆದ ಹಿಂಸಾಚಾರದಲ್ಲಿ ಕೆಲವರು ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಅವರು ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಅವರ ನಡುವಿನ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎಂದು ತಿಳಿದು ಬರಬೇಕಿದೆ ಎಂದು ಹೇಳಿದ್ದರು.

ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು 2002ರಲ್ಲಿ ಬಂಬೂಲ್ಪುರದ ಕಂಪನಿ ಬಾಗ್ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ಅದನ್ನು ಅಬ್ದುಲ್ ಮಲಿಕ್ ಮತ್ತು ಅವರ ಪತ್ನಿ ಸಫಿಯಾ ಮಲಿಕ್ ನೋಡಿಕೊಳ್ಳುತ್ತಿದ್ದರು.

ಹಲ್ದ್ವಾನಿಯ ಮುನ್ಸಿಪಲ್ ಕಮಿಷನರ್ ಪಂಕಜ್ ಉಪಾಧ್ಯಾಯ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಮಸೀದಿಯನ್ನು ಸರಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ. ಜನವರಿ 30ರಂದು ಅಬ್ದುಲ್ ಮಲಿಕ್ ಅವರಿಗೆ ಮಸೀದಿ ಮತ್ತು ಮದರಸಾವನ್ನು ಕೆಡವಲು ಪಾಲಿಕೆ ನೋಟಿಸ್ ನೀಡಿತ್ತು ಎಂದು ಹೇಳಿದ್ದಾರೆ.

ಆದರೆ ಫೆಬ್ರುವರಿ 6ರಂದು ಸಫಿಯಾ ಮಲಿಕ್ ಅವರು ಉತ್ತರಾಖಂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮಸೀದಿ ಮತ್ತು ಮದರಸಾವನ್ನು ನಿರ್ಮಿಸಿದ ಭೂಮಿಯನ್ನು 1937ರಲ್ಲಿ ಗುತ್ತಿಗೆಗೆ ನೀಡಲಾಗಿದೆ ಮತ್ತು 1994ರಲ್ಲಿ ತನ್ನ ಕುಟುಂಬಕ್ಕೆ ಮಾರಾಟ ಮಾಡಲಾಗಿದೆ ಎಂದು ಮಲಿಕ್ ಮಸೀದಿ ತೆರವು ವಿರುದ್ಧ ಮಧ್ಯಂತರ ಪರಿಹಾರವನ್ನು ಕೋರಿದ್ದರು. ವಿಶೇಷವಾಗಿ ಬಡ ಮಕ್ಕಳಿಗಾಗಿ ನಡೆಸಲ್ಪಡುವ ಮದ್ರಸಾ ಎಂಬುವುದನ್ನು ಉಲ್ಲೇಖಿಸಿ ಪ್ರಕರಣವನ್ನು ಕೋರ್ಟ್‌ ಮುಂದಿಟ್ಟಿದ್ದರು. ಫೆಬ್ರುವರಿ 14ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಿತ್ತು. ಆದರೆ ಕೋರ್ಟ್‌ ಪಟ್ಟಿ ಮಾಡಿದ ಮುಂದಿನ ವಿಚಾರಣೆಗೆ ಮೊದಲೇ ಪಾಲಿಕೆ ಮಸೀದಿಯನ್ನು ನೆಲಸಮ ಮಾಡಿದ್ದಾರೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಅತಿಕ್ರಮಣ ತಡೆ ಅಭಿಯಾನಕ್ಕೆ ಅನುಮತಿ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೂಡ ಇದನ್ನೇ ಹೇಳಿದ್ದಾರೆ.

ಮಲಿಕ್ ಅವರ ವಕೀಲರಾದ ಅಹ್ರಾರ್ ಬೇಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಸೀದಿಯನ್ನು ಕೆಡವುವ ವೇಳೆ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿಲ್ಲ, ನಮಗೆ ನೋಟಿಸ್ ನೀಡಲಾಗಿಲ್ಲ ಅಥವಾ ಪ್ರಕರಣವನ್ನು ಮುಂದುವರಿಸಲು ಸಮಯವನ್ನು ನೀಡಲಾಗಿಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡ ಹೈಕೋರ್ಟ್‌ನಲ್ಲಿ ಮಲಿಕ್ ಸಲ್ಲಿಸಿರುವ ಅರ್ಜಿ ಮತ್ತು ಅದರೊಂದಿಗೆ ಲಗತ್ತಿಸಲಾದ ದಾಖಲೆಗಳು ಮಲಿಕ್ ಕುಟುಂಬ ಆಸ್ತಿಯ ಕುರಿತು ಸಲ್ಲಿಸಿದ ದಾಖಲೆಗಳನ್ನು ಒಳಗೊಂಡಿದೆ. ಹಲ್ದ್ವಾನಿಯಲ್ಲಿನ ಮಸೀದಿಯ ಧ್ವಂಸವು ಬಿಜೆಪಿ ನೇತೃತ್ವದ ಉತ್ತರಾಖಂಡ ಸರ್ಕಾರವು “ಕಾನೂನುಬಾಹಿರ” ಎಂದು ಪರಿಗಣಿಸಿ ಇಸ್ಲಾಮಿಕ್ ರಚನೆಗಳನ್ನು ನೆಲಸಮಗೊಳಿಸುವ ದೊಡ್ಡ ನೀತಿಯ ಒಂದು ಭಾಗವಾಗಿದೆ ಎಂದು ಹೇಳಲಾಗಿದೆ.

ಹಲ್ದ್ವಾನಿ ಮದರಸಾ ಪ್ರಕರಣದಲ್ಲಿ, ಬಿಜೆಪಿಯ ಅಲ್ಪಸಂಖ್ಯಾತ ಘಟಕದ ನಾಯಕರು ಮುಖ್ಯಮಂತ್ರಿಗೆ ಪತ್ರ ಬರೆದು ಬಡ ಮಕ್ಕಳಿಗೆ ಶಿಕ್ಷಣ ನೀಡಲು ಬಳಸುತ್ತಿದ್ದ ಕಟ್ಟಡವನ್ನು ಕೆಡವಿದರೆ, ಅಲ್ಪಸಂಖ್ಯಾತರಿಗೆ ಉತ್ತಮ ಸಂದೇಶ ರವಾನೆಯಾಗುವುದಿಲ್ಲ ಎಂದು ಎಚ್ಚರಿಸಿದ್ದರು ಎನ್ನವುದು ಕೂಡ ಗಮನಾರ್ಹ.

ಇದನ್ನು ಓದಿ: ಆಪರೇಷನ್ ಥಿಯೇಟರ್‌ನಲ್ಲಿ ಫ್ರಿ ವೆಡ್ಡಿಂಗ್ ಶೂಟ್: ಸರಕಾರಿ ವೈದ್ಯ ಸೇವೆಯಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...