Homeಕರ್ನಾಟಕಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

ಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕುರಿತು ಹೋರಾಟಗಾರರು, ಕಾನೂನು ತಜ್ಞರು ಸಂತಸ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪಿನ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಆದರ್ಶ್ ಅಯ್ಯರ್, ಇದೊಂದು ಐತಿಹಾಸಿಕ ತೀರ್ಪು. ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಬಹಳ ಕೆಟ್ಟದಾದ ದೇಣಿಗೆ ಪದ್ದತಿ ಬಂದಿತ್ತು. ಅದು ಎಲ್ಲಾ ಭ್ರಷ್ಟಾಚಾರಗಳಿಗೂ ಮಿಗಿಲಾಗಿತ್ತು. ಕಾರ್ಪೋರೇಟ್ ಕಂಪನಿಗಳು ಕಳ್ಳ ದಾರಿಯಲ್ಲಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುತ್ತಿತ್ತು. ಆ ವ್ಯವಸ್ಥೆಯನ್ನು ಒಡೆದು ಹಾಕುವ ಮೂಲಕ ಸುಪ್ರೀಂ ಕೋರ್ಟ್‌ ಪ್ರಜಾಪ್ರಭುತ್ವವನ್ನು ಬಲಪಡಿಸಿದೆ ಎಂದಿದ್ದಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಸರ್ಕಾರ ಯಾವ ರೀತಿ ಸರ್ವಾಧಿಕಾರಿ ಧೋರಣೆ ಅನುಸರಿಸಿತ್ತೋ, ಅದೇ ರೀತಿ ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುನ್ನಡೆಯುತ್ತಿದೆ. ಅದಕ್ಕೆ ಲಗಾಮು ಹಾಕುವಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪು ಬಹಳ ಮಹತ್ವದ್ದಾಗಿದೆ. ಸರ್ಕಾರಗಳು ಅನಿಯಂತ್ರಿತ ಅಥವಾ ಸರ್ವಾಧಿಕಾರಿ ಧೋರಣೆ ಅನುಸರಿಸಲು ಬೇಕಾದಷ್ಟು ಹಣ ಬೇಕು. ಈಗಿನ ಕೇಂದ್ರ ಸರ್ಕಾರಕ್ಕೆ ಆ ಹಣ ಚುನಾವಣಾ ಬಾಂಡ್‌ ಮೂಲಕ ಸಿಗುತ್ತಿತ್ತು. ಅಂತಹ ಅಕ್ರಮ ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ಕಡಿವಾಣ ಹಾಕಿದೆ ಎಂದು ಹೇಳಿದ್ದಾರೆ.

ಬಾಂಡ್ ಮಾಹಿತಿ ನೀಡಲು ಎಸ್‌ಬಿಐ, ಚುನಾವಣಾ ಆಯೋಗಕ್ಕೆ ಸೂಚನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್ ನೀಡುತ್ತಿತ್ತು. ಹಲವು ಕಂಪನಿಗಳು, ಉದ್ಯಮಿಗಳು ರಾಜಕೀಯ ಪಕ್ಷಗಳಿಗೆ, ವಿಶೇಷವಾಗಿ ಬಿಜೆಪಿಗೆ ಕೋಟ್ಯಾಂತರ ರೂಪಾಯಿ ಹಣ ಈಗಾಗಲೇ ನೀಡಿದ್ದಾರೆ. ಯಾರು, ಯಾವಾಗ, ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಮಾರ್ಚ್‌ ಒಳಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವಾಗ ಎಸ್‌ಬಿಐಗೆ ಸೂಚಿಸಿದೆ. ಅಲ್ಲದೆ, ಮಾರ್ಚ್ 13ರ ಒಳಗೆ ಚುನಾವಣಾ ಆಯೋಗ ಈ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಆದೇಶಿಸಿದೆ. ಇದೊಂದು ಮಹತ್ವದ ಆದೇಶ. ಈ ಮೂಲಕ ಯಾವ ಪಕ್ಷಕ್ಕೆ ಯಾರು ಎಷ್ಟು ಹಣ ಕೊಟ್ಟಿದ್ದಾರೆ ಎಂದು ಜನರಿಗೆ ಗೊತ್ತಾಗಲಿದೆ ಎಂದು ಆದರ್ಶ್ ಅಯ್ಯರ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪನಿಂದ ಅದಾನಿ, ಅಂಬಾನಿ, ವೇದಾಂತದಂತಹ ದೊಡ್ಡ ದೊಡ್ಡ ಕಂಪನಿಗಳು ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ, ವಿಶೇಷವಾಗಿ ಬಿಜೆಪಿಗೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗಲಿದೆ. ಅದಾನಿ, ಅಂಬಾನಿಯವರು ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳನ್ನು ಮಾರುತ್ತಿದ್ದರು. ಅದರ ದುಡ್ಡು ಎಲ್ಲಿಗೆ ಹೋಗುತ್ತಿತ್ತು ಎಂದು ಇದುವರೆಗೆ ಮಾಹಿತಿ ಹೊರ ಬರುತ್ತಿರಲಿಲ್ಲ. ಉದಾಹರಣೆಗೆ, ರಿಲಾಯನ್ಸ್ ಕಮ್ಯೂನಿಕೇಷನ್ಸ್ ಎಂಬ ಅನಿಲ್ ಅಂಬಾನಿಯವರ ಕಂಪನಿ ಇತ್ತು. ಅದರ ಮೌಲ್ಯ ಅಂದಾಜು 49 ಸಾವಿರ ಕೋಟಿ ರೂಪಾಯಿ ಇತ್ತು. ಆದರೆ, ಅದನ್ನು ಕೇವಲ 425 ಕೋಟಿ ರೂಪಾಯಿಗೆ ಮುಖೇಶ್ ಅಂಬಾನಿ ಖರೀದಿಸಿದ್ದಾರೆ ಎಂದು ಹೇಳಿದ್ದಾರೆ. ಹಾಗಾದರೆ, ಉಳಿದ 48 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? ಇಂತಹ ಮಾಹಿತಿಗಳು ಜನರಿಗೆ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆ: 

ಚುನಾವಣಾ ಬಾಂಡ್‌ಗಳಿಂದ ಮಾಹಿತಿ ಹಕ್ಕು ಕಾಯ್ದೆಯ ಮೇಲೆ ದೊಡ್ಡ ಪರಿಣಾಮ ಬೀರಿತ್ತು. ಜನರಿಗೆ ರಾಜಕೀಯ ಪಕ್ಷಗಳ ಹಣದ ಕುರಿತು ಮಾಹಿತಿ ಸಿಗುತ್ತಿರಲಿಲ್ಲ. ಒಂದು ಬಾರಿ ಕೇಂದ್ರ ಮಾಹಿತಿ ಹಕ್ಕು ಆಯೋಗ ಚುನಾವಣಾ ಬಾಂಡ್ ಕುರಿತ ಮಾಹಿತಿಯನ್ನುಆರ್‌ಟಿಐ ಮೂಲಕ ನೀಡುವಂತೆ ಸೂಚಿಸಿತ್ತು. ಆದರೆ, ಅದರ ವಿರುದ್ದ ಕೇಂದ್ರ ಸರ್ಕಾರ ನ್ಯಾಯಾಲಯದಿಂದ ತಡೆ ತಂದಿತ್ತು. ಈ ಮೂಲಕ ರಾಜಕೀಯ ಪಕ್ಷಗಳು ಒಂದು ಕಡೆ ದುಡ್ಡು ಮಾಡುತ್ತಿತ್ತು. ಮತ್ತೊಂದೆಡೆ ಜನರಿಗೆ ಮಾಹಿತಿ ನೀಡುತ್ತಿರಲಿಲ್ಲ ಎಂದು ಆದರ್ಶ್‌ ಅಯ್ಯರ್ ತಿಳಿಸಿದ್ದಾರೆ.

ತಿದ್ದುಪಡಿಗಳು ಅಸಂವಿಧಾನಿಕ

2017ರಲ್ಲಿ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಚುನಾವಣಾ ಬಾಂಡ್ ಯೋಜನೆ ಜಾರಿಗೊಳಿಸಲಾಗಿತ್ತು. ಕೇವಲ ಹಣಕಾಸು ಕಾಯ್ದೆ ಮಾತ್ರವಲ್ಲದೆ, ಆರ್‌ಬಿಐ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಜನಪ್ರತಿನಿಧಿಗಳ ಕಾಯ್ದೆ ಎಲ್ಲದಕ್ಕೂ ತಿದ್ದುಪಡಿ ತಂದು ಚುನಾವಣಾ ಬಾಂಡ್ ಜಾರಿಗೊಳಿಸಿದ್ದರು. ಈ ತಿದ್ದುಪಡಿಗೂ ಮೊದಲು ಕಂಪನಿಗಳು ರಾಜಕೀಯ ಪಕ್ಷಗಳಿಗೆ ತಮ್ಮ ಲಾಭದ ಗರಿಷ್ಠ ಶೇ.7ರಷ್ಟು ಮಾತ್ರ ದೇಣಿಗೆ ನೀಡಬಹುದಿತ್ತು. ಅದನ್ನು ತೆಗೆದು ಹಾಕಿದ್ದರು. ಬಿಜೆಪಿಯವರು ತಮ್ಮ ಬಹುಮತ ದುರುಪಯೋಗ ಮಾಡಿಕೊಂಡು ಲಾಭಕ್ಕೆ ಬಳಸುತ್ತಿದ್ದರು. ಪ್ರಜಾಪ್ರಭುತ್ವವನ್ನೇ ತಿರುಚಿದ್ದರು. ಸುಪ್ರೀಂ ಕೋರ್ಟ್‌ ಈ ಎಲ್ಲಾ ತಿದ್ದುಪಡಿಗಳನ್ನು ಅಸಂವಿಧಾನಿಕ ಎಂದು ಹೇಳಿದೆ ಎಂದಿದ್ದಾರೆ.

ಜನರಿಗೆ ಜಾಗೃತಿ ಮೂಡಿಸಬೇಕು:

ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳ ನಡೆಸುತ್ತಿದ್ದ ‘ಕಾನೂನಾತ್ಮಕ ಭ್ರಷ್ಟಾಚಾರ’ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಚುನಾವಣಾ ಬಾಂಡ್‌ನಿಂದ ರಾಜಕೀಯ ಪಕ್ಷಗಳು ಮತ್ತು ಅವರ ಜೊತೆಗಿರುವ ಬಂಡವಾಳ ಶಾಹಿಗಳಿಗೆ ಲಾಭ ಆಗುತ್ತಿದೆ ಎಂದು ಜನರಿಗೆ ತಿಳಿಸಬೇಕು. ಜನರು ಎಚ್ಚೆತ್ತುಕೊಂಡೆ ಮುಂದಿನ ಚುನಾವಣೆಯಲ್ಲಿ ಇದು ಖಂಡಿತಾ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ತೀರ್ಪು ಸ್ವಾಗತಾರ್ಹ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ 

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರು ಮಾತನಾಡಿ, “ಸುಪ್ರೀಂ ಕೋರ್ಟ್‌ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಇದು ಬಹಳ ಸಂತೋಷದ ವಿಷಯ. 2017ರ ಹಣಕಾಸು ಕಾಯ್ದೆಯ ತಿದ್ದುಪಡಿಯೇ ಸರಿಯಾಗಿರಲಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿ ಪ್ರಕಾರ, ಇದುವರೆಗೆ ಸಂಗ್ರವಾದ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐ ಮತ್ತು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಇದು ಅತ್ಯಂತ ಸ್ವಾಗತಾರ್ಹ” ಆದೇಶ ಎಂದಿದ್ದಾರೆ.

ಭವಿಷ್ಯದಲ್ಲಿ ಸರ್ಕಾರ ಇಂತಹ ದುಷ್ಟ ಆಲೋಚನೆ ಮಾಡದಿರಲಿ : ಖರ್ಗೆ

ಸುಪ್ರೀಂ ತೀರ್ಪನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭವಿಷ್ಯದಲ್ಲಿ ಸರ್ಕಾರವು ಇಂತಹ ದುಷ್ಟ ಆಲೋಚನೆಗಳನ್ನು ಮಾಡುವುದನ್ನು ನಿಲ್ಲಿಸಲಿದೆ ಎಂದು ನಾನು ಭಾವಿಸುತ್ತೇನೆ. ಈ ಯೋಜನೆಯನ್ನು ಪ್ರಾರಂಭಿಸಿದಾಗಲೇ ಕಾಂಗ್ರೆಸ್ ಪಕ್ಷವು ಇದು ಪಾರದರ್ಶಕತೆಯಿಂದ ಕೂಡಿಲ್ಲ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿತ್ತು. ಅಲ್ಲದೆ, 2019ರ ಚುನಾವಣಾ ಪ್ರಣಾಳಿಕೆಯಲ್ಲಿ, ಮೋದಿ ಸರ್ಕಾರದ ಈ ಸಂಶಯಾಸ್ಪದ ಯೋಜನೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು” ಎಂದಿದ್ದಾರೆ.

ತೀರ್ಪು ದೊಡ್ಡ ಪರಿಣಾಮ ಬೀರಲಿದೆ : ಕಪಿಲ್ ಸಿಬಲ್

ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ತೀರ್ಪಿನ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ್ದು, “ಎಲ್ಲಾ ಹಣ ರಾಜಕೀಯ ಪಕ್ಷಗಳು ಪಡೆದಿದೆ. ಅದರಲ್ಲೂ ಬಿಜೆಪಿ ಗರಿಷ್ಠ ಮೊತ್ತವನ್ನು ಪಡೆದಿದೆ ಎಂಬ ಸರಳ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ ತೀರ್ಪು ಖಷಿ ಕೊಟ್ಟಿದೆ. ಚುನಾವಣಾ ಬಾಂಡ್ ಯೋಜನೆಯ ಸ್ಥಗಿತ ನಿಸ್ಸಂಶಯವಾಗಿಯೂ ದೊಡ್ಡ ಪರಿಣಾಮ ಬೀರಲಿದೆ” ಎಂದಿದ್ದಾರೆ

ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ: ಎಸ್‌ವೈ ಖುರೈಶಿ

ಸುಪ್ರೀಂ ತೀರ್ಪಿನ ಕುರಿತು ಮಾತನಾಡಿದ ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, “ಕಳೆದ 5-7 ವರ್ಷಗಳಲ್ಲಿ ನಾವು ಸುಪ್ರೀಂ ಕೋರ್ಟ್‌ನಿಂದ ಪಡೆದ ಅತ್ಯಂತ ಐತಿಹಾಸಿಕ ತೀರ್ಪು ಇದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ. ಕಳೆದ ಹಲವು ವರ್ಷಗಳಿಂದ ನಾವೆಲ್ಲರೂ ಇದರ ಬಗ್ಗೆ ಕಾಳಜಿ ವಹಿಸಿದ್ದೇವೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವ ಪ್ರತಿಯೊಬ್ಬರೂ ಈ ಯೋಜನೆ ವಿರುದ್ದ ಪ್ರತಿಭಟಿಸುತ್ತಿದ್ದರು. ನಾನೇ ಹಲವಾರು ಲೇಖನಗಳನ್ನು ಬರೆದಿದ್ದೇನೆ ಮತ್ತು ಮಾಧ್ಯಮಗಳೊಂದಿಗೆ ಹಲವು ಬಾರಿ ಮಾತನಾಡಿದ್ದೇನೆ. ನಾವು ಎತ್ತಿದ ಪ್ರತಿಯೊಂದು ಸಮಸ್ಯೆಗೂ ಈ ತೀರ್ಪಿನಲ್ಲಿ ಉತ್ತರ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...