Homeಕರ್ನಾಟಕಕರ್ನಾಟಕ ಬಜೆಟ್-2024: ಅಹಿಂದ, ಮಹಿಳಾ ಕಲ್ಯಾಣಕ್ಕೆ ಸಿಕ್ಕ ಅನುದಾನ ಎಷ್ಟು?

ಕರ್ನಾಟಕ ಬಜೆಟ್-2024: ಅಹಿಂದ, ಮಹಿಳಾ ಕಲ್ಯಾಣಕ್ಕೆ ಸಿಕ್ಕ ಅನುದಾನ ಎಷ್ಟು?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 15ನೇ ಬಜೆಟ್‌ನಲ್ಲಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಅಹಿಂದ ವರ್ಗಕ್ಕೆ ಸಾಕಷ್ಟು ಅನುದಾನ ಮೀಸಲಿಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ₹28,608, ಸಮಾಜ ಕಲ್ಯಾಣ ಇಲಾಖೆ 39 ಸಾವಿರ ಕೋಟಿ ಹಾಗೂ ವಕ್ಫ್‌ ಆಸ್ತಿ ಅಭಿವೃದ್ಧಿಗೆ ₹100 ಕೋಟಿ ನಿಗದಿಪಡಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿಕ್ಕಿದ್ದೆಷ್ಟು?

2024-25ನೇ ಸಾಲಿನ ಗೃಹಲಕ್ಷ್ಮಿ ಯೋಜನೆಗಾಗಿ ₹28,608 ಕೋಟಿ ನಿಗದಿ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ₹90 ಕೋಟಿ ವೆಚ್ಚದಲ್ಲಿ 75,938 ಸ್ಮಾರ್ಟ್‌ ಫೋನ್‌ ಒದಗಿಸಲು ನಿರ್ಧರಿಸಿದ್ದು, ರಾಜ್ಯದಲ್ಲಿ ₹200 ಕೋಟಿ ವೆಚ್ಚದಲ್ಲಿ 1000 ಹೊಸ ಅ೦ಗನವಾಡಿ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಾಗಿದೆ.

‘Cerebral Palsy, Muscular Dystrophy, Parkinsons ಮತ್ತು Multiple Sclerosis’ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳಿ ₹1000 ಪ್ರೋತ್ಸಾಹಧನ. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸ೦ರಕ್ಷಣೆಗಾಗಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ 4 ಅನುಪಾಲನಾ ಗೃಹಗಳ ಪ್ರಾರಂಭ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು ₹2000ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಲಿ೦ಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು
₹1,200 ಕ್ಕೆ ಹೆಚ್ಚಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು ₹2,710 ಕೋಟಿ ಅನುದಾನ ಮೀಸಲಿಡಲಾಗಿದೆ. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ತಲಾ ₹100ಕ್ಕೆ ಹೆಚ್ಚಳ. ಕ್ರೈಸ್‌ ಅಡಿಯಲ್ಲಿ ₹638 ಕೋಟಿಗಳ ಅಂದಾಜು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ; 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳ ಪ್ರಾರಂಭಕ್ಕೆ ತೀರ್ಮಾನ ಮಾಡಲಾಗಿದೆ.

ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ; 31 ಹೊಸ ಮೆಟ್ರಕ್‌ ನಂತರದ ವಸತಿ ನಿಲಯ ಮಂಜೂರು ಮಾಡಲು ಕ್ರಮ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ
ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು ₹35 ಕೋಟಿಗಳ Corpus Fund ಸ್ಥಾಪನೆ. ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಎಂದು ಮರುನಾಮಕರಣ ಮಾಡಿ, 5 ಹಾಗೂ 7 ನೇ ತರಗತಿವರೆಗೆ ಇರುವ ಈ ಶಾಲೆಗಳಲ್ಲಿ ಕ್ರಮವಾಗಿ ಆರನೇ ಹಾಗೂ ಎ೦ಟನೇ ತರಗತಿ ಪ್ರಾರಂಭಿಸಲು ಕ್ರಮ ಹಾಗೂ ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲ 25 ರಿಂದ 40ಕ್ಕೆ ಹೆಚ್ಚಿಸಲು ಕ್ರಮ. ಏಳು ಜಿಲ್ಲಾ ಕೇಂದ್ರಗಳಲ್ಲಿ 100 ಸಂಖ್ಯಾಬಲದ ಬಾಲಕ-ಬಾಲಕಿಯರ 14 ವಿದ್ಯಾರ್ಥಿನಿಲಯಗಳ ಪ್ರಾರಂಭಕ್ಕೆ ಅನುಮತಿ.

ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ವೃತ್ತಿಪರ ತರಬೇತಿ ಕೋರ್ಸ್‌ಗೆ ದಾಖಲಾಗುವ 200 ಇಂಜಿನಿಯರಿಂಗ್‌ ಪದವೀಧರರಿಗೆ ₹15,000 ಶಿಷ್ಯವೇತನ ನೀಡಲು ಕ್ರಮ. ₹5,000 ಯುವಕ-ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ. ಪೋಸ್ಟ್‌ ಡಾಕ್ಟರಲ್‌ ಫೆಲೋಶಿಪ್‌ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ ₹25,000 ಶಿಷ್ಯವೇತನ ಸೌಲಭ್ಯ.

77 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟು ಮೀಸಲು ಹಾಗೂ ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು  ಶೇಷ ಕೋಶ ಸ್ಥಾಪನೆಗೆ ನಿರ್ಧಾರ.

ಹಿಂದುಳಿದ ವರ್ಗಗಳ ಕಲ್ಯಾಣ:

ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ₹200 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ. 20 ವಿದ್ಯಾರ್ಥಿ ನಿಲಯಗಳಿಗೆ ನಾಲ್ಕು ಕೋಟಿ ರೂ. ಗಳ ಘಟಕ ವೆಚ್ಚದಲ್ಲಿ ಕಟ್ಟಡ ನಿರ್ಮಾಣ. ರಾಜ್ಯದ ಹಿಂದುಳಿದ ವರ್ಗಗಳ ಎದ್ಯಾರ್ಥಿಗಳಿಗೆ ಕ್ಲಾಟ್, ಮ್ಯಾಟ್ (CLAT, MAT) ಮತ್ತು ಚಾರ್ಟೆಡ್ ಅಕೌಂಟೆಂಟ್ ಫೌಂಡೇಷನ್‌ ಪರೀಕ್ಷಾ ಪೂರ್ವ ತರಬೇತಿ. 500 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ ಜೆಇಇ-ನೀಟ್ಉ ಚಿತ ತರಬೇತಿ ನೀಡಲು ಕ್ರಮ. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸ್ಥಿತಿಗತಿ ಅಧ್ಯಯನ ನಡೆಸಿ ಅಭಿವೃದ್ಧಿಗಾಗಿ ‘ಕರ್ನಾಟಕ ಅಲೆಮಾರಿ ಆಯೋಗ’ ರಚನೆ.

ಅಲ್ಪಸಂಖ್ಯಾತರ ಕಲ್ಯಾಣ:

50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್‌ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭಕ್ಕೆ ನಿರ್ಧಾರ.

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್‌ಎಫ್‌ಸಿ ಮೂಲಕ ಪಡೆಯುವ ₹10 ಕೋಟಿ ವರೆಗಿನ ಸಾಲಕ್ಕೆ ಶೇ.6 ರಷ್ಟು ಬಡ್ಡಿ ಸಹಾಯಧನ ಸೌಲಭ್ಯ. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು ₹10 ಕೋಟಿ ರೂ. ಅನುದಾನದ ಜತೆಗೆ, ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ
₹100 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ₹20 ಕೋಟಿ ಅನುದಾನ. ಮಂಗಳೂರಿನ ಹಜ್‌ ಭವನದ ನಿರ್ಮಾಣಕ್ಕೆ ₹10 ಕೋಟಿ ಅನುದಾನ. 9 ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ ₹50 ಕೋಟಿ, ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ ₹200 ಕೋಟಿ ಅನುದಾನ ನಿಗದಿಪಡಿಸಲಾಗಿದೆ.

ಸಿಖ್‌ ಲಿಗಾರ್‌ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂಪಾಯಿ ಹಾಗೂ ಬೀದರ್‌ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ; ಕರ್ನಾಟಕ ಬಜೆಟ್-2024: ವೃದ್ಧಾಪ್ಯ ವೇತನ ಹೆಚ್ಚಳ, ಹಲವು ಹೊಸ ಕಾರ್ಯಕ್ರಮಗಳ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...