Homeಮುಖಪುಟಮಹಾರಾಷ್ಟ್ರ: ಕಾಂಗ್ರೆಸ್ ತೊರೆದಿದ್ದ ಬಾಬಾ ಸಿದ್ದೀಕ್ ಎನ್‌ಸಿಪಿ ಸೇರ್ಪಡೆ

ಮಹಾರಾಷ್ಟ್ರ: ಕಾಂಗ್ರೆಸ್ ತೊರೆದಿದ್ದ ಬಾಬಾ ಸಿದ್ದೀಕ್ ಎನ್‌ಸಿಪಿ ಸೇರ್ಪಡೆ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಬಾಲಿವುಡ್ ವಲಯದಲ್ಲಿ ಖ್ಯಾತನಾಮರಾಗಿರುವ ಬಾಬಾ ಸಿದ್ದೀಕ್ ಅವರು ಶನಿವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಬಾಬಾ ಸಿದ್ದೀಕ್, ಫೆಬ್ರವರಿ 8ರಂದು ರಾಜೀನಾಮೆ ನೀಡುವ ಮೂಲಕ ಪಕ್ಷದೊಂದಿಗಿನ 48 ವರ್ಷಗಳ ಸಂಬಂಧ ಕಡಿದುಕೊಂಡಿದ್ದರು.

ಎನ್‌ಸಿಪಿ ಸೇರ್ಪಡೆ ಬಳಿಕ ಮಾತನಾಡಿದ ಬಾಬಾ ಸಿದ್ದೀಕ್, ” ಕಾಂಗ್ರೆಸ್‌ನ ಕುರಿತು ನನಗೆ ಬಹಳಷ್ಟು ಹೇಳಲು ಇದೆ. ಆ ಪಕ್ಷದಲ್ಲಿ ನನ್ನನ್ನು ಸಾಂಬಾರಿನ ಸುವಾಸನೆಗೆ ಕರಿಬೇವು ಬಳಸುವಂತೆ ನನ್ನನ್ನು ಬಳಸಿಕೊಂಡಿದ್ದರು. ಪಕ್ಷದ ತೊರೆದ ಬಗ್ಗೆ ದುಖಃವಿದೆ. ಆದರೆ, ಹಲವು ವರ್ಷಗಳ ಜಂಜಾಟ ಕೊನೆಗೊಂಡಿತಲ್ಲ ಎಂಬ ಖುಷಿಯೂ ಇದೆ” ಎಂದಿದ್ದಾರೆ.

“ಬಹಳ ಸಣ್ಣ ಪ್ರಾಯದಲ್ಲೇ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದೆ. ಇದು 48 ವರ್ಷಗಳ ಕಾಲದ ಮಹತ್ವದ ಪ್ರಯಾಣವಾಗಿದೆ. ಇಂದು ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಹೇಳಲು ತುಂಬಾ ವಿಷಯಗಳಿವೆ. ಆದರೆ, ಅವುಗಳನ್ನು ಹೇಳದಿರುವುದೇ ಉತ್ತಮ. ಈ ಪ್ರಯಾಣದಲ್ಲಿ ನನ್ನ ಜೊತೆ ಭಾಗಿಯಾದ ಎಲ್ಲರಿಗೂ ಧನ್ಯವಾದಗಳು” ಎಂದು ಬಾಬಾ ಸಿದ್ದಿಕ್ ಫೆ.8ರಂದು ತನ್ನ ರಾಜೀನಾಮೆ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ ಮಹಾರಾಷ್ಟ್ರ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ ನೀಡಿದ್ದಾರೆ. ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಇತ್ತೀಚೆಗೆ ಕಾಂಗ್ರೆಸ್ ತೊರೆದು ಸಿಎಂ ಏಕನಾಥ್‌ ಶಿಂದೆ ಬಣ ಸೇರಿದ್ದರು. ಈ ಬೆನ್ನಲ್ಲೇ ಮತ್ತೊಬ್ಬ ನಾಯಕ ಬಾಬಾ ಸಿದ್ದೀಕ್ ರಾಜೀನಾಮೆ ನೀಡಿದ್ದಾರೆ.

ಬಾಬಾ ಸಿದ್ದಿಕ್ ಅವರು 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಕಾಂಗ್ರೆಸ್‌ ಶಾಸಕರಾಗಿದ್ದರು. ಅಲ್ಲದೆ, ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಮತ್ತು ಎಫ್‌ಡಿಎ, (2004-08) ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಈ ಹಿಂದೆ ಎರಡು ಸತತ ಅವಧಿಗಳು (1992-1997) ಪುರಸಭೆಯ ಕಾರ್ಪೊರೇಟರ್ ಆಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಮತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಸದೀಯ ಮಂಡಳಿಯ ಅಧ್ಯಕ್ಷರಾಗಿ ಮತ್ತು ಹಿರಿಯ ಉಪಾಧ್ಯಕ್ಷರಾಗಿಯೂ ಸೇವೆ ಕಾರ್ಯ ನಿರ್ವಹಿಸಿದ್ದರು.

ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳಾದ ಶಿವಸೇನೆ ಯುಬಿಟಿ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್ (ಎನ್‌ಸಿಪಿಯ ಶರದ್ ಪವಾರ್ ಬಣ) ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳಲಿದೆ.

ಇದನ್ನೂ ಓದಿ : ‘ಅಪ್ಪ-ಅಮ್ಮ’ ನನಗೆ ವೋಟ್‌ ಹಾಕದಿದ್ದರೆ ನೀವು ಊಟ ಮಾಡಬೇಡಿ: ಶಾಲಾ ಮಕ್ಕಳಿಗೆ ಹೇಳಿದ ಶಾಸಕ; ವಿವಾದ ಸೃಷ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...