Homeಮುಖಪುಟ'ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..'; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

‘ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಂದ ತುಂಬಾ ದೂರವಿಲ್ಲ..’; ಕೇಂದ್ರ ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನುಬದ್ದ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರಂಭವಾದ ರೈತರ ಪ್ರತಿಭಟನೆಯು ಪಂಜಾಬ್-ಹರಿಯಾಣ ಗಡಿಯ ಶಂಭು ಎಂಬಲ್ಲಿ ಅಶ್ರುವಾಯು ಸಿಡಿಸುವುದರೊಂದಿಗೆ ಘರ್ಷಣೆಗೆ ಕಾರಣವಾಗಿದೆ. 2020/21ರಲ್ಲಿ ಕೇಂದ್ರ ಸರ್ಕಾರದ ಮಾರಕ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಪ್ರಮುಖರಾಗಿರುವ ರಾಕೇಶ್ ಟಿಕಾಯತ್ ‘ಚಲೋ ದೆಹಲಿ’ ಮೆರವಣಿಗೆಗೆ  ಬೆಂಬಲಿಸಿದ್ದು, ರೈತರಿಗೆ ತೊಂದರೆ ನೀಡದಂತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಹಲವಾರು ರೈತ ಸಂಘಗಳಿವೆ; ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ… ದೆಹಲಿಗೆ ಪಾದಯಾತ್ರೆ ಮಾಡುವ ರೈತರಿಗೆ ಸರ್ಕಾರ ಸಮಸ್ಯೆ ಸೃಷ್ಟಿಸಿದರೆ, ನಾವು ಅವರಿಂದ ಬಹಳ ದೂರವಿಲ್ಲ, ನಾವು ಅವರ ಬೆಂಬಲದಲ್ಲಿದ್ದೇವೆ…’ ಎಂದು ಹೇಳಿದ್ದಾರೆ.

ಟಿಕಾಯತ್ ಅವರು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಸ್ಥಾಪಿಸಿದ ಉತ್ತರ ಪ್ರದೇಶ ಮೂಲದ ಸಂಸ್ಥೆಯಾದ ಭಾರತೀಯ ಕಿಸಾನ್ ಯೂನಿಯನ್‌ನ ಮುಖ್ಯಸ್ಥರಾಗಿದ್ದಾರೆ. ಈ ತಿಂಗಳು ಸಿಂಗ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲಾಗಿದೆ.

ಬಿಕೆಯು ದೇಶದ ದೊಡ್ಡ ರೈತ ಒಕ್ಕೂಟಗಳಲ್ಲಿ ಒಂದಾಗಿದ್ದು, ಇಂದು ಮಧ್ಯಾಹ್ನ ಪ್ರಾರಂಭವಾದ ಆಂದೋಲನದಲ್ಲಿ ಅದು ಸೇರಿಕೊಂಡರೆ, ಕೇಂದ್ರವು ಎದುರಿಸುತ್ತಿರುವ ಪ್ರತಿಭಟನೆ ಒತ್ತಡವು ಸಹಜವಾಗಿಯೆ ಹೆಚ್ಚಾಗುತ್ತದೆ.

ಬಿಕೆಯು ರಾಷ್ಟ್ರೀಯ ಅಧ್ಯಕ್ಷರಾದ ಟಿಕಾಯತ್ ಅವರ ಸಹೋದರ ನರೇಶ್ ಟಿಕಾಯಿತ್ ಅವರು ರೈತರೊಂದಿಗೆ ಕುಳಿತು ಮಾತುಕತೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ‘ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ… ಸರ್ಕಾರವು ಚರ್ಚೆಗಳನ್ನು ನಡೆಸಬೇಕು; ಜತೆಗೆ ರೈತರಿಗೆ ಗೌರವವನ್ನು ನೀಡಬೇಕು… ಈ ಸಮಸ್ಯೆಯನ್ನು ಪರಿಹರಿಸಲು ಯೋಚಿಸುವ ಜತೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಕೇಶ್ ಟಿಕಾಯತ್ ರೈತರ ಬೇಡಿಕೆಗಳಿಗೆ ಒತ್ತಾಯಿಸಿ ಫೆಬ್ರವರಿ 16 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಕಳೆದ ವರ್ಷ ಜೂನ್‌ನಲ್ಲಿ, ಕನಿಷ್ಠ ಬೆಂಬಲ ಬೆಲೆಗಳ ಮೇಲೆ ಕಾನೂನು ಖಾತರಿಯ ಬೇಡಿಕೆಯನ್ನು ಪರಿಹರಿಸದಿದ್ದರೆ, ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕಿಂತ ದೊಡ್ಡ ಆಂದೋಲನ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

‘ದೆಹಲಿಯಲ್ಲಿನ ಆಂದೋಲನಕ್ಕಿಂತ ದೊಡ್ಡ ಆಂದೋಲನವನ್ನು (ಈಗ ರದ್ದುಪಡಿಸಿದ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ) ಎಂಎಸ್‌ಪಿಗಾಗಿ ಕೈಗೊಳ್ಳಬೇಕಾಗುತ್ತದೆ’ ಎಂದು ಅವರು ಹರಿಯಾಣದ ಕರ್ನಾಲ್‌ನಲ್ಲಿ ಹೇಳಿದರು. ರೈತರ ‘ದೆಹಲಿ ಚಲೋ’ 2.0 ಇಂದು ಶಂಭು ಗಡಿ ಕ್ರಾಸಿಂಗ್‌ನಲ್ಲಿ ಅಶೃವಾಯು ಸಿಡಿಸುವುದರೊಂದಿಗೆ ಪ್ರಾರಂಭವಾಯಿತು.

ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಪ್ರಮುಖವಾದದ್ದು, ಮಾರುಕಟ್ಟೆಯ ಅನಿಶ್ಚಿತತೆಯನ್ನು ಎದುರಿಸುತ್ತಿರುವ ರೈತರಿಗೆ ನಿರ್ಣಾಯಕ ಆರ್ಥಿಕ ಜೀವನಾಡಿಯಾಗಿರುವ ಬೆಳೆಗಳಿಗೆ ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕು ಎಂಬುದಾಗಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಪ್ರತಿಭಟನೆಯ ಬೇಡಿಕೆಗಳಲ್ಲಿ ಎಂಎಸ್‌ಪಿಗೆ ಕಾನೂನು ಬೆಂಬಲವೂ ಸೇರಿತ್ತು.

ಇತರ ಪ್ರಮುಖ ಬೇಡಿಕೆಗಳೆಂದರೆ 2020ರ ವಿದ್ಯುತ್ ಕಾಯಿದೆಯನ್ನು ರದ್ದುಗೊಳಿಸುವುದು, ಯುಪಿಯ ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ಕೊನೆಯ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

ರೈತರ ಬೇಡಿಕೆಗಳ ಕುರಿತು ಚರ್ಚಿಸಲು ಕಿರಿಯ ಕೃಷಿ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಇಬ್ಬರು ಕೇಂದ್ರ ಸಚಿವರು ಸೋಮವಾರ ತಡರಾತ್ರಿ ರೈತ ಮುಖಂಡರನ್ನು ಭೇಟಿ ಮಾಡಿದರು. ಕೆಲವು ಷರತ್ತುಗಳಿಗೆ ಕೇಂದ್ರ ಒಪ್ಪಿದೆಯಾದರೂ, ವಿದ್ಯುತ್ ಕಾಯ್ದೆಯನ್ನು ರದ್ದುಗೊಳಿಸುವ ಬಗ್ಗೆ ಮತ್ತು ಲಖಿಂಪುರ ಖೇರಿಯಲ್ಲಿ ಸತ್ತ ರೈತರಿಗೆ ಪರಿಹಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ; ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...