Homeಮುಖಪುಟರೈತರ ದೆಹಲಿ ಚಲೋ ಮೆರವಣಿಗೆ: ಎಂಎಸ್‌ಪಿ ಜಾರಿಗೆ ಒಪ್ಪದ ಕೇಂದ್ರ; ಮೂರನೇ ಸುತ್ತಿನ ಸಭೆಯೂ ವಿಫಲ

ರೈತರ ದೆಹಲಿ ಚಲೋ ಮೆರವಣಿಗೆ: ಎಂಎಸ್‌ಪಿ ಜಾರಿಗೆ ಒಪ್ಪದ ಕೇಂದ್ರ; ಮೂರನೇ ಸುತ್ತಿನ ಸಭೆಯೂ ವಿಫಲ

- Advertisement -
- Advertisement -

ಚಂಡೀಗಢದಲ್ಲಿ ಗುರುವಾರ ಸಂಜೆ ನಡೆದ ಕೇಂದ್ರ ಸರ್ಕಾರದ ಮೂವರು ಸಚಿವರ ತಂಡ ಮತ್ತು ರೈತರ ಸಂಘನೆಗಳ ನಡುವಿನ ಮೂರನೇ ಸುತ್ತಿನ ಸಭೆಯಲ್ಲಿಯೂ ಕೂಡ ಒಮ್ಮತ ಮೂಡಿಲ್ಲ. ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಬಲ ನೀಡಲು ಸರ್ಕಾರ ನಿರಾಕರಿಸಿದ್ದು, ಇದೀಗ ಉಭಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಇದೀಗ ನಾಲ್ಕನೇ ಸುತ್ತಿನ ಸಭೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಶಂಭು ಮತ್ತು ಖಾನೂರಿ ಗಡಿಯಲ್ಲಿ ರೈತರ ಪ್ರತಿಭಟನೆಯೂ ಮುಂದುವರಿಯಲಿದೆ. ಚುನಾವಣಾ ನೀತಿ ಸಂಹಿತೆಗೂ ಮುನ್ನವೇ ಒತ್ತಡ ತಂದು, ತಮ್ಮ ಬೇಡಿಕೆ ಈಡೇರಿಸಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತ ಮುಖಂಡರಿಗೆ ನಿರಾಶೆಯಾಗಿದೆ. ಇತ್ತ ಕೇಂದ್ರ ಸರ್ಕಾರ ಚುನಾವಣಾ ನೀತಿ ಸಂಹಿತೆ ಮುಗಿಯುವವರೆಗೂ ಮಾತುಕತೆಯನ್ನು ಎಳೆದು ತರಲು ಮುಂದಾಗಿದೆ ಎಂದು ಇಂದಿನ ಸಭೆ ಸೂಚಿಸಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ಅರ್ಜುನ್ ಮುಂಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರನ್ನೊಳಗೊಂಡ ಮೂರನೇ ಸುತ್ತಿನ ಸಭೆಯ ವಿಫಲವಾಗಿದೆ. ಈ ನಡುವೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಧ್ಯಸ್ಥಗಾರನ ಪಾತ್ರವನ್ನು ವಹಿಸಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿ ವಿಫಲರಾಗಿದ್ದಾರೆ.

ಸಭೆಯಲ್ಲಿ ಶಂಭು ಮತ್ತು ಖಾನೂರಿ ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿರುವ ಬಗ್ಗೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಸಭೆಯಲ್ಲಿ ರೈತರ ಮೇಲಿನ ದೌರ್ಜನ್ಯದ ಕೆಲವು ಚಿತ್ರಗಳನ್ನೂ ಮುಖಂಡರು ಕೇಂದ್ರ ಸಚಿವರಿಗೆ ತೋರಿಸಿದರು. ಉಳಿದ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಇಡೀ ಸಭೆಯು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಯ ಮೇಲೆ ಕೇಂದ್ರೀಕರಿಸಿತು. ಬೆಳೆ ಬೆಲೆಗಳ ಕಾನೂನುಬದ್ಧ ಖಾತರಿಯ ವಿಷಯದ ಬಗ್ಗೆ, ಕೇಂದ್ರ ಸಚಿವರು ಭಾರತ ಸರ್ಕಾರವು ಈ ವಿಷಯದ ಬಗ್ಗೆ ಎಲ್ಲ ರಾಜ್ಯಗಳು, ಗ್ರಾಹಕ ವೇದಿಕೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸುತ್ತದೆ. ನಂತರ, ವಿಷಯವನ್ನು ಪರಿಣಾಮಕಾರಿಯಾಗಿ ಎದುರಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದರಲ್ಲಿ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು ಸಹ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಒಪ್ಪದ ರೈತ ಮುಖಂಡರು, ಬೆಳೆ ಬೆಲೆಯ ಖಾತರಿ ಕಾನೂನನ್ನು ಯಾವಾಗ ಮತ್ತು ಯಾವ ಸಮಯಕ್ಕೆ ಮಾಡುತ್ತಾರೆ ಎಂಬ ಬದ್ಧತೆಯನ್ನು ಬಯಸುತ್ತೇವೆ ಎಂದರು. ಬೆಳೆ ಬೆಲೆ ಖಾತ್ರಿ ಕಾನೂನು ಜಾರಿಯಾಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ ಅವರು, ಸಚಿವ ಪಿಯೂಷ್ ಗೋಯಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಂತರ, ಪಿಯೂಷ್ ಗೋಯಲ್ ಅವರು ರೈತರನ್ನು ಪ್ರತಿನಿಧಿಸುವ ಎಂಎಸ್‌ಪಿ ಮೇಲಿನ ಕಾನೂನು ಖಾತರಿಯ ವಿಷಯವನ್ನು ಚರ್ಚಿಸಲು ಕೇಂದ್ರ ಕೃಷಿ ಸಚಿವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲು ಪ್ರಸ್ತಾಪಿಸಿದರು. ಯಾವುದೇ ಸಮಿತಿಯ ಸದಸ್ಯರಾಗಿರಲು ಇಷ್ಟಪಡುವುದಿಲ್ಲ ಎಂದು ಜಗಜಿತ್ ಸಿಂಗ್ ದಲ್ಲೆವಾಲ್ ಸ್ಪಷ್ಟಪಡಿಸಿದ್ದಾರೆ.

ಇದಲ್ಲದೇ ನಕಲಿ ಕೀಟನಾಶಕಗಳ ವಿರುದ್ಧ ಕಟ್ಟುನಿಟ್ಟಿನ ಬೇಡಿಕೆ ಕುರಿತು ಕೇಂದ್ರ ಸಚಿವರು ಮಾತನಾಡಿ, ಕೇಂದ್ರ ಸರ್ಕಾರವು ಈಗಿರುವ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ನಕಲಿ ಔಷಧಗಳ ವಿರುದ್ಧ ಕಠಿಣ ಕಾನೂನು ತರಲಿದೆ ಎಂದರು. ಸಚಿವರು ಬೇಡಿಕೆಗೆ ಸಮ್ಮತಿಸಿದ್ದು, ಪ್ರಸ್ತುತ ಆಂದೋಲನ ಅಂತ್ಯಗೊಂಡ ನಂತರ ಒಂದು ವಾರದೊಳಗೆ ಲಖಿಂಪುರ ಖೇರಿಯಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಬಿಜೆಪಿ ಸರ್ಕಾರದ ಹತ್ತು ವರ್ಷಗಳ ಅವಧಿಯಲ್ಲಿ ರೈತರ ಕಲ್ಯಾಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಕೇಂದ್ರ ಸಚಿವರು ಚರ್ಚೆ ನಡೆಸಿದರೂ ರೈತರು ಸೊಪ್ಪು ಹಾಕಿಲ್ಲ.

ದೆಹಲಿಯಲ್ಲಿ ಧರಣಿ ಅನುಮತಿಗೆ ಒತ್ತಾಯ:

ಮೂಲಗಳ ಪ್ರಕಾರ, ಸಭೆಯಲ್ಲಿ ರೈತ ಮುಖಂಡರು ದೆಹಲಿಯಲ್ಲಿ ಪ್ರತಿಭಟನೆಗೆ ಸ್ಥಳವನ್ನು ಕೇಳಿದ್ದಾರೆ. ನಂತರ ಪಿಯೂಷ್ ಗೋಯಲ್ ಅವರು ಪಂಜಾಬ್ ಸರ್ಕಾರವು ಅನುಮೋದಿಸಿದ ಯಾವುದೇ ಸ್ಥಳದಲ್ಲಿ ಕುಳಿತುಕೊಳ್ಳಬಹುದು ಎಂದು ಹೇಳಿದರು. ಜಾಗ ನೀಡುವುದಾಗಿ ಮುಖ್ಯಮಂತ್ರಿ ಭಗವಂತ ಮಾನ್ ಒಪ್ಪಿಗೆ ಸೂಚಿಸಿದ್ದು, ದಿಲ್ಲಿಯಲ್ಲಿ ಧರಣಿ ಸತ್ಯಾಗ್ರಹಕ್ಕೆ ಜಾಗ ನೀಡುವಂತೆ ಆಗ್ರಹಿಸುತ್ತಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಬೆಳೆ ಬೆಲೆ ಖಾತ್ರಿ ಕಾನೂನು ಜಾರಿಯಾಗುವವರೆಗೆ ಬ್ಯಾರಿಕೇಡ್‌ಗಳನ್ನು ತೆಗೆದು ದೆಹಲಿಯಲ್ಲಿ ಕುಳಿತುಕೊಳ್ಳಲು ಜಾಗ ನೀಡಬೇಕು ಎಂದು ಮುಖಂಡರು ಸಚಿವರನ್ನು ಒತ್ತಾಯಿಸಿದರು.

ಪಂಜಾಬ್‌ನ ಮೂರು ಜಿಲ್ಲೆಗಳು ಮತ್ತು ಹರಿಯಾಣದ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಈಗಾಗಲೆ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಪಂಜಾಬ್, ಸಂಗ್ರೂರ್, ಪಟಿಯಾಲ ಮತ್ತು ಫತೇಘರ್ ಸಾಹಿಬ್‌ನ ಮೂರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಫೆಬ್ರವರಿ 16 ರವರೆಗೆ ಬಂದ್ ಮಾಡಲಾಗಿದೆ. ಮತ್ತೊಂದೆಡೆ, ಹರಿಯಾಣದ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್, ಮೊಬೈಲ್ ಮತ್ತು ಎಸ್‌ಎಂಎಸ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 17 ರವರೆಗೆ ವಿಸ್ತರಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಸೇರಿವೆ.

ಇದನ್ನೂ ಓದಿ; ಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಇಬ್ಬರ ಸಾವು, 25 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...