Homeಮುಖಪುಟವಿಶ್ವಾಸಮತ ಗೆದ್ದ ಅರವಿಂದ್ ಕೇಜ್ರಿವಾಲ್ : ಬಿಜೆಪಿ ವಿರುದ್ಧ ವಾಗ್ದಾಳಿ

ವಿಶ್ವಾಸಮತ ಗೆದ್ದ ಅರವಿಂದ್ ಕೇಜ್ರಿವಾಲ್ : ಬಿಜೆಪಿ ವಿರುದ್ಧ ವಾಗ್ದಾಳಿ

- Advertisement -
- Advertisement -

ದೆಹಲಿ ವಿಧಾನಸಭೆಯ ಬಜೆಟ್‌ ಅಧಿವೇಶನದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಗೆದ್ದಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಹುಮತ ಸಾಬೀತುಪಡಿಸಿದ್ದಾರೆ.

ಒಟ್ಟು 62 ಎಎಪಿ ಶಾಸಕರ ಪೈಕಿ 54 ಮಂದಿ ವಿಶ್ವಾಸ ಮತಯಾಚನೆ ವೇಳೆ ಹಾಜರಿದ್ದರು. ಎಲ್ಲರೂ ಮುಖ್ಯಮಂತ್ರಿ ಪರ ಮತ ಚಲಾಯಿಸಿದ್ದಾರೆ. “ನಮ್ಮ ಯಾವುದೇ ಶಾಸಕ ಪಕ್ಷಾಂತರ ಮಾಡಿಲ್ಲ. ಇಬ್ಬರು ಶಾಸಕರು ಜೈಲಿನಲ್ಲಿದ್ದಾರೆ, ಕೆಲವರಿಗೆ ಅನಾರೋಗ್ಯವಿದೆ, ಇನ್ನೂ ಕೆಲವರು ಹೊರಗಿದ್ದಾರೆ” ಎಂದು ವಿಶ್ವಾಸಮತ ಗೆದ್ದ ಬಳಿಕ ಕೇಜ್ರಿವಾಲ್ ಹೇಳಿದ್ದಾರೆ.

“ನಮ್ಮ ಸರ್ಕಾರಕ್ಕೆ ಬಹುಮತವಿತ್ತು. ಆದರೆ, ಬಿಜೆಪಿ ಕೆಲ ಶಾಸಕರಿಗೆ ಆಮಿಷವೊಡ್ಡಿ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದೆ. ಈ ಕಾರಣಕ್ಕೆ ವಿಶ್ವಾಸಮತ ಯಾಚನೆಯ ಅಗತ್ಯ ಬಂತು” ಎಂದಿದ್ದಾರೆ.

“ನಮ್ಮ ಕೆಲ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಕ್ಷಾಂತರ ಮಾಡಲು ಹಣದ ಆಮಿಷವೊಡ್ಡಿದ್ದಾರೆ. ಸುಮಾರು ಏಳು ಮಂದಿ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಆಫರ್ ನೀಡಲಾಗಿದೆ. ನನ್ನನ್ನು ಬಂಧಿಸುವ ಮೂಲಕ ಸರ್ಕಾರವನ್ನು ಉರುಳಿಸಬಹುದು ಎಂದು ಬಿಜೆಪಿ ತಂತ್ರ ಹೂಡುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ನೀವು ನನ್ನನ್ನು ಬಂಧಿಸಬಹುದು. ಆದರೆ, ನನ್ನ ಆಲೋಚನೆಗಳನ್ನು ಹೇಗೆ ಬಂಧಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಎಎಪಿ ಬಿಜೆಪಿಗೆ ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಅದು ಎಲ್ಲಾ ಕಡೆಯಿಂದ ದಾಳಿಗೆ ಒಳಗಾಗುತ್ತಿದೆ. ನಮ್ಮ ಮಂತ್ರಿಗಳನ್ನು ಬಂಧಿಸಿದ್ದಾರೆ. ದೇಶದಾದ್ಯಂತ ಜನರಿಗೆ ಇದರ ಅರಿವಿದೆ. ಜನರು ಮೂರ್ಖರು ಎಂದು ಅವರು ಭಾವಿಸಿದ್ದಾರೆ. ಆದರೆ, ಅದು ಅವರ ತಪ್ಪು ಕಲ್ಪನೆ. ಮೋದಿ ಅವರು ಅರವಿಂದ್ ಕೇಜ್ರಿವಾಲ್‌ ಅನ್ನು ಹತ್ತಿಕಲು ಯತ್ನಿಸುತ್ತಿದ್ದಾರೆ ಎಂದು ಇತ್ತೀಚೆಗೆ ಪಾರ್ಕ್‌, ಗ್ರೌಂಡ್‌ಗಳಲ್ಲಿಯೂ ಚರ್ಚೆ ನಡೆಯುತ್ತಿದೆ. ಮಕ್ಕಳು ಕೂಡ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಗರು ತಮ್ಮನ್ನು ತಾವು ರಾಮಭಕ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ, ನಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಔಷಧಿ ಸರಬರಾಜು ನಿಲ್ಲಿಸಿದ್ದಾರೆ. ಬಡವರಿಗಾಗಿ ಇರುವ ಔಷಧಿಗಳನ್ನು ತಡೆಯುವಂತೆ ಭಗವಾನ್ ರಾಮ ನಿಮ್ಮತ್ರ ಹೇಳಿದ್ದಾನಾ? ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ. 2029ರ ಒಳಗೆ ದೇಶವನ್ನು ಬಿಜೆಪಿ ಮುಕ್ತ ಮಾಡುವುದಾಗಿ ಶಪಥ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಇಂದು (ಫೆ.17) ಬೆಳಿಗ್ಗೆ ರೂಸ್ ಅವೆನ್ಯೂ ಕೋರ್ಟ್‌ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಮಧ್ಯಾಹ್ನದ ಬಳಿಕ ವಿಶ್ವಾಸಮತ ಗೆದ್ದಿದ್ದಾರೆ. ಈ ಮೂಲಕ ನಮ್ಮ ಸರ್ಕಾರ ಸುಭದ್ರವಾಗಿದೆ. ಎಲ್ಲಾ ಶಾಸಕರು ಜೊತೆಗಿದ್ದಾರೆ ಎಂಬ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ ನಕುಲ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...