Homeಕರ್ನಾಟಕಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

ಬಿಜೆಪಿ ತೆಕ್ಕೆಗೆ ಬಿಬಿಎಂಪಿ : ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ಆಯ್ಕೆ

- Advertisement -
- Advertisement -

ನಾಲ್ಕು ವರ್ಷಗಳಿಂದ ಬಿಬಿಎಂಪಿ ಮೇಯರ್ ಹುದ್ದೆ ಮೇಲೆ ಆಸೆಗಣ್ಣಿನಿಂದ ಕಾಯುತ್ತಿದ್ದ ಬಿಜೆಪಿಗೆ ಕೊನೆಗೂ ಗೆಲುವು ಸಿಕ್ಕಿದ್ದು ಇಂದು ನಡೆದ ಮೇಯರ್, ಉಪ ಮೇಯರ್ ಆಯ್ಕೆಯಲ್ಲಿ ಪ್ರಚಂಡ ಜಯ ಸಾಧಿಸಿದೆ.

೮೨ನೇ ವಾರ್ಡ್‌‌ನ ಆರ್‌.ಎಸ್‌.ಎಸ್ ನಿಷ್ಠ ಎಂದೇ ಹೆಸರುವಾಸಿಯಾದ ಗೌತಮ್ ಕುಮಾರ್‌ ಜೈನ್ ರವರು ಬಿಬಿಎಂಪಿಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸತ್ಯನಾರಾಯಣ್ ರವರ ವಿರುದ್ಧ ೧೭ ಮತಗಳ ಅಂತರದಿಂದ ಗೆದ್ದು ಮೇಯರ್ ಪಟ್ಟಕ್ಕೇರಿದ್ದಾರೆ.

ಬಿಜೆಪಿಯ ಗೌತಮ್ ಕುಮಾರ್‌ ಜೈನ್ ಪರವಾಗಿ ೧೨೯ ಮತಗಳು ಬಿದ್ದರೆ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ಪರವಾಗಿ ೧೧೨ ಮತಗಳು ಮಾತ್ರ ಬಿದ್ದಿವೆ. ಆ ಮೂಲಕ ಜೋಗು ಪಾಳ್ಯದ ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾದರು. ಇನ್ನು ಉಪಮೇಯರ್ ಆಗಿ ಹೊಸಹಳ್ಳಿ ವಾರ್ಡ್‌‌ನ ಮಹಾಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇವರು ವಿ ಸೋಮಣ್ಣರವರ ಆಪ್ತ ರವೀಂದ್ರರವರ ಮಗಳಾಗಿದ್ದಾರೆ.

ಆರಂಭದಲ್ಲಿ ಗೌತಮ್ ಕುಮಾರ್ ಒತ್ತಡಕ್ಕೆ ಸಿಲುಕಿದ್ದರು ಏಕೆಂದರೆ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಪದ್ಮನಾಭರೆಡ್ಡಿಯವರು ಸಹ ನಾಮಪತ್ರ ಸಲ್ಲಿಸಿದ್ದರು. ಆದರೆ ಬಿಜೆಪಿ ನಾಯಕರು ಅವರ ಮನವೊಲಿಸಿ ನಾಮಪತ್ರ ವಾಪಸ್ ತೆಗೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾದರು.

ಮೇಯರ್ ವಿರುದ್ಧ ಭಾರೀ ಅಪಸ್ವರ

ನೂತನ್ ಮೇಯರ್ ಆಗಿ ಗೌತಮ್ ಕುಮಾರ್‌ ಜೈನ್ ರವರು ಆಯ್ಕೆಯಾಗುತ್ತಿದ್ದಂತೆಯೇ ಅಪಸ್ವರ ಜೋರಾಗಿ ಕೇಳಿಬಂದಿದೆ. ಬಿಜೆಪಿಯು ಈ ಬಾರಿ ಒಕ್ಕಲಿಗ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಕೊನೆ ಕ್ಷಣದಲ್ಲಿ ಜೈನ ಸಮುದಾಯದವರನ್ನು ಮೇಯರ್‌ ಮಾಡಿರುವುದು ಸರಿಯಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಎಲ್.ಶ್ರೀನಿವಾಸ್ ಮತ್ತು ಮುನೀಂದ್ರಕುಮಾರ್‌ರವರು ಮೇಯರ್ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು.

ಪರಭಾಷೆಯ ವ್ಯಕ್ತಿ ಬೆಂಗಳೂರಿನ ಮೇಯರ್‌ ಆಗುವುದು ಬೇಡ: ಕನ್ನಡಿಗರ ಆಗ್ರಹ

ಇದೇ ಸಮಯದಲ್ಲಿ ಕನ್ನಡ ಹೋರಾಟಗಾರರು ಸಹ ಗೌತಮ್ ಕುಮಾರ್‌ ಜೈನ್‌ರವರ ಆಯ್ಕೆಯನ್ನು ವಿರೋಧಿಸಿದ್ದಾರೆ. ಕನ್ನಡ ಹೋರಾಟಗಾರರನ್ನು ಜೈಲಿಗೆ ಕಳಿಸಿದ ಮಾರ್ವಾಡಿ ಸಮುದಾಯದ ವ್ಯಕ್ತಿಯನ್ನು ಮೇಯರ್ ಮಾಡಿದ ಬಿಜೆಪಿ ಕನ್ನಡ ವಿರೋಧಿ ಕ್ರಮ ಖಂಡಿಸಿ ಇಂದು ಸಂಜೆ ೬ ಗಂಟಗೆ ಟ್ವಿಟ್ಟರ್ ಅಭಿಯಾನವನ್ನು ಸಹ ಹಮ್ಮಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...