Homeಕರ್ನಾಟಕಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ. ಬಿಜೆಪಿಯ ಕುತಂತ್ರಕ್ಕೆ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ, ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು” ಎಂದಿದ್ದಾರೆ.

ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತರಲಾಗಿತ್ತು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿವೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ಇದು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ ಎಂದಿದ್ದಾರೆ.

ಈಗಾಗಲೇ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಬೇಕೆಂದು ಕೋರ್ಟ್‌ ಹೇಳಿದೆ. ಇದರಿಂದ ಬಿಜೆಪಿಯ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ, ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ. ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...