Homeಮುಖಪುಟದಿಲ್ಲಿ ಚಲೋ: ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು: ಹೈಕೋರ್ಟ್

ದಿಲ್ಲಿ ಚಲೋ: ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು: ಹೈಕೋರ್ಟ್

- Advertisement -
- Advertisement -

ರೈತರ ದೆಹಲಿ ಚಲೋ ಪ್ರತಿಭಟನೆ ಮತ್ತು ಪೊಲೀಸ್‌ ಬಲಪ್ರಯೋದ ಬಗೆಗಿನ ಅರ್ಜಿ ವಿಚಾರಣೆ ನಡೆಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ರೈತರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಮತ್ತು ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು ಎಂದು ಹೇಳಿದೆ.

ದೆಹಲಿ, ಪಂಜಾಬ್ ಮತ್ತು ಹರ್ಯಾಣದ ಗಡಿಯಲ್ಲಿ ರೈತರ ಪ್ರತಿಭಟನೆಗೆ ಸಂಬಂಧಿಸಿದ ಎರಡು ಅರ್ಜಿಗಳನ್ನು    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಲಪಿತಾ ಬ್ಯಾನರ್ಜಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಪ್ರತಿಭಟನಾಕಾರರು ದೆಹಲಿಗೆ ಪ್ರವೇಶಿಸುವುದನ್ನು ತಡೆಯಲು ರಸ್ತೆಗಳನ್ನು ಬಂದ್‌ ಮಾಡುವ ಹರ್ಯಾಣ ಸರ್ಕಾರದ ಕ್ರಮವನ್ನು ಒಂದು ಅರ್ಜಿ ಖಂಡಿಸಿದರೆ, ರೈತರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸುವುದು ಜನರ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಇನ್ನೊಂದು ಅರ್ಜಿ ಹೇಳಿದೆ.

ಅರ್ಜಿ ವಿಚಾರಣೆಯ ವೇಳೆ ಪ್ರತಿಭಟನಾಕಾರರಿಗೆ ಅಭಿವ್ಯಕ್ತಿಗೆ ಮೂಲಭೂತ ಹಕ್ಕಗಳಿದ್ದರೂ, ರಾಜ್ಯ ಸರ್ಕಾರವು ತನ್ನ ನಾಗರಿಕರನ್ನು ರಕ್ಷಿಸಲು ಮತ್ತು ಅವರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಲು ಬದ್ಧವಾಗಿದೆ ಎಂದು ನ್ಯಾಯಾಲಯ ಗಮನಿಸಿದೆ. ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳ ನಡುವೆ ಸಮತೋಲನವಿರಬೇಕು. ಎರಡನ್ನು ಪ್ರತ್ಯೇಕವಾಗಿ ನೋಡಲಾಗದು. ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಬೇಕು. ಇದಕ್ಕೆ ಸಂಬಂಧಪಟ್ಟವರೆಲ್ಲ ಜೊತೆಗೆ ಕುಳಿತು ಸೌಹಾರ್ಧಯುತವಾಗಿ ಸಮಸ್ಯೆ ಪರಿಹರಿಸಬೇಕು ಮತ್ತು ಪ್ರತಿಭಟನೆಗೆ ಸರಿಯಾದ ಪ್ರದೇಶವನ್ನು ಗುರುತಿಸಬೇಕು ಎಂದು ನ್ಯಾಯಾಲಯವು ಹೇಳಿದೆ.

ನ್ಯಾಯಾಲಯವು ಈ ಕುರಿತು ಕೇಂದ್ರ ಸರಕಾರ ಪಂಜಾಬ್, ಹರಿಯಾಣ ಮತ್ತು ದೆಹಲಿ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಭಟನೆಗಳಿಗೆ ಸ್ಥಳವನ್ನು ನಿರ್ಧರಿಸುವಂತೆ ಕೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 15ರಂದು ನಡೆಯಲಿದೆ.

ಉತ್ತರಪ್ರದೇಶ, ಹರ್ಯಾಣ ಮತ್ತು ಪಂಜಾಬ್‌ನ ಹಲವಾರು ರೈತ ಸಂಘಗಳು ಕನಿಷ್ಠ ಬೆಂಬಲ ಬೆಲೆ (MSP) ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿತ್ತು. ಮಂಗಳವಾರ ಬೆಳಗ್ಗೆ ಪಂಜಾಬ್ ಮತ್ತು ಹರಿಯಾಣದ ವಿವಿಧ ಗ್ರಾಮಗಳಿಂದ ರೈತರು ತಮ್ಮ ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ಒಣ ಪಡಿತರ, ವಾಟರ್ ಪ್ರೂಫ್ ಶೀಟ್‌ಗಳು ಮತ್ತು ಹಾಸಿಗೆಗಳನ್ನು ತುಂಬಿಕೊಂಡು ರಾಷ್ಟ್ರ ರಾಜಧಾನಿಯತ್ತ ತೆರಳಲು ಪ್ರಾರಂಭಿಸಿದ್ದರು.  ಶಂಭು ಗಡಿಯಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿ ರೈತರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಹರ್ಯಾಣ ಪೊಲೀಸರು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದು, ಗಡಿಯಲ್ಲಿ ರೈತರ ಟ್ರಕ್‌ಗಳನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...