Homeಮುಖಪುಟ2018ರ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

2018ರ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

- Advertisement -
- Advertisement -

2018ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ವಕೀಲ ಸಂತೋಷ್ ಪಾಂಡೆ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ್ದು, ರಾಹುಲ್ ಗಾಂಧಿ ಇಂದು ನ್ಯಾಯಾಲಯಕ್ಕೆ ಶರಣಾದರು ಮತ್ತು ನ್ಯಾಯಾಲಯವು ಅವರನ್ನು 30-45 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದೆ. ಬಳಿಕ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಜಾಮೀನನ್ನು ನೀಡಲಾಗಿದೆ. ಈ ಕುರಿತು ಮುಂದಿನ ವಿಚಾರಣೆಯ ದಿನಾಂಕವನ್ನು ಇನ್ನೂ ನೀಡಲಾಗಿಲ್ಲ. ತಲಾ 25,000 ರೂಪಾಯಿಗಳ ಎರಡು ಜಾಮೀನು ಬಾಂಡ್‌ಗಳನ್ನು ಸಲ್ಲಿಸುವಂತೆ ನ್ಯಾಯಾಲಯ ರಾಹುಲ್‌ಗೆ ಸೂಚಿಸಿದೆ.

ಆಗಸ್ಟ್ 4, 2018ರಂದು ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. ಮೇ 8, 2018 ರಂದು ಕರ್ನಾಟಕದಲ್ಲಿನ ಚುನಾವಣೆಯ ವೇಳೆ ಬೆಂಗಳೂರಿನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಬಿಜೆಪಿಯು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದ ಬದ್ಧತೆ ಬಗ್ಗೆ ಪ್ರತಿಪಾದಿಸಿದರೂ ಅದನ್ನು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಕ್ಷದ ಅಧ್ಯಕ್ಷ ಮುನ್ನಡೆಸುತ್ತಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇಳಿರುವ ಹೇಳಿಕೆಯನ್ನು ದೂರುದಾರರು ಉಲ್ಲೇಖಿಸಿದ್ದಾರೆ. ರಾಹುಲ್‌ ಗಾಂಧಿ ಹೇಳಿಕೆಯ ಸಮಯದಲ್ಲಿ ಅಮಿತ್ ಶಾ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ರಾಹುಲ್‌ ಗಾಂಧಿಯವರ ಹೇಳಿಕೆಗೆ ಸರಿಸುಮಾರು ನಾಲ್ಕು ವರ್ಷಗಳ ಮೊದಲು, ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಶಾ ಅವರನ್ನು ಆರೋಪ ಮುಕ್ತಗೊಳಿಸಿತ್ತು. ಅಮಿತ್‌ ಶಾ ಗುಜರಾತ್‌ನಲ್ಲಿ ಗೃಹ ಸಚಿವರಾಗಿದ್ದ ಅವಧಿಯಲ್ಲಿ ಈ ಬೆಳವಣಿಗೆ ನಡೆದಿತ್ತು.

ಭಾರತ್ ಜೋಡೋ ನ್ಯಾಯ ಯಾತ್ರೆಯ ಹಿನ್ನೆಲೆ ಜನವರಿ 18ರಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ  ವಿಚಾರಣೆಗೆ ರಾಹುಲ್‌ ಗಾಂಧಿ ಹಾಜರಾಗಿರಲಿಲ್ಲ. ಇಂದು ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು.

ಈ ಕುರಿತು ದೂರುದಾರ ವಿಜಯ್ ಮಿಶ್ರಾ ಮಾತನಾಡಿದ್ದು, ಬಿಜೆಪಿ ದೇಶದ ಅತಿದೊಡ್ಡ ಪಕ್ಷವಾಗಿದೆ, ಅದರ ಅಂದಿನ ಅಧ್ಯಕ್ಷರನ್ನು ಕೊಲೆಗಾರ ಎಂದು ಕರೆಯುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಈ ಮೊದಲು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್ ಗಾಂಧಿ, ಆಗಸ್ಟ್ 2018ರಲ್ಲಿ ಬಿಜೆಪಿ ನಾಯಕರೊಬ್ಬರು ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ 36 ಗಂಟೆ ಮೊದಲು ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದ್ದು, ಇಂದು ಅವರು ಸುಲ್ತಾನ್‌ಪುರ್‌ನಲ್ಲಿನ ಜಿಲ್ಲಾ ಸಿವಿಲ್ ನ್ಯಾಯಾಲಯದೆದುರು ಹಾಜರಾಗಲಿದ್ದಾರೆ. ಭಾರತ್ ಜೋಡೊ ನ್ಯಾಯ ಯಾತ್ರೆಯ ಹಳಿ ತಪ್ಪಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯನ್ನು ಮೌನವಾಗಿಸಲು ಸಾಧ್ಯವಿಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದರು.

ಇದನ್ನು ಓದಿ: ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...