Homeಮುಖಪುಟದಲಿತ ಮಹಿಳೆಗೆ ತೆಂಗಿನ ಚಿಪ್ಪಿನಲ್ಲಿ ಟೀ ನೀಡಿ ಅವಮಾನ; ಇಬ್ಬರು ಮಹಿಳೆಯರ ಬಂಧನ

ದಲಿತ ಮಹಿಳೆಗೆ ತೆಂಗಿನ ಚಿಪ್ಪಿನಲ್ಲಿ ಟೀ ನೀಡಿ ಅವಮಾನ; ಇಬ್ಬರು ಮಹಿಳೆಯರ ಬಂಧನ

- Advertisement -
- Advertisement -

ದೇಶದ ವಿವಿಧ ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಅಭ್ಯಾಸಗಳು ಇನ್ನೂ ಜಾರಿಯಲ್ಲಿವೆ. ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು ನಿರಾಕರಣೆ, ಅಂಗನವಾಡಿ ಪ್ರವೇಶ ಹಾಗೂ ಪಡಿತರ ಪಡೆಯಲು ಅಡ್ಡಿ ಉಂಟು ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಇಂತದ್ದೇ ಅಮಾನವೀಯ ಘಟನೆಯೊಂದು ತಮಿಳುನಾಡಿನಿಂದ ವರದಿಯಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯರಿಗೆ ಗ್ಲಾಸ್ ಬದಲಿಗೆ ತೆಂಗಿನ ಕಾಯಿಯ ಚಿಪ್ಪಿಯಲ್ಲಿ ಟೀಯನ್ನು ನೀಡಿರುವ ಘಟನೆ ನಡೆದಿದೆ.

ಧರ್ಮಪುರಿಯಲ್ಲಿ ದಲಿತ ಮಹಿಳೆಗೆ ಜಾತಿಯ ಕಾರಣಕ್ಕೆ ತಾರತಮ್ಯ ಮಾಡಿರುವ ಆರೋಪದಲ್ಲಿ ಇಬ್ಬರು  ಮಹಿಳೆಯರನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಲಾಗಿದೆ. ಕೊಂಗು ವೆಳ್ಳಾಲರ್ ಸಮುದಾಯಕ್ಕೆ ಸೇರಿದ ಧರಣಿ ಮತ್ತು ಚಿನ್ನತಾಯಿ ಬಂಧಿತರು. ಸಂತ್ರಸ್ತೆಯಲ್ಲಿ ಓರ್ವ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರಪ್ಪನಾಯಕನಪಟ್ಟಿ ಗ್ರಾಮದ ಹೊಲದಲ್ಲಿ ಕೆಲಸಕ್ಕೆ ಹೋದ ಐವರು ಮಹಿಳೆಯರ ಬಗ್ಗೆ ಧರಣಿ ಮತ್ತು ಚಿನ್ನತಾಯಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಂತ್ರಸ್ತರು ಪರಿಶಿಷ್ಟ ಜಾತಿ ಸಮುದಾಯದ ಪರಯ್ಯರ್ ಸಮುದಾಯಕ್ಕೆ ಸೇರಿದವರು. ವಿಡಿಯೋದಲ್ಲಿ ಆರೋಪಿಗಳು ದಲಿತ ಎಂಬ ಕಾರಣಕ್ಕೆ ಟೀ ಗ್ಲಾಸ್ ಬದಲು ತೆಂಗಿನ ಚಿಪ್ಪಿನಲ್ಲಿ ಮಹಿಳೆಯರಿಗೆ ಟೀ ನೀಡಿ ಅವಮಾನಿಸಿದ್ದರು.

ಪೊಲೀಸರು ನೀಡಿದ ವಿವರಗಳ ಪ್ರಕಾರ, ಫೆಬ್ರವರಿ 8ರಂದು ಪೊಲಯಂಪಲ್ಲಿ ಗ್ರಾಮದ ನಿವಾಸಿಗಳಾದ ಚೆಲ್ಲಿ (50) ಮತ್ತು ಇತರ ನಾಲ್ವರು ಮಹಿಳೆಯರು ಭುವನೇಶ್ವರನ್ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಭುವನೇಶ್ವರನ್ ಅವರ ಕುಟುಂಬದ ಸದಸ್ಯರಾದ ಧರಣಿ ಮತ್ತು ಚಿನ್ನತಾಯಿ ಅವರು,  ಟೀ ಗ್ಲಾಸ್‌ಗಳ ಬದಲಿಗೆ ತೆಂಗಿನ ಚಿಪ್ಪಿನಲ್ಲಿ ಚಹಾವನ್ನು ನೀಡಿದ್ದರು. ಇದನ್ನು ಕಂಡ ಗ್ರಾಮದ ನಿವಾಸಿಯೊಬ್ಬರು ತಮ್ಮ ಫೋನ್‌ನಲ್ಲಿ ಘಟನೆಯನ್ನು ರೆಕಾರ್ಡ್ ಮಾಡಿ ವೈರಲ್‌ ಮಾಡಿದ್ದಾರೆ.

ಈ ಬಗ್ಗೆ ಚೆಲ್ಲಿ ಫೆಬ್ರವರಿ 9ರಂದು ಕಂಬೈನಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಧರಣಿ ಮತ್ತು ಆಕೆಯ ಅತ್ತೆ ಚಿನ್ನ ತಾಯಿಯನ್ನು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸೇಲಂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಕಂಬೈನಲ್ಲೂರು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...