HomeಮುಖಪುಟExplained: ಭಾರತೀಯ ವಿದ್ಯಾರ್ಥಿನಿಯ ಕೊಂದ ಯುಎಸ್ ಅಧಿಕಾರಿ ವಿರುದ್ಧ ಕ್ರಮ ಯಾಕಿಲ್ಲ?

Explained: ಭಾರತೀಯ ವಿದ್ಯಾರ್ಥಿನಿಯ ಕೊಂದ ಯುಎಸ್ ಅಧಿಕಾರಿ ವಿರುದ್ಧ ಕ್ರಮ ಯಾಕಿಲ್ಲ?

- Advertisement -
- Advertisement -

ಯುಎಸ್‌ನ ವಾಷಿಂಗ್ಟನ್‌ ರಾಜ್ಯದಲ್ಲಿ ಸಂಭವಿಸಿದ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಆದೋನಿಯ 23 ವರ್ಷದ ವಿದ್ಯಾರ್ಥಿನಿ ಜಾಹ್ನವಿ ಕಂಡುಲಾ ಅವರ ಸಾವು ಪ್ರಕರಣ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದೆ. ಅಪಘಾತದಲ್ಲಿ ಜಾಹ್ನವಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಕಾರಣನಾದ ಪೊಲೀಸ್ ಅಧಿಕಾರಿಯ ವಿರುದ್ದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಜನವರಿ 23,2023ರಂದು ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ರಸ್ತೆ ದಾಟುತ್ತಿದ್ದ ಜಾಹ್ನವಿ ಕಂಡುಲಾ ಮೇಲೆ ಕೆವಿನ್‌ ಡೇವ್‌ ಎಂಬ ಪೊಲೀಸ್ ಅಧಿಕಾರಿ ವಾಹನ ಹರಿಸಿ ಸಾವಿಗೆ ಕಾರಣನಾಗಿದ್ದ. ತುರ್ತು ಕರೆಯೊಂದರ ಹಿನ್ನೆಲೆಯಲ್ಲಿ ಸ್ಥಳವೊಂದಕ್ಕೆ ತೆರಳಲು 120 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದ ಕೆವಿನ್ ಡೇವ್ ಜಾಹ್ನವಿ ಮೇಲೆ ವಾಹನ ಹರಿಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಡೇವ್ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಾಷಿಂಗ್ಟನ್‌ನ ಕಿಂಗ್‌ ಕೌಂಟಿ ಪ್ರಾಸಿಕ್ಯೂಟರ್‌ ಅವರ ಕಚೇರಿ ಹೇಳಿದೆ.

“ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಜನವರಿ 2023ರಲ್ಲಿ ವಿದ್ಯಾರ್ಥಿನಿ ಜಾಹ್ನವಿ ಕಂಡುಲಾ ಅವರ ಮೇಲೆ ವಾಹನ ಹರಿಸಿ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಲಭ್ಯವಿರುವ ಎಲ್ಲಾ
ಸಾಕ್ಷ್ಯಗಳನ್ನು ಪರಿಶೀಲಿಸುವುದು ಕಿಂಗ್ ಕೌಂಟಿ ಪ್ರಾಸಿಕ್ಯೂಟಿಂಗ್ ಅಟಾರ್ನಿ ಕಚೇರಿಯ ಜವಾಬ್ದಾರಿಯಾಗಿದೆ. ನಾವು ಹಿರಿಯ ಉಪ ಪ್ರಾಸಿಕ್ಯೂಟಿಂಗ್ ವಕೀಲರು ಮತ್ತು ಇತರ ಅಧಿಕಾರಿಗಳ ಮೂಲಕ ಪ್ರಕರಣದ ತನಿಖೆ ನಡೆಸಿದ್ದೇವೆ. ಈ ವೇಳೆ ವಾಷಿಂಗ್ಟನ್ ಸ್ಟೇಟ್ ಕಾನೂನಿನಡಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಮಗೆ ಸಾಕಷ್ಟು ಸಾಕ್ಷ್ಯಗಳು ದೊರೆತಿಲ್ಲ” ಎಂದು ಕಿಂಗ್‌ ಕೌಂಟಿ ಪ್ರಾಸಿಕ್ಯೂಟರ್‌ ಲೀಸಾ ಮ್ಯಾನಿಯನ್ ತಿಳಿಸಿದ್ದಾರೆ.

ಘಟನೆಯ ಬಾಡಿಕ್ಯಾಮ್‌ ಫೂಟೇಜ್‌ನಲ್ಲಿ ಸಿಯಾಟಲ್‌ ಪೊಲೀಸ್‌ ಇಲಾಖೆಯ ಅಧಿಕಾರಿ ಡೇನಿಯಲ್‌ ಆಡೆರರ್‌ ಈ ಅಪಘಾತವನ್ನು ಗೌಣವಾಗಿ ಪರಿಗಣಿಸಿದ್ದರಲ್ಲದೆ, ಕೆವಿನ್‌ ಡೇವ್‌ ಅವರು ತಪ್ಪು ಮಾಡಿದ್ದಾರೆಂಬ ವಾದವನ್ನು ಅಲ್ಲಗಳೆದಿದ್ದರು ಹಾಗೂ ಕ್ರಿಮಿನಲ್‌ ತನಿಖೆ ಅಗತ್ಯವಿಲ್ಲ ಎಂದಿದ್ದರು. ವಿದ್ಯಾರ್ಥಿನಿ ಸಾವನ್ನಪ್ಪಿರುವುದನ್ನು ಬೊಟ್ಟು ಮಾಡುತ್ತಾ ಡೇನಿಯರ್‌ ನಗುತ್ತಿರುವ ಬಾಡಿಕ್ಯಾಮ್‌ ವಿಡಿಯೋ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು.

ಪೋಲೀಸ್ ಅಧಿಕಾರಿಯ ವಿರುದ್ಧದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಯುಎಸ್ ನ್ಯಾಯಾಲಯದ ನಿರ್ಧಾರವನ್ನು ಬಿಆರ್‌ಎಸ್ ಪಕ್ಷದ ನಾಯಕ ಹಾಗೂ ತೆಲಂಗಾಣದ ಮಾಜಿ ಸಚಿವ ಕೆ.ಟಿ ರಾಮರಾವ್(ಕೆಟಿಆರ್) ಅವರು ‘ಅವಮಾನಕರ’ ಎಂದಿದ್ದಾರೆ. ಯುಎಸ್ ನ್ಯಾಯಾಲಯದ ತೀರ್ಪು ‘ಸ್ವೀಕಾರ್ಹವಲ್ಲ’ ಎಂದಿರುವ ಅವರು, ಪ್ರಕರಣದ ಸ್ವತಂತ್ರ ತನಿಖೆಗೆ ಯುಎಸ್ ಅನ್ನು ಒತ್ತಾಯಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.

ಪ್ರಕರಣದ ಕುರಿತು ಯುಎಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಭಾರತದ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರಿಗೆ ಒತ್ತಾಯಿಸಿರುವ ಕೆಟಿಆರ್, “ಉನ್ನತ ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದ ಯುವತಿಯ ಜೀವವನ್ನು ಬಲಿ ಪಡೆದಿರುವುದು ದುರಂತವಾದರೆ, ಆಕೆಗೆ ನ್ಯಾಯ ಸಿಗದಿರುವುದು ಅದಕ್ಕಿಂತ ದೊಡ್ಡ ದುರಂತ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...