Homeಮುಖಪುಟ'ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ' ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

- Advertisement -
- Advertisement -

ಅಸ್ಸಾಂ ಕ್ಯಾಬಿನೆಟ್ ‘ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯಿದೆ-1935’ನ್ನು  ರದ್ದುಗೊಳಿಸಲು ಅನುಮೋದನೆ ನೀಡಿದೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ  ಮಾಹಿತಿ ನೀಡಿದ್ದು, ಅಸ್ಸಾಂ ಬಿಜೆಪಿ ಸರಕಾರದ ಮುಸ್ಲಿಂ ವಿರೋಧಿ ನಿಲುವುಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ,  ‘ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯಿದೆ-1935’ನ್ನು ರದ್ದುಗೊಳಿಸುವ ಕ್ರಮವು ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಅಸ್ಸಾಂ ಕ್ಯಾಬಿನೆಟ್‌ ‘ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯಿದೆ’ಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಾಯಿದೆಯು ವಧು ಮತ್ತು ವರನ ಕಾನೂನುಬದ್ಧ ವಯಸ್ಸನ್ನು 18 ಮತ್ತು 21 ಆಗದಿದ್ದರೂ ವಿವಾಹ ನೋಂದಣಿಯನ್ನು ಅನುಮತಿಸುವ ನಿಬಂಧನೆಗಳನ್ನು ಒಳಗೊಂಡಿತ್ತು. ಇದೀಗ ಬಾಲ್ಯವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ ಎಂದು ಅಸ್ಸಾಂ ಸಿಎಂ ಹೇಮಂತ್‌ ಬಿಸ್ವಾ ಶರ್ಮಾ ಹೇಳಿದ್ದಾರೆ.

ಈ ಕ್ರಮವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ದೃಷ್ಟಿಯಲ್ಲಿ ತೆಗೆದುಕೊಂಡ ಒಂದು ಹೆಜ್ಜೆಯಾಗಿದೆ ಎಂದು ಅಸ್ಸಾಂ ಸಚಿವ ಜಯಂತ ಮಲ್ಲ ಬರುವಾ ಅವರು ಮಾದ್ಯಮಗಳಿಗೆ ತಿಳಿಸಿದ್ದಾರೆ. ಕಾನೂನು ಪ್ರಸ್ತುತ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ಸ್ವಯಂಪ್ರೇರಿತ ನೋಂದಣಿಯ ಅವಕಾಶವನ್ನು ಒದಗಿಸುತ್ತದೆ. ಕಾನೂನನ್ನು ರದ್ದುಗೊಳಿಸಿದ ನಂತರ ಮುಸ್ಲಿಮರು ಮದುವೆ ಮತ್ತು ವಿಚ್ಛೇದನವನ್ನು ಸುಲಭವಾಗಿ ನೋಂದಾಯಿಸಲು ಸಾಧ್ಯವಾಗುವುದಿಲ್ಲ. ಕಾನೂನನ್ನು ರದ್ದುಗೊಳಿಸಿದ ನಂತರ, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಿಜಿಸ್ಟ್ರಾರ್‌ಗಳ ವ್ಯಾಪ್ತಿಗೆ ಇದು ಬರಲಿದೆ ಎಂದು ಹೇಳಲಾಗಿದೆ. ಎಲ್ಲಾ ವಿವಾಹಗಳನ್ನು ‘ವಿಶೇಷ ವಿವಾಹ ಕಾಯ್ದೆಯಡಿ’ ನೋಂದಾಯಿಸಬೇಕೆಂದು ಅಸ್ಸಾಂ ಸರ್ಕಾರ ಬಯಸುತ್ತದೆ ಎಂದು ಅಸ್ಸಾಂ ಸಚಿವ ಜಯಂತ ಬರುವಾ ಹೇಳಿದ್ದಾರೆ.

ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಮುಖ್ಯಮಂತ್ರಿಯಾದಾಗಿನಿಂದ, ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದು ಅಸ್ಸಾಂನ ಜನರಿಗೆ ಅವರ ಪ್ರಮುಖ ಭರವಸೆಯಾಗಿತ್ತು. ಇದಲ್ಲದೆ ಈ ತಿಂಗಳ ಆರಂಭದಲ್ಲಿ, ರಾಜ್ಯದಲ್ಲಿ ಬಹುಪತ್ನಿತ್ವವನ್ನು ಸರ್ಕಾರ ನಿಷೇಧಿಸುತ್ತದೆ ಎಂದು ಅಸ್ಸಾಂ ಸರಕಾರದ ಮೂಲಗಳು ಹೇಳಿವೆ. ಉತ್ತರಾಖಂಡ ಮತ್ತು ಗುಜರಾತ್ ನಂತರ ಅಸ್ಸಾಂ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಮೂರನೇ ರಾಜ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಉತ್ತರಾಖಂಡ ಸರ್ಕಾರವು ಈ ತಿಂಗಳ ಆರಂಭದಲ್ಲಿ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ಮಸೂದೆಯನ್ನು ಅಂಗೀಕರಿಸಿದೆ. ಮಸೂದೆಯು ಮದುವೆಗಳು, ವಿಚ್ಛೇದನಗಳು ಮತ್ತು ಉತ್ತರಾಧಿಕಾರವನ್ನು ನಿಯಂತ್ರಿಸುವ ಹಲವಾರು ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಸಾಮಾನ್ಯ ನಿಯಮಗಳೊಂದಿಗೆ ಬದಲಾಯಿಸುತ್ತದೆ ಇದು ಎಲ್ಲಾ ಧರ್ಮಗಳ ಜನರಿಗೆ ಸಮಾನವಾಗಿ ಅನ್ವಯಿಸುತ್ತದೆ. ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

ಇದನ್ನು ಓದಿ: ರೈತರ ‘ದೆಹಲಿ ಚಲೋ’ ದೇಶದಾದ್ಯಂತ ವಿಸ್ತರಣೆ? ಟ್ರಾಕ್ಟರ್ ಮೆರವಣಿಗೆ ಘೋಷಣೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...