Homeಫ್ಯಾಕ್ಟ್‌ಚೆಕ್Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು...

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

“ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ” ಎಂದು ‘Sanju Appannavara’ಎಂಬ ಫೇಸ್‌ಬುಕ್ ಖಾತೆಯೊಂದರಲ್ಲಿ ಫೆ.16,2024ರಂದು ರಾತ್ರಿ 9 ಗಂಟೆ 58 ನಿಮಿಷಕ್ಕೆ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿಯವರು ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್ ಮೂಲಕ ಈ ವಿಡಿಯೋವನ್ನು ನಾವು ಹುಡುಕಾಡಿದಾಗ, ಇದು ಫೆ.13,2024ರಂದು ಚತ್ತೀಸ್‌ಗಢದ ಕೊರ್ಬಾದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಭಾಗವಾಗಿ ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾಡಿರುವ ಭಾಷಣದ ತುಣುಕು ಎಂದು ತಿಳಿದು ಬಂದಿದೆ.

ದಲಿತರು, ಆದಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ” ದೇಶದ ದೊಡ್ಡ ದೊಡ್ಡ ಸಂಸ್ಥೆಗಳು ಯಾವುದೂ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಮಾಲೀಕತ್ವದಲ್ಲಿ ಇಲ್ಲ. ಅಪೋಲೋ, ವೇದಾಂತ, ಮ್ಯಾಕ್ಸ್‌ನಂತ ಯಾವುದೇ ಸಂಸ್ಥೆಗಳ ಮಾಲೀಕರು ದಲಿತರು, ಆದಿವಾಸಿಗಳಲ್ಲ. ಕರ್ನಾಟಕದ ಪ್ರಸಿದ್ಧ ಖಾಸಗಿ ವಿಶ್ವವಿದ್ಯಾನಿಲಯ ಮಣಿಪಾಲ್‌ನಲ್ಲಿ ಓದುತ್ತಿರುವರನ್ನು ನೋಡಿದರೆ ಒಬ್ಬರೂ ದಲಿತರು ಸಿಗುವುದಿಲ್ಲ. ಈ ಕುರಿತು ನೀವು ಯಾಕೆ ನೀವು ಚಿಂತಿಸುತ್ತಿಲ್ಲ ಎಂದೇ ನನಗೆ ಅರ್ಥವಾಗುತ್ತಿಲ್ಲ. ನೀವು ಮಲಗಿದ್ದೀರಿ. ದಿನದ ಇಪ್ಪತ್ತನಾಲ್ಕು ಗಂಟೆ ಜೈ ಶ್ರೀ ರಾಮ್ ಜೈ ಶ್ರೀರಾಮ್ ಎಂದು ಹೇಳುತ್ತಿದ್ದೀರಿ. ನೀವು ಹೇಳಿ ನನಗೆ ತೊಂದರೆ ಇಲ್ಲ. ಆದರೆ, ನಿಮ್ಮ ಜೇಬಿನಿಂದ ಹಣ ಕೀಳುತ್ತಿದ್ದಾರೆ ಅದನ್ನು ಯೋಚಿಸಿ” ಎಂದಿದ್ದಾರೆ.

ಒಬಿಸಿ, ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಧರ್ಮವನ್ನು ಮುಂದಿಟ್ಟು ಯಾವ ರೀತಿ ಮರೆಗೆ ಸರಿಲಾಗ್ತಿದೆ. ಹಿಂದುಳಿದ ವರ್ಗದ ಜನರು ಧರ್ಮದ ಅಮಲಿನಲ್ಲಿ ತಮ್ಮ ಅವಕಾಶಗಳನ್ನು ಯಾವ ರೀತಿ ಕಳೆದುಕೊಳ್ಳುತ್ತಿದ್ದಾರೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಸಂಪೂರ್ಣ ಭಾಷಣದ ವಿಡಿಯೋ ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ.


ಯೂಟ್ಯೂಬ್ ವಿಡಿಯೋ ಲಿಂಕ್ 

ಅಧಿಕೃತ ಮೂಲಗಳ ಮೂಲಕ ನಾವು ನಡೆಸಿದ ಪರಿಶೀಲನೆಯಲ್ಲಿ “ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ರೀತಿಯಲ್ಲಿ ಹಂಚಿಕೊಳ್ಳಲಾಗ್ತಿದೆ. ಅಲ್ಲದೆ, ರಾಹುಲ್ ಗಾಂಧಿ ‘ಜೈ ಶ್ರೀರಾಮ್ ಜೈ ಶ್ರಿರಾಮ್’ ಎಂದು ಹೇಳುತ್ತಿದ್ದೀರಿ ಎಂದಿರುವುದು ತಮ್ಮ ಅವಕಾಶಗಳನ್ನು ಮತ್ತು ಹಕ್ಕುಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಿರುವ ಜನರಿಗೆ ಎಂಬುವುದು ಖಚಿತವಾಗಿದೆ.

ಇಲ್ಲಿ ‘ಹಿಂದೂಗಳು ಸದಾ ಜೈಶ್ರೀರಾಮ್ ಜೈ ಶ್ರೀರಾಮ್’ ಎಂದು ಹೇಳುತ್ತಿರುತ್ತಾರೆ’ ಎಂದು ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿಲ್ಲ. ಬದಲಾಗಿ, ತಮ್ಮ ಅವಕಾಶಗಳನ್ನು ಮರೆತು ಅಥವಾ ನಿಜವಾದ ಸಮಸ್ಯೆಗಳನ್ನು ಮರೆತು ಧರ್ಮದ ಅಮಲಿನಲ್ಲಿ ಮುಳುಗಬೇಡಿ, ನಿಮ್ಮ ಅವಕಾಶ ಇನ್ನೊಬ್ಬರ ಪಾಲಾಗುತ್ತಿದೆ ಎಚ್ಚೆತ್ತುಕೊಳ್ಳಿ ಎಂದು ದಲಿತರು ಮತ್ತು ಆದಿವಾಸಿಗಳಿಗೆ ಹೇಳಿರುವುದಾಗಿದೆ.

ಇದನ್ನೂ ಓದಿ: Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...