Homeಕರ್ನಾಟಕಮಾಜಿ ಸಚಿವ ಶ್ರೀರಾಮುಲುಗೆ ಬಂಧನ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

ಮಾಜಿ ಸಚಿವ ಶ್ರೀರಾಮುಲುಗೆ ಬಂಧನ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

- Advertisement -
- Advertisement -

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ನಾಲ್ಕು ಬಾರಿ ಸಮನ್ಸ್‌ ನೀಡಿದ್ದರೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗದ ಮಾಜಿ ಸಚಿವ ಬಿ ಶ್ರೀರಾಮುಲು ಅವರನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್‌, ಮುಂದಿನ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ಆದೇಶದ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕೋರಿ ಬಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ನಡೆಸಿತು.

ಅರ್ಜಿದಾರ ಶ್ರೀರಾಮುಲು ಪರ ವಕೀಲ ಗೌತಮ್‌ ಪ್ರಕರಣದ ಮಾಹಿತಿಯನ್ನು ಪೀಠಕ್ಕೆ ವಿವರಿಸಲು ಮುಂದಾದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿದಾರರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದೆ ಹಾಜರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು.

ವಕೀಲ ಗೌತಮ್‌ ಅವರು, ‘ಇಲ್ಲ’ ಎಂದು ಉತ್ತರಿಸಿದರು. ಆಗ ನ್ಯಾಯಮೂರ್ತಿಗಳು, ವಿಚಾರಣಾಧೀನ ನ್ಯಾಯಾಲಯ ನೋಟಿಸ್ ಅಥವಾ ಸಮನ್ಸ್ ಜಾರಿಗೊಳಿಸಲು ಆದೇಶಿಸಿಲ್ಲವೇ ಎಂದು ಮರು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಗೌತಮ್‌, ಹೌದು ಜಾರಿಗೊಳಿಸಿದೆ. ಆದರೆ, ನಮಗೆ ತಲುಪಿಲ್ಲ ಎಂದರು.

ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರನ್ನು ಉದ್ದೇಶಿಸಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿದಾರರ ವಿರುದ್ಧ ಎಷ್ಟು ಬಾರಿ ಸಮನ್ಸ್ ಹೊರಡಿಸಿದೆ ಎಂದು ನ್ಯಾಯಮೂರ್ತಿಗಳು ಕೇಳಿದರು. ದಾಖಲೆಗಳನ್ನು ಪರಿಶೀಲಿಸಿದ ಜಗದೀಶ್ ಅವರು, ನಾಲ್ಕು ಬಾರಿ ಸಮನ್ಸ್‌ ನೀಡಲಾಗಿದೆ ಎಂದು ಉತ್ತರಿಸಿದರು.

ಇದನ್ನು ಕೇಳಿ ಕೋಪಗೊಂಡ ನ್ಯಾಯಮೂರ್ತಿಗಳು, “ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಂದರೆ‌ ನಿಮಗೆ ಅಷ್ಟೊಂದು ತಮಾಷೆಯಾ? ಮ್ಯಾಜಿಸ್ಟ್ರೇಟ್ ಮುಂದೆ ನಿಂತುಕೊಳ್ಳಲು ನಿಮ್ಮ ಅರ್ಜಿದಾರರಿಗೆ ಯಾವ ಅಂತಸ್ತು ಅಡ್ಡಿಯಾಗಿದೆ? ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಂದರೆ ಏನೆಂದುಕೊಂಡಿದ್ದೀರಿ? ವಿಚಾರಣಾಧೀನ ನ್ಯಾಯಾಲಯ ನಾಲ್ಕು ಬಾರಿ ಸಮನ್ಸ್ ಹೊರಡಿಸಿದ್ದರೂ ಏಕೆ ಹಾಜರಾಗಿಲ್ಲ?” ಎಂದು ಶ್ರೀರಾಮುಲು ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದಿನ ವಿಚಾರಣೆಗೆ ಅರ್ಜಿದಾರ ಶ್ರೀರಾಮುಲು ಖುದ್ದು ಹಾಜರಾಗಬೇಕು. ತಪ್ಪಿದರೆ, ಅವರ ವಿರುದ್ಧ ಬಂಧನ ಆದೇಶ ಹೊರಡಿಸಲಾಗುವುದು ಎಂದು ನ್ಯಾಯಮೂರ್ತಿ ಎಚ್ಚರಿಕೆ ನೀಡಿದರು.

ಪ್ರಕರಣದ ಹಿನ್ನೆಲೆ : ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ 2023ರ ಏಪ್ರಿಲ್‌ 28ರಂದು ಚಿತ್ರದುರ್ಗದ ಚಳ್ಳಕೆರೆ ವಿಧಾನಭಾ ಕ್ಷೇತ್ರದ ತುರವನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಆರ್‌ ಅನಿಲ್‌ ಕುಮಾರ್‌ ಪರ ಶ್ರೀರಾಮುಲು ಚುನಾವಣಾ ಪ್ರಚಾರ ಸಮಾವೇಶ ನಡೆಸಿದ್ದರು. ಈ ಸಂಬಂಧ ಶ್ರೀರಾಮುಲು ವಿರುದ್ಧ ಫ್ಲೈಯಿಂಗ್‌ ಸ್ಕ್ವಾಡ್‌ ತಂಡದ ಅಧಿಕಾರಿಯಾಗಿದ್ದ ಎಂ ತಿಪ್ಪೇಸ್ವಾಮಿ, ಚಿತ್ರದುರ್ಗದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ 2023ರ ಏಪ್ರಿಲ್‌ 29ರಂದು ಖಾಸಗಿ ದೂರು ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ 2023ರ ಮೇ 5ರಂದು ಶ್ರೀರಾಮುಲುಗೆ ಸಮನ್ಸ್‌ ಜಾರಿಗೊಳಿಸಿತ್ತು. ಇದರ ವಿರುದ್ಧ ಶ್ರೀರಾಮುಲು ಹೈಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...