ಹಿಂದಿನ ವರ್ಷಗಳ ತೆರಿಗೆ ಪಾವತಿಗೆ ಸಂಬಂಧಿಸಿದ ಪ್ರಕರಣವು ವಿಚಾರಣೆ ಹಂತದಲ್ಲಿರುವಾಗಲೇ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳಿಂದ ₹65 ಕೋಟಿ ಕಡಿತಗೊಳಿಸುವಂತೆ ಬ್ಯಾಂಕ್‌ಗಳಿಗೆ ಪತ್ರ ಬರೆದಿರುವ ಆದಾಯ ತೆರಿಗೆ (ಐಟಿ) ಇಲಾಖೆಯ ಕ್ರಮ ಪ್ರಜಾಸತ್ತಾತ್ಮಕವಾಗಿ ಸರಿಯಲ್ಲ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.
ತೆರಿಗೆ ಪಾವತಿ ವಿಳಂಬದ ಕಾರಣ ನೀಡಿ ಕಳೆದ ಶುಕ್ರವಾರ ಕಾಂಗ್ರೆಸ್ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಐಟಿ ಇಲಾಖೆಯ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿತ್ತು. ಪ್ರಾಧಿಕಾರವು ಮುಂದಿನ ವಿಚಾರಣೆಯವರೆಗೆ ಬ್ಯಾಂಕ್ ಖಾತೆ ಬಳಸಲು ಕಾಂಗ್ರೆಸ್‌ಗೆ ಅನುವು ಮಾಡಿಕೊಟ್ಟಿತ್ತು. ಇದರಿಂದ ಪಕ್ಷ ತಾತ್ಕಾಲಿಕ ನಿರಾಳವಾಗಿತ್ತು.
“ತನಿಖಾ ಸಂಸ್ಥೆಗಳ ಕ್ರಮ ಅನಿಯಂತ್ರಿವಾದರೆ ಪ್ರಜಾಪ್ರಭುತ್ವ ಕೊನೆಗೊಳ್ಳಲಿದೆ. ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ” ಎಂದು ಕಾಂಗ್ರೆಸ್ ಕೋಶಾಧಿಕಾರಿ (ಖಜಾಂಚಿ) ಅಜಯ್ ಮಾಕೆನ್ ಹೇಳಿದ್ದಾರೆ.
“ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಪ್ರಕರಣ ಮೇಲ್ಮನವಿ ಪ್ರಾಧಿಕಾರದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ
ಕಾಂಗ್ರೆಸ್ ಮತ್ತು ಭಾರತೀಯ ಯುವ ಕಾಂಗ್ರೆಸ್‌ನ ವಿವಿಧ ಬ್ಯಾಂಕ್ ಖಾತೆಗಳಿಂದ ₹65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆ ವಿವಿಧ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ” ಎಂದು ಮಾಕನ್ ಹೇಳಿದ್ದಾರೆ.
Yesterday, the Income Tax Department mandated banks to transfer over ₹65 crores from @INCIndia, IYC, and NSUI accounts to the government—₹5 crores from IYC and NSUI, and ₹60.25 crores from INC, marking a concerning move by the BJP Government.
Is it common for National… pic.twitter.com/eiObPTtO1D
— Ajay Maken (@ajaymaken) February 21, 2024
“ಕಾಂಗ್ರೆಸ್‌ನ ಆದಾಯ ತೆರಿಗೆಯಲ್ಲಿ ವ್ಯತ್ಯಾಸಗಳು ಕಂಡುಬಂದಿವೆ ಎಂದಿದ್ದ ಆದಾಯ ತೆರಿಗೆ ಇಲಾಖೆಯು ₹210 ಕೋಟಿ ವಸೂಲು ಮಾಡಲು ಮುಂದಾಗಿತ್ತು. ಈ ಕುರಿತು ಮೇಲ್ಮನವಿ ಪ್ರಾಧಿಕಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಕ್ಕೆ ಪ್ರಾಧಿಕಾರವು ತಡೆ ನೀಡಿದೆ. ಹೀಗಿದ್ದರೂ, ಪಕ್ಷದ ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಳಿಸಲು ಮುಂದಾಗಿರುವುದು ಪ್ರಜಾಸತ್ತಾತ್ಮಕವಾದ ನಡೆಯಲ್ಲ” ಎಂದಿದ್ದಾರೆ.
ಆದಾಯ ತೆರಿಗೆ ಇಲಾಖೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ಗಳಿಗೆ ಪತ್ರ ಬರೆದಿರುವ ಅಜಯ್ ಮಾಕನ್ ಪ್ರಕರಣ ಐಟಿ ಮೇಲ್ಮನವಿ ಪ್ರಾಧಿಕಾರದಲ್ಲಿ ಇರುವುದರಿಂದ ಹಣವನ್ನು ಯಾವುದೇ ಕಾರಣಕ್ಕೂ ತೆಗೆಯದಂತೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
“ಆತಂಕಕಾರಿ ಬೆಳವಣಿಗೆ, ಕೇಂದ್ರ ಸರ್ಕಾರದ ಏಜೆನ್ಸಿಗಳ ಕ್ರಮಗಳ ಬಗ್ಗೆ ಕಳವಳ ಹೆಚ್ಚುತ್ತಿದೆ. ಭಾರತದಲ್ಲಿ ಬಹು ಪಕ್ಷ ವ್ಯವಸ್ಥೆಗೆ ಸಂಭಾವ್ಯ ಅಪಾಯವಿದೆ. ಇದನ್ನು ತಡೆಯದಿದ್ದರೆ, ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳಲಿದೆ. ನ್ಯಾಯಾಂಗದ ಮಧ್ಯಪ್ರವೇಶ ಇಲ್ಲವಾದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳೇ ನಾಶವಾಗಲಿವೆ” ಎಂದು ಮಾಕನ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
Alarming Update:
Concerns rise over the actions of Central Government agencies, potentially threatening the multi-party system in India.If unchecked, democracy in India- will be over.
Without intervention of judiciary, our democratic principles will be endangered.
Stay tuned…
— Ajay Maken (@ajaymaken) February 21, 2024
ಇದನ್ನೂ ಓದಿ: ಸಾಮೂಹಿಕ ಆಧಾರ್ ನಿಷ್ಕ್ರಿಯ; ಪ್ರಧಾನಿ ಮೋದಿಗೆ ಪತ್ರ ಬರೆದ ಪಶ್ಚಿಮ ಬಂಗಾಳ ಸಿಎಂ


