Homeಕರ್ನಾಟಕಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಯುಪಿಎ ಸರ್ಕಾರದ ಬಗ್ಗೆ ಮೋದಿ ಅವರು ಹಿಂದೆ ಹೇಳಿದ್ದ ಮಾತನ್ನು ಉಲ್ಲೇಖಿಸಿ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಅಪಾಯ’ ಎಂದು ತಿರುಗೇಟು ನೀಡಿದರು.

ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ.50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ.12 ರಷ್ಟು ವಾಪಾಸ್ ಕೊಡುತ್ತಿದ್ದಾರೆ. ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ  ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

‘ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ.50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ, ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ. 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು’ ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

‘ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ’ ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.

‘ಕೇಂದ್ರದಿಂದ ರಾಜ್ಯಕ್ಕೆ  ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ₹24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ ₹51000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ ₹30,42,243 ಕೋಟಿ ಇದ್ದರೆ ನಮಗೆ ಬಂದಿದ್ದು ₹31734ಕೋಟಿ. 2021-22 ರಲ್ಲಿ ₹34,83,236 ಕೋಟಿ ಗಾತ್ರದ ಬಜೆಟ್ಟಿನಲ್ಲಿ ರಾಜ್ಯಕ್ಕೆ ₹48589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ ₹4181232 ಕೋಟಿ, ಆಗ ರಾಜ್ಯಕ್ಕೆ ₹53510 ಕೋಟಿ ಮಾತ್ರ ಬಂತು. 2023-24ರಲ್ಲಿ ₹45,03007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು ₹50257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ ₹59785 ಕೋಟಿ ಬರುತ್ತದೆ’ ಎಂದು ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಆರ್ಥಿಕ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

‘ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ, ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದರು. ಅದೇ ಪ್ರಧಾನಿ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ  2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ’ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...