Homeಮುಖಪುಟಬಿಜೆಪಿಯ ಅನ್ವರ್ಥನಾಮ 'ಸುಳ್ಳಿನ ಪಕ್ಷ'; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಳವಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ನಂತರ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು .

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನವರು ಏನೇ ಆಮಿಷಗಳನ್ನು ತೋರಿಸಿದರೂ ಕೂಡ ಅದಕ್ಕೆ ಮಣಿಯದೇ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಮಳವಳ್ಳಿಯಲ್ಲಿ ನೀಡಿದ್ದ ಭಾರವಸೆಯಂತೆ ₹470 ಕೋಟಿಗಳ ಅಂದಾಜು ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಕಳೆದ ಚುನಾವಣೆಯಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಗಳನ್ನು ಎಂಟು ತಿಂಗಳಲ್ಲಿ ಜಾರಿ ಮಾಡಿ ಭರವಸೆ ಈಡೇರಿಸಿದ್ದೇವೆ. ಬಿಜೆಪಿ, ಜೆಡಿಎಸ್‌ನಂತೆ ನಾವು ಮಾತಿಗೆ ತಪ್ಪುವವರಲ್ಲ. ಬಿಜೆಪಿ, ಜೆಡಿಎಸ್ ಈಗ ಒಂದಾಗಿದ್ದಾರೆ. ಆದರೆ, ಹಿಂದೊಮ್ಮೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನ ನಾಗಿ ಹುಟ್ಟು ತ್ತೇನೆ ಎಂದಿದ್ದರು. ಈಗ ಕೋಮುವಾದಿ ಬಿಜೆಪಿಯವರ ಜೊತೆಗೆ ಸೇರಿದ್ದಾರೆ. ಈಗ ನಾನೇ ಮಗನನ್ನು ಬಿಜೆಪಿಗೆ ಕಳುಹಿಸಿದೆ ಎನ್ನುತ್ತಾರೆ. ನಿಮ್ಮ ಜನತಾದಳ ಜಾತ್ಯತೀತದಲ್ಲಿ ಜಾತ್ಯತೀತ ಎನ್ನುವ ಪದ ತೆಗೆಯಿರಿ. ಅದನ್ನು ಮುಂದುವರಿಸಲು ನಿಮಗೆ ಯಾವುದೇ ನೈತಿಕತೆ ಇಲ್ಲ ಎಂದರು.

20 ಸ್ಥಾನಗಳನ್ನು ಗೆಲ್ಲಲಿದೆ

ಬಿಜೆಪಿ ಢೋಂಗಿತನದ ಮಾತುಗಳನ್ನು ಆಡುತ್ತಾರೆ. 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ. ನೀವು ಆಶೀರ್ವಾದ ಮಾಡುತ್ತೀರಿ ಎಂದು ನಂಬಿಕೆ ಇದೆ ಎಂದರು.

ಶಕ್ತಿ ಯೋಜನೆ: 155 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ

ಜೂನ್ 11 ರಿಂದ ಈವರೆಗೆ ಶಕ್ತಿ ಯೋಜನೆಯಡಿ 155 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಪ್ರತಿದಿನ 60 ಲಕ್ಷ ಮಹಿಳೆಯರು ಓಡಾಡುತ್ತಿದ್ದಾರೆ ಎಂದು ವಿವರಿಸಿದರು.

ಬಡವರಿಗೆ ಕೇಂದ್ರ ಅಕ್ಕಿ ಕೊಡಲಿಲ್ಲ

ಜನರು ಹಸಿದು ಮಲಗಬಾರದು, ರಾಜ್ಯ ಹಸಿವುಮುಕ್ತವಾಗಬೇಕೆಂದು ಅನ್ನಭಾಗ್ಯ ಜಾರಿ ಮಾಡಲಾಯಿತು. ಬಡವರಿಗೆ ಅಕ್ಕಿ ನೀಡದ ಕೇಂದ್ರದ ಬಿಜೆಪಿ ಪಕ್ಷಕ್ಕೆ ಜನರು ಮತ ಹಾಕಬಾರದು. ಗ್ಯಾರಂಟಿ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ನಾನು ಮಂಡಿಸಿದ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ರೂ.ಗಳನ್ನು ಇಡಲಾಗಿದೆ. 8 ತಿಂಗಳ ಅವಧಿಯಲ್ಲಿ ಎಲ್ಲ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಿದೆ ಎಂದರು

ಜಾತ್ಯಾತೀತ ಜೆಡಿಎಸ್ ಜಾತಿವಾದಿಗಳ ಜೊತೆ ಮೈತ್ರಿ

ಜೆಡಿಎಸ್ ಪಕ್ಷದವರು ತಮ್ಮ ಪಕ್ಷ ಸೋಲುತ್ತದೆ ಎಂಬ ಕಾರಣಕ್ಕೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಜಾತ್ಯಾತೀತ ಪಕ್ಷ ಎಂದು ಹೇಳಿಕೊಂಡ ಜೆಡಿಎಸ್ ಅವರು ಜಾತಿವಾದಿಗಳ ಜೊತೆ ಸೇರಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮತ್ತೊಮ್ಮೆ ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಎಂಬ ವಿಶ್ವಾಸವಿದೆ. 2013-18 ರವರೆಗಿನ ನಮ್ಮ ಅವಧಿಯಲ್ಲಿ ಹೆಚ್ಚಿನ ಭರವಸೆಗಳನ್ನು ಈಡೇರಿಸಿದ್ದೆವು. ಬಿಜೆಪಿ ಹಾಗೂ ಜೆಡಿಎಸ್ ನಂತೆ ಸುಳ್ಳು ಹೇಳದೆ, ಕಾಂಗ್ರೆಸ್ ಪಕ್ಷ ಜನರಿಗಾಗಿ ಕೈಗೊಂಡಿರುವ ಕಾರ್ಯಕ್ರಮದ ಸತ್ಯದ ಆಧಾರದ ಮೇಲೆ ಮತ ಕೇಳಿ ಎಂದು ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದರು.

ಬಿಜೆಪಿ ಅನ್ವರ್ಥನಾಮ ‘ಸುಳ್ಳಿನ ಪಕ್ಷ’

ರಾಜ್ಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕೊಡುಗೆ ಏನು? ಆದರೆ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ಜನರ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆ. ಬಿಜೆಪಿಯ ಅನ್ವರ್ಥ ನಾಮವೆಂದರೆ ಸುಳ್ಳಿನ ಪಕ್ಷ. ಸ್ವತಂತ್ರ ಭಾರತದಲ್ಲಿ ಪ್ರಧಾನಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಮತ್ತೊಬ್ಬರಿಲ್ಲ. 15 ಲಕ್ಷ ದೇಶದ ಜನರ ಖಾತೆಗೆ ಹಾಕುವ , ರೈತರ ಆದಾಯ ದುಪ್ಪಟ್ಟು, 7 ಕೋಟಿ ಉದ್ಯೋಗ ಸೃಷ್ಟಿಸುವ ಸುಳ್ಳು ಭರವಸೆಯನ್ನು ನೀಡಿ, ಈಡೇರಿಸಲಿಲ್ಲ ಎಂದರು.

ಇದನ್ನೂ ಓದಿ; ದೆಹಲಿ ಚಲೋ ಮೆರವಣಿಗೆ: ಫೆ.24 ರವರೆಗೆ ಇಂಟರ್‌ನೆಟ್ ಸೇವೆಗಳ ಸ್ಥಗಿತ ವಿಸ್ತರಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...