Homeಕರ್ನಾಟಕಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ, ಅವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಸಿಎಂ

ಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ, ಅವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಸಿಎಂ

- Advertisement -
- Advertisement -

‘ಬಜೆಟ್ ಓದಲು ಶುರುವಾಗುವ ಮೊದಲೇ ಬಿಜೆಪಿ ಏನಿಲ್ಲಾ ಏನಿಲ್ಲಾ ಅಂತ ರಾಗ ಎಳೆದರು, ಅವರ ತಲೆಯಲ್ಲಿ ಏನೂ ಇಲ್ಲ ಎಂದು ತೋರಿಸಿದ್ದಾರೆ. ಬಡವರ ಕೊಳ್ಳುವ ಶಕ್ತಿ ಹೆಚ್ಚಾಗುವ ಗುರಿ ಇಟ್ಟುಕೊಂಡು ಯೋಜನೆಗಳನ್ನು ರೂಪಿಸಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ‘ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ , ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ಪ್ರಯತ್ನವೂ ಬಜೆಟ್ ನಲ್ಲಿ ಆಗಿದೆ’ ಎಂದು ತಿಳಿಸಿದರು.

‘ದೇಶದಲ್ಲಿ ನಿರುದ್ಯೋಗ, ಹಣದುಬ್ಬರುದ ಸಮಸ್ಯೆಗಳಿಂದ ಬಡವರು ಜೀವನ ಸಾಗಿಸುವುದು ಕಷ್ಟವಾಗಿದೆ. ಬಡವರ ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಲು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ ನಾವು ಅಧಿಕಾರಕ್ಕೆ ಬಂದು 9 ತಿಂಗಳಾಗುವ ಮೊದಲೇ ನಾವು ಜನತೆಗೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಲಾಗಿದೆ. ಇದರೊಂದಿಗೆ ಕೃಷಿ, ನೀರಾವರಿ, ಲೋಕೋಪಯೋಗಿ, ಇಂಧನ, ಗ್ರಾಮೀಣಾಭಿವೃದ್ಧಿ, ಬರಗಾಲ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಹಾಗೂ ಅಭಿವೃದ್ಧಿಗೆ ಹಣ ಕೊಡುವ ಕೆಲಸವನ್ನೂ ಮಾಡಲಾಗಿದೆ’ ಎಂದು ವಿವರಿಸಿದರು.

ಅಭಿವೃದ್ಧಿಗೂ ಅನುದಾನ

2024-25 ನೇ ಸಾಲಿಗೆ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3,27,747 ಕೋಟಿ ರೂ.ಇತ್ತು. ಕಳೆದ ಬಜೆಟ್ ಗಿಂತ 46,636 ಕೋಟಿ ರೂ. ಹೆಚ್ಚಾಗಿದೆ. ಜುಲೈನಲ್ಲಿ ಮಂಡಿಸಿದ ಬಜೆಟ್ ಗಾತ್ರಕ್ಕಿಂತ ಬೆಳವಣಿಗೆಯಲ್ಲಿ ಶೇ. 13 ರಷ್ಟು ಬೆಳವಣಿಗೆಯಾಗಿದೆ. ಆರ್ಥಿಕವಾಗಿ ದಿವಾಳಿಯಾಗಿದೆ , ಗ್ಯಾರಂಟಿ ಜಾರಿಯಿಂದಾಗಿ ಮತ್ತು ಮಹಿಳೆಯರು , ಬಡವರಿಗೆ ಅವಮಾನವಾಗುವ ರೀತಿಯಲ್ಲಿ ‘ಬಿಟ್ಟಿ ಗ್ಯಾರಂಟಿ’ ಎಂಬ ಟೀಕೆ ಬಂದಿದೆ. ಈ ವರ್ಷ 36,000 ಕೋಟಿ ರೂ. ಗ್ಯಾರಂಟಿಗಳಿಗೆ ಕೊಟ್ಟಿದ್ದರೂ ಕೂಡ ಅಭಿವೃದ್ಧಿಗೂ ಅನುದಾನವನ್ನು ಮೀಸಲಿರಿಸಿದ್ದೇವೆ. ಬರಗಾಲ ನಡುವೆಯೂ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು , ಸುಮಾರು 35,000 ಕೋಟಿ ರೂ. ಆಹಾರದ ಉತ್ಪಾದನೆಯಲ್ಲಿ ನಷ್ಟವಾಗಿದೆ. 18171 ಕೋಟಿ ರೂ.ಗಳನ್ನು ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪ್ರಕಾರ ಬರಪರಿಹಾರವನ್ನು ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ಎನ್.ಡಿ.ಆರ್ ಎಫ್ ಅನುದಾನ ನಿಗದಿ ಮಾಡುವುದು ಹಣಕಾಸು ಆಯೋಗದವರು. ಅದು ರಾಜ್ಯದಿಂದ ಸಂಗ್ರಹಿಸಿರುವ ಹಣ. ಕೇಂದ್ರ ಸರ್ಕಾರದ ಅನುದಾನವಲ್ಲ. ಐದು ತಿಂಗಳಾದರೂ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ, ಸಭೆಯನ್ನೂ ಕರೆದಿಲ್ಲ ಎಂದು ವಿವರಿಸಿದರು.

ಬಿಜೆಪಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ

‘ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲಾ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ, ಟೀಕೆಗಳು ಆರೋಗ್ಯಕರವಾಗಿರಬೇಕು. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ; ಪ್ಲಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದರು.

ಕನ್ನಡಿಗರಿಗೆ ಅನ್ಯಾಯವಾದರೂ ಸುಮ್ಮನಿರಬೇಕೇ?

‘ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ. ಅವರು ಕೂಡ ಕೋಲೆಬಸವನ ಹಾಗೆ ತಲೆ ಅಲ್ಲಾಡಿಸದೇ ಕೇಂದ್ರದವರನ್ನು ಕೇಳಬೇಕಿತ್ತು. ಕೋಲಾರ ಸಂಸದ ಮುನಿಸ್ವಾಮಿಯವರು ಅವರು ಸಂಸತ್ತಿನಲ್ಲಿ ಒಂದು ದಿನವೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬಾಯಿಬಿಡಲಿಲ್ಲ. ಐದು ವರ್ಷದಲ್ಲಿ ಒಂದು ಬಾರಿಯಾದರೂ ಮಾತನಾಡಿದ್ದಾರಾ? ಅವರು ಸಂಸದರಾಗಲು ಲಾಯಕ್ಕೇ? ಕೇಂದ್ರ ಸರ್ಕಾರದಿಂದ ನ್ಯಾಯಯುತವಾದದ್ದು ಕೇಳಲು ಇವರಿಗೆ ಸಾಧ್ಯವಿಲ್ಲ ಎಂದರೇ ಏನು ಸೂಚಿಸುತ್ತದೆ. ನಾನು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ , ಕೇಂದ್ರದ ಅನುದಾನವನ್ನು ಪಡೆಯಿರಿ ಎಂದು ಒತ್ತಾಯಿಸಿದ್ದೆ. 15 ನೇ ಹಣಕಾಸು ಆಯೋಗದವರು ವಿಶೇಷ ಅನುದಾನ ₹5495 ಕೋಟಿ ವಿಶೇಷ ಅನುದಾನ ಪಡೆಯಲು ಹೇಳಿದ್ದೆ. ಬೆಂಗಳೂರು ಅಭಿವೃದ್ಧಿಗೆ ₹6000 ಕೋಟಿ ಕೊಟ್ಟಿದ್ದಾರೆ; ಅದನ್ನು ಪಡೆಯಿರಿ ಎಂದು ಹೇಳಿದ್ದೆ. ಒಟ್ಟು ₹11495 ಕೋಟಿ ಶಿಫಾರಸು ಮಾಡಿರುವುದನ್ನು ಒತ್ತಾಯ ಮಾಡಿ ಎಂದು ಅವರಿಗೆ ಒತ್ತಾಯಿಸಿದ್ದೆ. ಕನ್ನಡಿಗರಿಗೆ ಅನ್ಯಾಯವಾದರೂ ಸುಮ್ಮನಿರಬೇಕೇ? ಭದ್ರಾ ಮೇಲ್ದಂಡೆಗೆ 2023-24 ಕೇಂದ್ರ ಬಜೆಟ್ ನಲ್ಲಿ ₹5300 ಕೋಟಿ ಕೊಡುತ್ತೇವೆ ಎಂದಿದ್ದರು. ಅದನ್ನೇ ಇಲ್ಲಿನ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿ ನರೇಂದ್ರ ಮೋದಿಗೆ ಧನ್ಯವಾದಗಳನ್ನು ಅರ್ಪಿಸಿದ್ದರು. ರಾಷ್ಟ್ರೀಯ ಯೋಜನೆಯಾಗಲಿದೆ ಎಂದು ಹೇಳಿದವರು ಇವರೇ, ಆದರೆ ಇನ್ನೂ ಆಗಿಲ್ಲವೆಂದರೆ ಅವರಿಗೆ ಕೋಪ ಏಕೆ? ಇದು ಕನ್ನಡ ಜನರಿಗೆ ಮಾಡುತ್ತಿರುವ ದ್ರೋಹ. ಇದು ಪ್ರಜಾಪ್ರಭುತ್ವದ ವಿರೋಧವಲ್ಲವೇ’ ಎಂದು ಪ್ರಶ್ನಿಸಿದರು.

ರಾಜಕೀಯ ಮಂಜು ಕವಿದಿದೆ

‘ಕೇಂದ್ರ ಹಣಕಾಸು ಸಚಿವೆ ಹಾಗೂ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್ ಬಾಷಣದ ಭಾಗವನ್ನು ಓದಿ ಹೇಳಿದ ಮುಖ್ಯಮಂತ್ರಿಗಳು, ಪ್ಲಕಾರ್ಡ್ ಹಿಡಿದು ಬಂದರೆ ಕರ್ನಾಟಕದ ಜನರಿಗೆ ಮಾಡುವ ದ್ರೋಹ ಎಂದರು. ಇದು ಪ್ರಜಾಪ್ರಭುತ್ವ ವಿರೋಧಿ ಅಲ್ಲವೇ ? ನಾನು ಈ ವರ್ಷ ಗ್ಯಾರಂಟಿಗಳಿಗೆ ₹36000 ಕೋಟಿ ಕೊಟ್ಟಿಲ್ಲ ಎಂದು ಸಾಬೀತು ಪಡಿಸಲಿ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಿಲ್ಲ ಎಂದು ಸಾಬೀತು ಮಾಡಲಿ; ಚರ್ಚೆ ಮಾಡಬಹುದಿತ್ತು. ಅದಕ್ಕೆ ಇವರ ತಲೆಯಲ್ಲಿ ಏನೂ ಇಲ್ಲ, ರಾಜಕೀಯ ಮಂಜು ಕವಿದಿದೆ. ಕನ್ನಡಿಗರ ಜನದ್ರೋಹದ ಕೆಲಸ ಮಾಡಿದ್ದಾರೆ’ ಎಂದರು.

‘ಸಾಲ ಮಾಡಿರುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ನಾನು ಸ್ವಾತಂತ್ರ್ಯ ಬಂದಾಗಿನಿಂದ ಹಣಕಾಸಿನ ಮಂತ್ರಿಯಾಗಿರುವವರೆಗೆ ಈ ರಾಜ್ಯದ ಮೇಲೆ ₹2,46,000 ಕೋಟಿ ಸಾಲವಿದ್ದು, ನಾನು ಮಾಡಿರುವದು 1.12 ಲಕ್ಷ ಕೋಟಿ ರೂ.ಗಳು ಮಾತ್ರ. ಇವರ ಬಜೆಟ್ ನಲ್ಲಿ ಕಳೆದ ವರ್ಷ 80 ಸಾವಿರ ಕೋಟಿ ರೂ.ಗಳ ಸಾಲ ಮಾಡಿದ್ದಾರೆ’ ಎಂದು ವಿವರಿಸಿದರು.

ಇದನ್ನೂ ಓದಿ; ಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...