Homeಮುಖಪುಟಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

ಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

- Advertisement -
- Advertisement -

ಗುಜರಾತ್‌ನ ಎರಡು ಲೋಕಸಭಾ ಸ್ಥಾನಗಳಿಗೆ ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಆಮ್ ಆದ್ಮಿ ಪಕ್ಷ (ಎಎಪಿ)ವು ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳಲ್ಲಿ ಆರು, ಗುಜರಾತ್‌ನ 26 ಕ್ಷೇತ್ರಗಳ 8ರಲ್ಲಿ ಮತ್ತು ಗೋವಾ ರಾಜ್ಯದ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದೆ. ಗೋವಾದಲ್ಲಿರುವ ಎರಡು ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಾಲುದಾರ ಕಾಂಗ್ರೆಸ್ ಜೊತೆ ಆಪ್ ಒಪ್ಪಂದ ಮಾಡಿಕೊಂಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್, ‘ದೆಹಲಿಯಲ್ಲಿ ಅದರ ಹಿಂದಿನ ಚುನಾವಣಾ ಸಾಧನೆಗಳ ಆಧಾರದ ಮೇಲೆ ಕಾಂಗ್ರೆಸ್ ಪಕ್ಷವು ಒಂದಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಲು ಅರ್ಹವಾಗಿಲ್ಲ’ ಎಂದು ಹೇಳಿದರು.

ಆದರೆ,  ಗುಜರಾತ್‌ನ ಎರಡು ಮತ್ತು ಗೋವಾದ ಒಂದು ಲೋಕಸಭಾ ಸ್ಥಾನಕ್ಕೆ ಆಪ್ ತನ್ನ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದೆ. ಎಎಪಿ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ವೆಂಜಿ ವಿಗಾಸ್ ದಕ್ಷಿಣ ಗೋವಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಚೈತಾರ್ ವಾಸವ ಮತ್ತು ಉಮೇಶ್ ಭಾಯಿ ಮಕ್ವಾನಾ ಕ್ರಮವಾಗಿ ಗುಜರಾತ್‌ನ ಭರೂಚ್ ಮತ್ತು ಭಾವನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆರಕ್ಕೆ ಎಎಪಿ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಿದ್ದು, ಕಾಂಗ್ರೆಸ್‌ಗೆ ಒಂದು ಸ್ಥಾನ ಬಿಟ್ಟುಕೊಡಲಿದೆ ಎಂದು ಪಾಠಕ್ ಹೇಳಿದ್ದಾರೆ. ಆದಾಗ್ಯೂ, ಎಎಪಿ ಸ್ಪರ್ಧಿಸಲು ಬಯಸುವ ಆರು ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ ಬಿಡಲು ಬಯಸುತ್ತಿರುವ ಸ್ಥಾನವನ್ನು ಅವರು ಇನ್ನೂ ಘೋಷಿಸಿಲ್ಲ. ದೆಹಲಿಯ ಎಲ್ಲ ಏಳು ಲೋಕಸಭಾ ಸ್ಥಾನಗಳೂ 2014ರಿಂದಲೂ ಬಿಜೆಪಿ ವಶದಲ್ಲಿವೆ.

‘ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆಯಲ್ಲಿ ಇನ್ನೂ ಯಾವುದೇ ಪ್ರಗತಿಯಿಲ್ಲದ ಕಾರಣ ಭಾರವಾದ ಹೃದಯದಿಂದ ಈ ಘೋಷಣೆಗಳನ್ನು ಮಾಡುತ್ತಿದ್ದೇನೆ’ ಎಂದು ಪಾಠಕ್ ಹೇಳಿದರು.

‘ಕಾಂಗ್ರೆಸ್ ದೆಹಲಿಯಲ್ಲಿ ಶೂನ್ಯ ಲೋಕಸಭಾ ಸ್ಥಾನಗಳನ್ನು ಹೊಂದಿದೆ ಹಾಗೂ ಅದು ದೆಹಲಿ ವಿಧಾನಸಭೆಯಲ್ಲಿ ಶೂನ್ಯ ಸ್ಥಾನಗಳನ್ನು ಹೊಂದಿದೆ. 250 ವಾರ್ಡ್‌ಗಳಲ್ಲಿ (2022) ಎಂಸಿಡಿ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದಿದೆ. ಅರ್ಹತೆಯ ಆಧಾರದಲ್ಲಿಯೂ ಸಹ, ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ ಪಕ್ಷವು ಒಂದೇ ಒಂದು ಸ್ಥಾನಕ್ಕೆ ಅರ್ಹವಾಗಿಲ್ಲ. ಆದರೆ, ಡೇಟಾ ಮಾತ್ರ ಮುಖ್ಯವಲ್ಲ; ಮೈತ್ರಿ ಧರ್ಮದ ಪ್ರಕಾರ ನಾವು ಕಾಂಗ್ರೆಸ್‌ಗೆ ಒಂದು ಸ್ಥಾನ ನೀಡಲು ಸಿದ್ಧರಿದ್ದೇವೆ. ನಾವು ಇಂದು ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ. ದೆಹಲಿಯ ಸೀಟು ಹಂಚಿಕೆಯ ಮಾತುಕತೆಗಳು ಶೀಘ್ರದಲ್ಲೇ ಅಂತಿಮಗೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನಾವು ಒಟ್ಟಿಗೆ ಕೆಲಸ ಮಾಡಬಹುದು, ಯಾವುದೇ ತೀರ್ಮಾನವನ್ನು ಶೀಘ್ರವಾಗಿ ಮಾಡದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ. ನಮ್ಮ ಕೆಲಸವನ್ನು ಪ್ರಾರಂಭಿಸುತ್ತೇವೆ’ ಎಂದು ಪಾಠಕ್ ಕಾಂಗ್ರೆಸ್ಸಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಕಾಂಗ್ರೆಸ್‌ನಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಲಭ್ಯವಿಲ್ಲ; ನಾವು ಅದನ್ನು ಸ್ವೀಕರಿಸಿದ ಕೂಡಲೇ ನಮ್ಮ ನಿರ್ಧಾರಗಳನ್ನು ನವೀಕರಿಸುತ್ತೇವೆ. ವಿಪಕ್ಷಗಳ ಗುಂಪು ಇಂಡಿಯಾ ಬಣದ ಭಾಗವಾಗಿ, ಎಎಪಿ ಮತ್ತು ಕಾಂಗ್ರೆಸ್ ಗೋವಾ, ಗುಜರಾತ್, ಹರಿಯಾಣ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ಹಲವು ವಾರಗಳಿಂದ ಸೀಟು ಹಂಚಿಕೆ ಮಾತುಕತೆ ನಡೆಸುತ್ತಿವೆ. ಆದರೆ, ಈವರೆಗೆ ಅದರಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.

‘ಹಲವು ವಾರಗಳ ಸೀಟು ಹಂಚಿಕೆ ಚರ್ಚೆಗಳಿಂದ ಆಪ್ ಬೇಸತ್ತಿದೆ; ಚುನಾವಣೆಯ ಸಮಯದ ಕೊರತೆಯನ್ನು ಉಲ್ಲೇಖಿಸಿ ಲೋಕಸಭೆ ಚುನಾವಣೆಗೆ ಬೇಗನೆ ಸಿದ್ಧತೆಗಳನ್ನು ಪ್ರಾರಂಭಿಸಲು ಬಯಸಿದೆ. ಕೇಜ್ರಿವಾಲ್ ಈಗಾಗಲೇ ಫೆಬ್ರವರಿ 10 ರಂದು ಪಂಜಾಬ್ ಮತ್ತು ಚಂಡೀಗಢದ ಎಲ್ಲ 13 ಲೋಕಸಭಾ ಸ್ಥಾನಗಳಿಗೆ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ’ ಎಂದು ಪಾಠಕ್ ಹೇಳಿದರು.

ಬಿಜೆಪಿ ಲೇವಡಿ:

ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಮಾತನಾಡಿ, ‘ಎಎಪಿ ಮತ್ತು ಕಾಂಗ್ರೆಸ್ ಪರಸ್ಪರ ನಂಬಿಕೆ ಹೊಂದಿಲ್ಲ; ಬಿಜೆಪಿಯ ಭಯದಿಂದ ಹೇಗಾದರೂ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ’ ಎಂದು ಲೇವಡಿ ಮಾಡಿದ್ದಾರೆ.

‘ಕಾಂಗ್ರೆಸ್ ಮತ್ತು ಎಎಪಿ ನಡುವೆ ಗಂಭೀರ ನಂಬಿಕೆ ಬಿಕ್ಕಟ್ಟು ಇದೆ. ಮೊದಲ ಅವಕಾಶದಲ್ಲಿ ಎಎಪಿ ದ್ರೋಹ ಮಾಡುತ್ತದೆ ಎಂದು ಕಾಂಗ್ರೆಸ್‌ಗೆ ತಿಳಿದಿದೆ. ಕಾಂಗ್ರೆಸ್‌ಗೆ ಅದೇ ರೀತಿ ಮಾಡುತ್ತದೆ ಎಂದು ಎಎಪಿಗೂ ತಿಳಿದಿದೆ. ದೆಹಲಿಯ ಜನರು ಎಲ್ಲಾ ಏಳು ಸ್ಥಾನಗಳನ್ನು ಮತ್ತೊಮ್ಮೆ ಬಿಜೆಪಿಗೆ ನೀಡಲು ನಿರ್ಧರಿಸಿದ್ದಾರೆ. ಏಕೆಂದರೆ, ಬಿಜೆಪಿ ಅವರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ, ಇದು ಆಪ್‌ಗಿಂತ ಭಿನ್ನವಾಗಿ ತನ್ನ ರಾಜಕೀಯ ವಿಸ್ತರಣೆಯನ್ನು ಮಾಡಲು ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ’ ಎಂದು ಕಪೂರ್ ಹೇಳಿದರು.

ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ರೈತರ ಪ್ರತಿಭಟನೆಗೆ ಪಂಜಾಬ್ ಕಾಂಗ್ರೆಸ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...