Homeಮುಖಪುಟಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

- Advertisement -
- Advertisement -

2022ರಲ್ಲಿ ನಡೆದಿದ್ದ ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೆ ನಾಲ್ವರನ್ನು ಬಂಧಿಸಿದೆ. ತಮಿಳುನಾಡಿನಾದ್ಯಂತ 27 ಸ್ಥಳಗಳಲ್ಲಿ ನಡೆಸಿದ ದಾಳಿಯ ವೇಳೆ ಈ ಬಂಧನ ನಡೆದಿದೆ.

ಬಂಧಿತರನ್ನು ಜಮೀಲ್ ಬಾಷಾ ಉಮರಿ, ಮೊಹಮ್ಮದ್ ಹುಸೇನ್ ಫೈಜಿ, ಇರ್ಷಾತ್, ಸೈಯದ್ ಅಬ್ದುರ್ ರೆಹಮಾನ್ ಉಮರಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎನ್‌ಐಎ 6 ಲ್ಯಾಪ್‌ಟಾಪ್‌ಗಳು, 25 ಸೆಲ್ ಫೋನ್‌ಗಳು, 34 ಸಿಮ್ ಕಾರ್ಡ್‌ಗಳು, ಹಲವಾರು ಎಸ್‌ಡಿ ಕಾರ್ಡ್‌ಗಳು ಮತ್ತು ಹಾರ್ಡ್ ಡ್ರೈವ್‌ಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 23, 2022ರಂದು ಕೊಯಮತ್ತೂರಿನ ಉದಕ್ಕಂನಲ್ಲಿ ಕೊಟ್ಟೈ ಈಶ್ವರನ್ ದೇವಸ್ಥಾನದ ಬಳಿ ಸ್ಫೋಟ ಸಂಭವಿಸಿದೆ. ದೀಪಾವಳಿಯ ದಿನದ ಸಂಜೆ ಜಮೇಶ ಮುಬಿನ್ ಎಂಬ ವ್ಯಕ್ತಿ ಚಲಾಯಿಸುತ್ತಿದ್ದ ಕಾರಿನಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮುಬಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿ ಮಾರ್ಬಲ್‌ಗಳು, ಮೊಳೆಗಳು ಮತ್ತು ಇತರ ಚೂರುಗಳು ಇದ್ದವು ಎಂದು ತಿಳಿದುಬಂದಿದೆ.

ಬಳಿಕ ಕೊಯಮತ್ತೂರು ಪೊಲೀಸರು ಮುಬಿನ್ ನಿವಾಸದಿಂದ ಸಾಮಾನ್ಯವಾಗಿ  ಬಾಂಬ್‌ಗಳನ್ನು ತಯಾರಿಸಲು ಬಳಸುವ ಪೊಟಾಷಿಯಂ ನೈಟ್ರೇಟ್ ಮತ್ತು ಅಲ್ಯೂಮಿನಿಯಂ ಪುಡಿ, ಇದ್ದಿಲು ಮತ್ತು ಸಲ್ಫರ್ ಸೇರಿದಂತೆ 75 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಮೊಹಮ್ಮದ್ ಥಲ್ಕಾ, ಮೊಹಮ್ಮದ್ ಅಸರುದ್ದೀನ್, ಮೊಹಮ್ಮದ್ ರಿಯಾಜ್, ಫಿರೋಜ್ ಇಸ್ಮಾಯಿಲ್, ಮೊಹಮ್ಮದ್ ನವಾಜ್ ಇಸ್ಮಾಯಿಲ್ ಮತ್ತು ಅಸ್ಫರ್ ಖಾನ್ ಎಂಬ ಆರು ಜನರನ್ನು ಬಂಧಿಸಿದ್ದರು.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಶಿಫಾರಸಿನ ಮೇರೆಗೆ ತನಿಖೆಯನ್ನು ಅಕ್ಟೋಬರ್ 27 ರಂದು ಎನ್ಐಎಗೆ ವರ್ಗಾಯಿಸಲಾಗಿತ್ತು.

2019ರಲ್ಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಮುಬಿನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವರನ್ನು ನಂತರ ಪ್ರಕರಣದಿಂದ ಕೈಬಿಡಲಾಗಿತ್ತು. ಆದರೆ ಅವರ ಚಲನವಲನವನ್ನು ರಾಜ್ಯ ಮತ್ತು ರಾಷ್ಟ್ರೀಯ ಗುಪ್ತಚರ ಸಂಸ್ಥೆಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದವು. ಇಂಜಿನಿಯರಿಂಗ್ ಪದವೀಧರರಾಗಿದ್ದ 25 ವರ್ಷದ ಮುಬಿನ್‌ನ್ನು ಕೊಯಮತ್ತೂರು ಕಾರು ಸ್ಫೋಟ ಪ್ರಕರಣಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

ಇದನ್ನು ಓದಿ: ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...